ಹರಿಯಾಣ | ದಲಿತ ಐಪಿಎಸ್ ಅಧಿಕಾರಿ ಆತ್ಮಹತ್ಯೆ; ಬಿಜೆಪಿಯ ‘ಮನುವಾದಿ’ ವ್ಯವಸ್ಥೆಯ ಪರಿಣಾಮ: ಮಲ್ಲಿಕಾರ್ಜುನ ಖರ್ಗೆ

Date:

ಇತ್ತೀಚೆಗೆ ಹರಿಯಾಣದಲ್ಲಿ ನಡೆದ ದಲಿತ ಐಪಿಎಸ್ ಅಧಿಕಾರಿಯ ಆತ್ಮಹತ್ಯೆಯು ಆಡಳಿತಾರೂಢ ಬಿಜೆಪಿಯ ‘ಮನುವಾದಿ’ ವ್ಯವಸ್ಥೆಯಡಿಯಲ್ಲಿ ನಡೆಯುತ್ತಿರುವ ಸಾಮಾಜಿಕ ಅನ್ಯಾಯ, ಅಮಾನವೀಯತೆ ಮತ್ತು ಸೂಕ್ಷ್ಮತೆಯ ಕೊರತೆಗೆ ಸಾಕ್ಷಿಯಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಆರೋಪಿಸಿದ್ದಾರೆ.

- Advertisement -

ಆಡಳಿತದಲ್ಲಿರುವ ಜಾತಿ ತಾರತಮ್ಯ, ಪರಿಶಿಷ್ಟ ಜಾತಿ(ಎಸ್‌ಸಿ) ಪ್ರಾತಿನಿಧ್ಯ, ದೌರ್ಜನ್ಯ ಮತ್ತು ನಿಂದನೆಯ ವಿರುದ್ಧವಾಗಿ ಧ್ವನಿ ಎತ್ತಿದ್ದ, ಈ ಸಂಬಂಧ ದೂರು ದಾಖಲಿಸಿದ್ದ ಹರಿಯಾಣದ ಐಪಿಸ್‌ ಅಧಿಕಾರಿ ಪೂರಣ್ ಕುಮಾರ್ ಅವರು ಇತ್ತೀಚೆಗೆ ಶವವಾಗಿ ಪತ್ತೆಯಾಗಿದ್ದಾರೆ. ಅಧಿಕಾರಿಯು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾಗೆಯೇ ಡೆತ್ ನೋಟ್ ಕೂಡಾ ಬರೆದಿಟ್ಟಿದ್ದಾರೆ. ಹಿರಿಯ ಅಧಿಕಾರಿಗಳಿಂದ ಕಿರುಕುಳದ ಆರೋಪ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇದನ್ನು ಓದಿದ್ದೀರಾ? ಜಾತಿ ತಾರತಮ್ಯದ ವಿರುದ್ಧ ಧ್ವನಿ ಎತ್ತಿದ್ದ ಹರಿಯಾಣ ದಲಿತ ಐಪಿಎಸ್ ಅಧಿಕಾರಿ ಶವವಾಗಿ ಪತ್ತೆ: ಆತ್ಮಹತ್ಯೆ ಶಂಕೆ

ಈ ಪ್ರಕರಣದ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಮಲ್ಲಿಕಾರ್ಜುನ ಖರ್ಗೆ ಅವರು, “ಬಿಜೆಪಿಯ ಮನುವಾದಿ ತಂತ್ರವು ದೇಶದ ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಹಿಂದುಳಿದ ವರ್ಗದ ಜನರಿಗೆ ಶಾಪವಾಗಿದೆ. ಹರಿಯಾಣದ ಐಪಿಎಸ್ ಅಧಿಕಾರಿ ಪೂರಣ್ ಕುಮಾರ್ ಅವರ ಬಲವಂತದ ಆತ್ಮಹತ್ಯೆಯು ನಮ್ಮನ್ನು ಕೇವಲ ಸ್ತಬ್ಧರನ್ನಾಗಿಸುವ ಪ್ರಕರಣವಲ್ಲ. ಬದಲಾಗಿ ಸಾಮಾಜಿಕ ಅನ್ಯಾಯ, ಅಮಾನವೀಯತೆ ಮತ್ತು ಸೂಕ್ಷ್ಮತೆಯ ಕೊರತೆಗೆ ಸಾಕ್ಷಿಯಾಗಿದೆ. ಅಧಿಕಾರಿಯ ಕುಟುಂಬಕ್ಕೆ ನನ್ನ ಸಂತಾಪಗಳು” ಎಂದು ತಿಳಿಸಿದ್ದಾರೆ.

“ಕಳೆದ 11 ವರ್ಷದ ಅವಧಿಯಲ್ಲಿ ದೇಶದಲ್ಲಿ ಬಿಜೆಪಿಯು ಮನುವಾದಿ ಮನಸ್ಥಿತಿಯನ್ನು ಜನರಲ್ಲಿ ಎಷ್ಟು ಗಾಢವಾಗಿ ಬೇರೂರುವಂತೆ ಮಾಡಿದೆ ಎಂದರೆ ಎಡಿಜಿಪಿ ರ‍್ಯಾಂಕ್‌ನ ದಲಿತ ಅಧಿಕಾರಿಗಳಿಗೂ ನ್ಯಾಯ ಸಿಗದಂತಹ ಸ್ಥಿತಿಯಿದೆ” ಎಂದು ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ದೇಶದ ಮುಖ್ಯ ನ್ಯಾಯಮೂರ್ತಿ(ಸಿಜೆಐ) ಮೆಲೆ ಹಲ್ಲೆ ನಡೆದಿದೆ. ಅದನ್ನು ಬಿಜೆಪಿಯು ಜಾತಿವಾದ ಮತ್ತು ಧರ್ಮದ ಆಧಾರದಲ್ಲಿ ಸರ್ಮಥಿಸಿಕೊಳ್ಳುತ್ತಿದೆ. ಹಾಗಿರುವಾಗ ಸಬ್‌ಕಾ ಸಾಥ್(ಎಲ್ಲರೊಂದಿಗೆ) ಎಂಬ ಬಿಜೆಪಿಯ ಘೋಷಣೆ ಬರೀ ಬಾಯಿ ಮಾತಿಗೆ ಸೀಮಿತ ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು” ಎಂದು ಕಾಂಗ್ರೆಸ್ ಅಧ್ಯಕ್ಷರು ಹೇಳಿದ್ದಾರೆ.

“ಸಾವಿರಾರು ವರ್ಷಗಳಿಂದ ಶೋಷಣೆ ಮಾಡುವ ಅಭ್ಯಾಸ ಹೊಂದಿರುವ ಮನುವಾದಿಗಳ ಮಾನಸಿಕತೆಯನ್ನು ಅಷ್ಟು ಶೀಘ್ರದಲ್ಲಿ ಬದಲಾಯಿಸಲು ಸಾಧ್ಯವಿಲ್ಲ. ಆದ್ದರಿಂದಾಗಿ ಹರಿಓಂ ವಾಲ್ಮೀಕಿಯಂತಹ ದಲಿತ ವ್ಯಕ್ತಿಯ ಹತ್ಯೆ ಮಾಡಲಾಗುತ್ತದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಮಾತ್ರ ಒಂದು ಮಾತೂ ಆಡಲ್ಲ” ಎಂದು ಖರ್ಗೆ ಟೀಕಿಸಿದ್ದಾರೆ.

“ಇದು ಬರೀ ಕೆಲವು ಜನರ ದುರಂತದ ಸ್ಥಿತಿಯಲ್ಲ. ಇದು ಬಿಜೆಪಿ ಮತ್ತು ಸಂಘಪರಿವಾರದಿಂದ ಪೋಷಿಸಲ್ಪಟ್ಟ ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ. ದಲಿತ, ಆದಿವಾಸಿ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ವರ್ಗದ ಗೌರವಕ್ಕೆ ಪದೇ ಪದೇ ಧಕ್ಕೆ ತರಲಾಗುತ್ತಿದೆ. ಇದು ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಒಡ್ಡಿರುವ ಅಪಾಯ” ಎಂದೂ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಇಬ್ಬರು ಕೇಂದ್ರ ಸಚಿವರಿಗೆ ಕೊಕ್

ಉತ್ತರ ಪ್ರದೇಶದಿಂದ ತೆರವಾಗಲಿರುವ ಎಂಟು ರಾಜ್ಯಸಭಾ ಸ್ಥಾನಗಳಿಗೆ ಬಿಜೆಪಿ ಸೋಮವಾರ (ಅ....

ಆರೋಪಿಯ IQ ಕಡಿಮೆ ಇದ್ದ ಮಾತ್ರಕ್ಕೆ ವಿಚಾರಣೆಯಿಂದ ಹೊರಗಿಡಲು ಸಾಧ್ಯವಿಲ್ಲ: ಕೇರಳ ಹೈಕೋರ್ಟ್

ಕಡಿಮೆ ಬುದ್ಧಿಮತ್ತೆ (IQ) ಅಥವಾ ಬೌದ್ಧಿಕ ಅಸಮರ್ಥತೆ ಇದೆ ಎಂಬ ಕಾರಣವೊಂದರಿಂದಲೇ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ; NSUIನಿಂದ ವಿನೂತನ ‘ಜೀವಂತ ಶವ’ ಪ್ರತಿಭಟನೆ

ಮತದಾರರ ಹಕ್ಕುಗಳು ಮತ್ತು ಚುನಾವಣಾ ಪ್ರಕ್ರಿಯೆಯ ಮೇಲಿನ ಬೆದರಿಕೆಗಳನ್ನು ಖಂಡಿಸಿ, ಮುಖ್ಯ...

ಗ್ರೇಟ್ ನಿಕೋಬಾರ್ ಯೋಜನೆ: ಕಲ್ಕತ್ತಾ ಹೈಕೋರ್ಟ್ ವಿಚಾರಣೆಗೆ ತಡೆ ನೀಡಲು ಸುಪ್ರೀಂ ನಕಾರ

"ಸಂಸ್ಕೃತಿಯ ರಕ್ಷಣೆಯು ಸಂವಿಧಾನದಿಂದ ರಕ್ಷಿಸಲ್ಪಟ್ಟ ಮೂಲಭೂತ ಹಕ್ಕಾಗಿದೆ" ಎಂದು ಸುಪ್ರೀಂ ಕೋರ್ಟ್...