ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ನೀಡಲಾಗುವ ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿಗೆ ಓರ್ವ ಪತ್ರಕರ್ತರನ್ನು ಆಯ್ಕೆ ಮಾಡಲು ನಿವೃತ್ತ ನ್ಯಾಯಮೂರ್ತಿಗಳ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿ ರಚಿಸಿ ಸರ್ಕಾರ ಆದೇಶಿಸಿದೆ.
2024-25ನೇ ಸಾಲಿನ ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿಗೆ ಅರ್ಹ ಪತ್ರಕರ್ತರನ್ನು ಆಯ್ಕೆ ಮಾಡಬೇಕಿದ್ದು, ನಿವೃತ್ತ ನ್ಯಾಯಮೂರ್ತಿ ಅಶೋಕ್ ಬಿ ಹಿಂಚಿಗೇರಿ ಅವರನ್ನು ಆಯ್ಕೆ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಸಿಎಂ ಸಿದ್ದರಾಮಯ್ಯ ಅವರ ಮಾಜಿ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು, ಚಿತ್ರದುರ್ಗದ ಕ.ಮ ರವಿಶಂಕರ್, ಸುವರ್ಣ ನ್ಯೂಸ್‌ನ ಸುದ್ದಿ ಸಂಪಾದಕಿ ಎಂ ಸಿ ಶೋಭ, ಹುಬ್ಬಳ್ಳಿಯ ಜೆ ಅಬ್ಬಾಸ್ ಮುಲ್ಲಾ, ಶಿವಮೊಗ್ಗದ ಎನ್ ರವಿಕುಮಾರ್, ವಾರ್ತಾ ಇಲಾಖೆ ಆಯುಕ್ತರು ಮತ್ತು ಜಂಟಿ ನಿರ್ದೇಶಕರು ಆಯ್ಕೆ ಸಮಿತಿಯಲ್ಲಿ ಸದಸ್ಯರಾಗಿದ್ದಾರೆ.
