ಭಯೋತ್ಪಾದನಾ ಚಟುವಟಿಕೆ ನಿಯಂತ್ರಣಕ್ಕೆ ಟಾಸ್ಕ್‌ ಫೋರ್ಸ್‌ ರಚಿಸಿ: ಆರ್‌.ಅಶೋಕ್ ಆಗ್ರಹ

Date:

‌ಭಯೋತ್ಪಾದಕರು ಬಿಜೆಪಿ ಕಚೇರಿಯಲ್ಲಿ ಬಾಂಬ್‌ ಸ್ಫೋಟಿಸುವ ಸಂಚು ಮಾಡಿದ್ದು ಅತ್ಯಂತ ಖಂಡನೀಯ. ಉಗ್ರ ಚಟುವಟಿಕೆ ನಿಯಂತ್ರಣಕ್ಕೆ ಕಾಂಗ್ರೆಸ್‌ ಸರ್ಕಾರ ವಿಶೇಷ ಟಾಸ್ಕ್‌ ಫೋರ್ಸ್‌ ರಚಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹಿಸಿದರು.

- Advertisement -

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಐಟಿ, ಬಿಟಿ ರಾಜಧಾನಿ ಬೆಂಗಳೂರಿನಲ್ಲಿ ಭಯದ ವಾತಾವರಣ ಸೃಷ್ಟಿಸಿ ಆರ್ಥಿಕತೆಯನ್ನು ನಾಶ ಮಾಡಬೇಕೆಂದು ಭಯೋತ್ಪಾದಕರು ಯೋಜನೆ ರೂಪಿಸಿದ್ದರು. ಇದಕ್ಕೆ ಪೂರಕವಾಗಿ ಕಾಂಗ್ರೆಸ್‌ನ ವಿಧಾನಪರಿಷತ್‌ ಸದಸ್ಯರೊಬ್ಬರು, ಬಾಂಗ್ಲಾ ಮಾದರಿ ಹಲ್ಲೆ ಮಾಡಲಾಗುವುದು ಎಂದು ಬೆದರಿಕೆ ಹಾಕಿದ್ದರು. ಬಾಂಗ್ಲಾದೇಶದಿಂದಲೂ ಹಲವರು ಆಧಾರ್‌ ಕಾರ್ಡ್‌ ಪಡೆದು ಬೆಂಗಳೂರಿಗೆ ಬರುತ್ತಿದ್ದಾರೆ. ಇದರಿಂದ ಭಯೋತ್ಪಾದನಾ ಚಟುವಟಿಕೆ ಹೆಚ್ಚುತ್ತಿದೆ. ರಾಜ್ಯ ಗೃಹ ಇಲಾಖೆ ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇದಕ್ಕಾಗಿ ವಿಶೇಷ ಟಾಸ್ಕ್‌ ಫೋರ್ಸ್‌ ರಚಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ರಾಜ್ಯಕ್ಕೆ ನುಸುಳುವ ಬಾಂಗ್ಲಾ ಪ್ರಜೆಗಳನ್ನು ಕೂಡಲೇ ಪತ್ತೆ ಮಾಡಿ ಅವರನ್ನು ಹೊರಕ್ಕೆ ಹಾಕುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕಿದೆ. ಇಲ್ಲವಾದರೆ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನ ಸ್ಥಿತಿಯೇ ರಾಜ್ಯಕ್ಕೂ ಬರಲಿದೆ. ನಮ್ಮ ರಾಜ್ಯದ ಜನರ ಬದುಕು ಭಯೋತ್ಪಾದಕರ ನಿಯಂತ್ರಣಕ್ಕೆ ಹೋಗಬಾರದು. ಸ್ಲೀಪರ್‌ ಸೆಲ್‌ಗಳನ್ನು ಪತ್ತೆ ಮಾಡುವ ಕೆಲಸವನ್ನು ಸರ್ಕಾರ ಮಾಡಬೇಕು” ಎಂದರು.

“ವಿಧಾನಸೌಧದಲ್ಲೇ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಕಾಂಗ್ರೆಸ್‌ ಸಚಿವರು ನಿರಾಕರಿಸಿದ್ದರು. ಪದೇ ಪದೆ ಭಯೋತ್ಪಾದಕರಿಗೆ ಪ್ರೇರಣೆಯಾಗುವ ಹೇಳಿಕೆಗಳನ್ನು ಕಾಂಗ್ರೆಸ್‌ ನಾಯಕರು ನೀಡಿದ್ದಾರೆ. ಇದರಿಂದಾಗಿ ಭಯೋತ್ಪಾದನೆಗೆ ಕುಮ್ಮಕ್ಕು ದೊರೆತಿದೆ. ಕರ್ನಾಟಕದಲ್ಲೇ ಭಯೋತ್ಪಾದನೆ ಮಾಡಿದರೆ ಏನೂ ತೊಂದರೆ ಇಲ್ಲ ಎಂದು ಭಯೋತ್ಪಾದಕರಿಗೆ ಅನ್ನಿಸಿದೆ. ಇದಕ್ಕಾಗಿ ಇಲ್ಲಿ ಹೆಚ್ಚು ಉಗ್ರ ಚಟುವಟಿಕೆ ನಡೆಯುತ್ತಿದೆ” ಎಂದು ದೂರಿದರು.

“ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭಯೋತ್ಪಾದಕರಿಗೆ ಭಯವೇ ಇಲ್ಲ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟವಾದಾಗ, ಇದು ವ್ಯಾಪಾರ ವ್ಯಾಜ್ಯ ಎಂದು ಸಚಿವರು ಹೇಳಿದ್ದರು. ಇದರಿಂದಾಗಿಯೇ ಭಯೋತ್ಪಾದನಾ ಚಟುವಟಿಕೆ ವ್ಯವಸ್ಥಿತವಾಗಿ ನಡೆಯುತ್ತಿದೆ. ರಾಮೇಶ್ವರಂ ಕೆಫೆ ಬದಲಾಗಿ ಬಿಜೆಪಿ ಕಚೇರಿಯಲ್ಲಿ ಬಾಂಬ್‌ ಸ್ಫೋಟಿಸಬೇಕೆಂದು ಯೋಜನೆ ರೂಪಿಸಲಾಗಿತ್ತು. ಈ ಪ್ರಕರಣದಲ್ಲಿ ಹಿಂದೂಗಳ ಮೇಲೆ ದಾಳಿ ನಡೆಸಲು ಪ್ಲ್ಯಾನ್‌ ಮಾಡಲಾಗಿತ್ತು” ಎಂದರು.

ಕಾಂಗ್ರೆಸ್‌ ನಾಯಕರಿಗೆ ಹೆಚ್ಚು ವಿಶ್ವಾಸ

“ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರದಲ್ಲಿ ಬಿಜೆಪಿಗಿಂತಲೂ ಕಾಂಗ್ರೆಸ್‌ ನಾಯಕರಿಗೆ ಹೆಚ್ಚಿನ ವಿಶ್ವಾಸವಿದೆ. ಅದಕ್ಕಾಗಿ ಸಿಎಂ ಕುರ್ಚಿಗೆ ಸ್ಪರ್ಧೆ ಹೆಚ್ಚಿದ್ದು, ಎಲ್ಲರೂ ಮುಖ್ಯಮಂತ್ರಿಯಾಗುತ್ತೇನೆಂದು ಹೇಳುತ್ತಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ” ಎಂದು ದೂರಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...