ಅಕ್ರಮ ರೆಸಾರ್ಟ್, ಹೋಂ ಸ್ಟೇ ತೆರವಿಗೆ ‘ಅತೀ ಜರೂರು’ ವರದಿ ಸಲ್ಲಿಸಲು ಅರಣ್ಯ ಇಲಾಖೆ ಸೂಚನೆ

Date:

Advertisements

2015ರ ನಂತರ ರಾಜ್ಯದ ಪಶ್ಚಿಮಘಟ್ಟ ಮತ್ತು ಇತರ ಘಟ್ಟ ಪ್ರದೇಶದಲ್ಲಿ ಅರಣ್ಯ ಒತ್ತುವರಿ ಮಾಡಿ ನಿರ್ಮಿಸಿರುವ ಅಕ್ರಮ ರೆಸಾರ್ಟ್, ಹೋಂ ಸ್ಟೇ, ತೋಟ, ಬಡಾವಣೆ ಹಾಗೂ ಇನ್ನಿತರ ಅರಣ್ಯ ಒತ್ತುವರಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಪರಿಶೀಲಿಸಿ ವಸ್ತು ನಿಷ್ಠ ಮಾಹಿತಿಯನ್ನು ಕೂಡಲೇ ಸಲ್ಲಿಸಬೇಕು ಎಂದು ರಾಜ್ಯದ ಎಲ್ಲ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಗೆ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸೂಚಿಸಿದ್ದಾರೆ.

ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜಗರ, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು ಹಾಗೂ ಹಾಸನ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟದ ಎಲ್ಲ ಗಿರಿ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಬಡಾವಣೆ, ತೋಟ, ಹೋಂ ಸ್ಟೇ ಮತ್ತು ರೆಸಾರ್ಟ್‌ಗಳ ತೆರವಿಗೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಆಗಸ್ಟ್‌ 2ರನದು ಸೂಚಿಸಿದ್ದರು.

“ರಾಜ್ಯದ ಶಿರೂರು ಬಳಿ ಸಂಭವಿಸಿದ ಗುಡ್ಡ ಕುಸಿತದಲ್ಲಿ 11 ಅಮೂಲ್ಯ ಜೀವಗಳು ಬಲಿಯಾಗಿದ್ದರೆ, ನೆರೆ ರಾಜ್ಯ ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಗುಡ್ಡ ಕುಸಿತದಲ್ಲಿ 250 ಮುಗ್ಧ ಜನರು ಮೃತಪಟ್ಟಿದ್ದಾರೆ. 200ಕ್ಕೂ ಹೆಚ್ಚು ಜನರು ಕಣ್ಮರೆಯಾಗಿರುವುದು ಅತ್ಯಂತ ನೋವಿನ ಸಂಗತಿ. ಈ ದುರಂತಗಳು ನಮಗೆ ಎಚ್ಚರಿಕೆಯ ಗಂಟೆಯಾಗಿವೆ. ಪಶ್ಚಿಮಘಟ್ಟದಲ್ಲಿ 2015 ರಿಂದೀಚೆಗೆ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸಲು ತಕ್ಷಣವೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಒಂದು ತಿಂಗಳೊಳಗೆ ಕೈಗೊಂಡ ಕ್ರಮದ ವಿವರದೊಂದಿಗೆ ಕಡತದಲ್ಲಿ ವರದಿ ಸಲ್ಲಿಸಬೇಕು” ಎಂದು ಸಚಿವರು ಸೂಚಿಸಿದ್ದರು.

Advertisements

ಸಚಿವರ ಸೂಚನೆ ಮೇರೆಗೆ ಅರಣ್ಯ ಇಲಾಖೆಯ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅವರು ‘ಅತೀ ಜರೂರು’ ಎಂದು ಟಿಪ್ಪಣಿ ಹೊರಡಿಸಿ ವರದಿ ಸಲ್ಲಿಸಲು ರಾಜ್ಯದ ಎಲ್ಲ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಗೆ ನಿರ್ದೇಶನ ನೀಡಿದ್ದಾರೆ.

ಅರಣ್ಯ 2
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X