ಬಿಜೆಪಿಗೆ ರಾಜಕೀಯ ಮುಖ್ಯವೇ ಹೊರತು ಜನರ ಸಮಸ್ಯೆಯಲ್ಲ: ಡಿಸಿಎಂ ಡಿ ಕೆ ಶಿವಕುಮಾರ್

Date:

Advertisements
  • ಜನರ ಸಮಸ್ಯೆ ಬಗ್ಗೆ ಆಸಕ್ತಿ ಇಲ್ಲವೆಂದರೆ ನಾವೇನು ಮಾಡೋಕಾಗುತ್ತೆ?
  • ನಾವು ರಾಜ್ಯದ ಅಭಿವೃದ್ಧಿಯತ್ತ ಗಮನ ಹರಿಸುತ್ತೇವೆ: ಡಿ ಕೆ ಶಿವಕುಮಾರ್

ಬಿಜೆಪಿ ನಾಯಕರಿಗೆ ರಾಜಕಾರಣ ಮುಖ್ಯವೇ ಹೊರತು ರಾಜ್ಯದ ಅಭಿವೃದ್ಧಿಯಾಗಲಿ, ಜನರ ಸಮಸ್ಯೆಯಾಗಲಿ ಅಲ್ಲ. ಅವರಿಗೆ ಜನರ ಸಮಸ್ಯೆ ಬಗ್ಗೆ ಆಸಕ್ತಿ ಇಲ್ಲವೆಂದರೆ ನಾವೇನು ಮಾಡೋಕಾಗುತ್ತೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಪ್ರಶ್ನಿಸಿದರು.

ಸುವರ್ಣಸೌಧದ ಆವರಣದಲ್ಲಿ ಶುಕ್ರವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿ, “ಬಿಜೆಪಿ ಹಾಗೂ ಜನತಾದಳದವರಿಗೆ ಜನರ ಸಮಸ್ಯೆ ಬಗ್ಗೆ ಎಷ್ಟು ಕಾಳಜಿ ಇದೆ ಎಂಬುದು ಮುಖ್ಯ. ಆದರೆ ಬಿಜೆಪಿಯವರಿಗೆ ಈ ಬಗ್ಗೆ ಚರ್ಚೆ ಮಾಡಲು ಆಸಕ್ತಿ ಇಲ್ಲದಿದ್ದರೆ ನಾವೇನು ಮಾಡಲು ಸಾಧ್ಯ? ಬಿಜೆಪಿಗೆ ಕೇವಲ ರಾಜಕಾರಣ ಬೇಕು. ಅವರು ರಾಜಕಾರಣ ಮಾಡಿಕೊಂಡಿರಲಿ, ನಾವು ರಾಜ್ಯದ ಅಭಿವೃದ್ಧಿಯತ್ತ ಗಮನ ಹರಿಸುತ್ತೇವೆ” ಎಂದರು.

ಭೋಜನಕೂಟದಲ್ಲಿ ಅನ್ಯ ಪಕ್ಷಗಳ ಶಾಸಕರ ಭಾಗಿ ವಿಚಾರವಾಗಿ ಕೇಳಿದಾಗ, “ಮದುವೆ, ಶುಭ ಸಮಾರಂಭ, ಭೋಜನ ಕೂಟದಲ್ಲಿ ನಾಯಕರು ಪಕ್ಷಾತೀತ ಹಾಗೂ ಜಾತ್ಯತೀತವಾಗಿ ಸೇರುತ್ತಾರೆ. ಅದರಲ್ಲಿ ತಪ್ಪೇನಿದೆ? ಬಿಜೆಪಿಯವರು ನನ್ನ ಜೊತೆ ಮಾತನಾಡುವುದು, ನಮ್ಮ ಪಕ್ಷದ ನಾಯಕರು ಅವರ ಜೊತೆ ಮಾತನಾಡುವುದು ಸಹಜವಾದುದ್ದು. ರಾಜಕೀಯವಾಗಿ ಏನೇ ಭಿನ್ನಾಭಿಪ್ರಾಯವಿದ್ದರೂ ಮನುಷ್ಯರ ನಡುವಣ ಬಾಂಧವ್ಯ ಮುಖ್ಯವಾದುದು” ಎಂದು ಹೇಳಿದರು.‌

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹುಸಿ ದೇಶಭಕ್ತಿಯ ಆಕ್ರೋಶದಲ್ಲಿ ಸುಟ್ಟು ಹೋಗದಿರಲಿ ‘ಅತಿಕ್ರಮಣದ’ ಸಂದೇಶ

“ಸದನದ ಕಲಾಪ ಸಮಯದಲ್ಲೂ ಕೆಲವು ವಿಚಾರಗಳ ಚರ್ಚೆಗೆ ಸಭೆ ಕರೆದಾಗ ವಿರೋಧ ಪಕ್ಷಗಳ ನಾಯಕರನ್ನೂ ಆಹ್ವಾನಿಸುತ್ತೇವೆ. ರಾಜಕೀಯ ಮಾಡಲು ಬಯಸುವವರು ಸಭೆಗೆ ಬರುವುದಿಲ್ಲ. ನಾವು ಸಹಜವಾಗಿ ಭೋಜನ ಕೂಟಕ್ಕೆ ಎಲ್ಲಾ ಶಾಸಕರನ್ನು ಆಹ್ವಾನಿಸುತ್ತೇವೆ. ಕೆಲವರು ಬರುತ್ತಾರೆ, ಕೆಲವರು ನಿರಾಕರಿಸುತ್ತಾರೆ. ನಮಗೆ ಆತ್ಮೀಯರಾಗಿರುವವರನ್ನು ನಾವು ಕರೆಯುತ್ತೇವೆ. ಅದರಲ್ಲಿ ತಪ್ಪೇನಿದೆ” ಎಂದರು.

ಶಾಸಕ ಪ್ರಸಾದ್ ಅಬ್ಬಯ್ಯ ಅವರು ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡುವ ಬಗ್ಗೆ ಪ್ರಸ್ತಾಪ ಮಾಡಿದ ವಿಚಾರವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

Download Eedina App Android / iOS

X