ಹೆಣ್ಣು ಮಕ್ಕಳ ಸುರಕ್ಷತೆ, ಭ್ರೂಣ ಹತ್ಯೆ ತಡೆಗೆ ಇನ್ನಷ್ಟು ಬಿಗಿ ಕ್ರಮ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Date:

ಹೆಣ್ಣು ಭ್ರೂಣ ಹತ್ಯೆ ತಡೆಗೆ ಈಗಾಗಲೇ ಆರೋಗ್ಯ ಇಲಾಖೆ ಕಾರ್ಯಪಡೆಗಳನ್ನ ರಚಿಸಿದ್ದು, ಇನ್ನಷ್ಟು ಬಿಗಿ ಕ್ರಮಗಳನ್ನ ಕೈಗೊಳ್ಳುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಇಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿದರು.

“ರಾಜ್ಯದಲ್ಲಿ ಭ್ರೂಣ ಹತ್ಯೆ ಈ ಪ್ರಮಾಣದಲ್ಲಿ ನಡೆಯುತ್ತಿರುವುದು ಆತಂಕಕಾರಿ ಬೆಳವಣಿಗೆ. ಇದನ್ನ ಸಹಿಸಲು ಸಾಧ್ಯವಿಲ್ಲ. ಇವತ್ತಿನ ಕಾಲಘಟ್ಟದಲ್ಲೂ ಹೆಣ್ಣು ಮಕ್ಕಳ ಸುರಕ್ಷತೆ ಬಗ್ಗೆ ನಾವು ಜಾಗೃತಿ ಮೂಡಿಸುವ ಪರಿಸ್ಥಿತಿ ಎದುರಾಗಿದೆ. ಆದರೆ ಸರ್ಕಾರ ಹೆಣ್ಣು ಮಕ್ಕಳ ಸುರಕ್ಷಿತೆಗೆ ಎಲ್ಲ ರೀತಿಯ ಬಿಗಿ ಕ್ರಮಗಳನ್ನ ತೆಗೆದುಕೊಳ್ಳುತ್ತಿದೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಭ್ರೂಣ ಹತ್ಯೆಗಳನ್ನ ತಡೆಯಲು ಈಗಾಗಲೇ ರಾಜ್ಯ ಸರ್ಕಾರ ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಕಾರ್ಯಪಡೆಗಳನ್ನ ರಚಿಸಿದೆ. ಭ್ರೂಣ ಹತ್ಯೆ ನಡೆಸುವವರ ವಿರುದ್ಧ ಆರೋಗ್ಯ ಇಲಾಖೆ ನಡೆಸುತ್ತಿರುವ ಕಾರ್ಯಾಚರಣೆಗಳನ್ನ ಇನ್ನಷ್ಟು ಹೆಚ್ಚಿಸಲಾಗುವುದು. ನಕಲಿ ವೈದ್ಯರು ಹಾಗೂ ಕ್ಲಿನಿಕ್ ಗಳ ಮೇಲೆ ದಾಳಿ ನಡೆಸಲಾಗುತ್ತಿದೆ. ನಕಲಿ ವೈದ್ಯರ ವಿರುದ್ಧದ ಕಾರ್ಯಾಚರಣೆ ಮುಂದುವರಿಸುತ್ತೇವೆ” ಎಂದು ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.‌

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇವೇಗೌಡರ ದೈವಭಕ್ತಿ ಮತ್ತು ಕುಟುಂಬ ಕಲ್ಯಾಣ

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಅಂಗವಾಗಿ ಆರೋಗ್ಯ ಸೌಧದಲ್ಲಿ ಪಿಂಕ್ ಬಲೂನ್ ಗಳನ್ನ ತೇಲಿ ಬಿಡಲಾಯಿತು. ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಅನೀಲ್ ಕುಮಾರ್, ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಸೇರಿದಂತೆ ಸಾವಿರಾರು ಮಹಿಳಾ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ಬೃಹತ್ ಕೇಕ್ ಕಟ್ ಮಾಡುವ ಮೂಲಕ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚಾರಣೆ ಆಚರಿಸಲಾಯಿತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

26/11 ದಾಳಿಯ ಉಗ್ರ ಕಸಬ್‌ನನ್ನು ಗಲ್ಲಿಗೇರಿಸಲು ವಾದ ಮಂಡಿಸಿದ್ದ ವಕೀಲ ಮುಂಬೈ ಕ್ಷೇತ್ರದ ಬಿಜೆಪಿ ಅಭ್ಯರ್ಥಿ

ಮುಂಬೈನ 26/11ರ ಭಯೋತ್ಪಾದನಾ ದಾಳಿಯಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದ್ದ ವಕೀಲ ಉಜ್ವಲ್...

ಕುಮಾರಣ್ಣನ ಜೇಬಲ್ಲಿದ್ದ ‘ಪೆನ್‌ಡ್ರೈವ್‌’ನಲ್ಲಿ ಏನಿತ್ತು ಎಂಬುದು ಈಗ ಗೊತ್ತಾಯ್ತು: ಡಿ ಕೆ ಶಿವಕುಮಾರ್

ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಜೆಡಿಎಸ್ ಸಂಸದ ಹಾಗೂ ಹಾಸನ...

‘ಬರ ಪರಿಹಾರ ಸಾಕು’ ಎಂದಿರುವ ಕುಮಾರಸ್ವಾಮಿ ನಾಡದ್ರೋಹಿ: ಡಿಸಿಎಂ ಡಿಕೆಶಿ ವಾಗ್ದಾಳಿ

"ಕೇಂದ್ರ ಸರ್ಕಾರ ಕರ್ನಾಟಕದ ಬರಕ್ಕೆ ಅಲ್ಪ ಪರಿಹಾರ ಮೊತ್ತ ಘೋಷಿಸಿದ್ದು, ನಾವು...