ಸಂಘಟನೆಗಳ ಮೇಲಿನ ಪ್ರಕರಣ ಹಿಂಪಡೆಯಲು ಪರಮೇಶ್ವರ್‌ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪಸಮಿತಿ ರಚನೆ

Date:

Advertisements

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹೋರಾಟ ನಡೆಸಿದ ರೈತರು, ದಲಿತ ಸಂಘಟನೆಗಳ ಕಾರ್ಯಕರ್ತರು ಕನ್ನಡಪರ ಹೋರಾಟಗಾರರು ಹಾಗೂ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಹಿಂಪಡೆಯಲು ಸರ್ಕಾರ ಚಿಂತನೆ ನಡೆಸಿದೆ.

ಈ ಕುರಿತಂತೆ ಮಾಹಿತಿ ನೀಡಿದ ಗೃಹಸಚಿವ ಡಾ.ಜಿ.ಪರಮೇಶ್ವರ್, “ಇದಕ್ಕಾಗಿ ತಮ್ಮ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪಸಮಿತಿ ರಚಿಸಲಾಗಿದೆ. ಅಲ್ಲಿ ಪರಿಶೀಲನೆ ನಡೆಸಲಾಗುವುದು” ಎಂದು ಮಂಗಳವಾರ ಸುದ್ದಿಗಾರರಿಗೆ ಹೇಳಿದರು.

“ರಾಜ್ಯಾದ್ಯಂತ 400ಕ್ಕೂ ಹೆಚ್ಚು ಅರ್ಜಿಗಳು ಪ್ರಕರಣವನ್ನು ಹಿಂಪಡೆಯುವ ಸಲುವಾಗಿ ಬಂದಿವೆ. ಇದರಲ್ಲಿ ಸ್ಪಷ್ಟವಾದ ಮಾರ್ಗಸೂಚಿ ಪಾಲನೆ ಮಾಡಲಾಗುವುದು. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಎಂಬ ಆದ್ಯತೆಗಳಿರುವುದಿಲ್ಲ” ಎಂದು ತಿಳಿಸಿದರು.

Advertisements

“ಪೊಲೀಸ್ ಅಧಿಕಾರಿಗಳು ಪ್ರಕರಣ ಹಿಂಪಡೆಯ ಬಹುದೇ ಅಥವಾ ಬೇಡವೇ ಎಂಬುದರ ಬಗ್ಗೆ ಸ್ಪಷ್ಟ ಶಿಫಾರಸ್ಸಿನೊಂದಿಗೆ ಕಡತ ಮಂಡಿಸಲಿದ್ದಾರೆ. ಉಪಸಮಿತಿ ಅದನ್ನು ಪರಿಶೀಲಿಸಲಿದೆ. ಸೂಕ್ತವಾಗಿದ್ದರೆ ಹಿಂಪಡೆಯುವ ಬಗ್ಗೆ ಪ್ರಕ್ರಿಯೆ ಮುಂದುವರೆಸಲು ಸಂಪುಟಕ್ಕೆ ಶಿಫಾರಸ್ಸು ಮಾಡಲಾಗುವುದು. ಇಲ್ಲವಾದರೆ ಪ್ರಕರಣವನ್ನು ಮುಂದುವರೆಸಲು ಪೊಲೀಸರಿಗೆ ಸೂಚಿಸಲಾಗುವುದು” ಎಂದರು.

“ರಾಜ್ಯಾದ್ಯಂತ ಇರುವ ಬಾಕಿ ಪ್ರಕರಣಗಳನ್ನು ಇತ್ಯರ್ಥಪಡಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ. ಎಲ್ಲ ಜಿಲ್ಲೆಗಳ ಎಸ್ಪಿಗಳು, ನಗರ ಪ್ರದೇಶದ ಆಯುಕ್ತರು ಪರಿಶೀಲನೆ ನಡೆಸುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ಪರಿಶೀಲನೆ ನಡೆಸುವಾಗ 32 ಪ್ರಕರಣಗಳು ಕಂಡುಬಂದಿವೆ. ಅದರಲ್ಲಿ ರಾಮ ಜನ್ಮಭೂಮಿ ಹೋರಾಟ ಪ್ರಕರಣದಲ್ಲಿ ಭಾಗಿಯಾದವರೂ ಸೇರಿದ್ದಾರೆ. ಆದರೆ ಅದೊಂದೇ ಪ್ರಕರಣವನ್ನು ನಾವು ಕೆದಕಿಲ್ಲ. ರಾಜ್ಯಾದ್ಯಂತ ಪರಿಶೀಲನೆ ನಡೆಯುವಾಗ ಹುಬ್ಬಳ್ಳಿ ಪ್ರಕರಣವೂ ಕಂಡುಬಂದಿದೆ. ಅಯೋಧ್ಯೆ ರಾಮಮಂದಿರ ಉದ್ಘಾಟನೆ ವೇಳೆ ಇದು ಕಂಡುಬಂದಿರುವುದು ಕಾಕತಾಳೀಯವಷ್ಟೇ” ಎಂದು ಸ್ಪಷ್ಟಪಡಿಸಿದರು.

“ಬಿಜೆಪಿಯವರು ಇದನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಹಳೆಯ ಪ್ರಕರಣಗಳಲ್ಲಿ ಆರೋಪಿಗಳು ಖುಲಾಸೆಯಾದರೂ ಆಗಬೇಕು, ಶಿಕ್ಷೆಗಾದರೂ ಒಳಗಾಗಬೇಕು. ಎಷ್ಟು ದಿನ ಎಂದು ಅವು ಬಾಕಿ ಪ್ರಕರಣಗಳಲ್ಲಿ ನನೆಗುದಿಯಲ್ಲಿರಲು ಸಾಧ್ಯ. ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಮುಖಂಡರೂ ಕೂಡ ಅಧಿಕಾರ ನಡೆಸಿದ್ದಾರೆ. ಅವರಿಗೆ ಈ ವಿಚಾರ ಗೊತ್ತಿಲ್ಲವೇ” ಎಂದು ತಿರುಗೇಟು ನೀಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೊಸವರ್ಷದ ಹೊಸ್ತಿಲಲ್ಲಿ ನಮ್ಮನ್ನಗಲಿದ ನಿಜಾಯತಿಯ ಪತ್ರಕರ್ತ ಜಾನ್ ಪಿಲ್ಜರ್

ಕ್ರಿಯಾ ಯೋಜನೆ

“ಇದಕ್ಕೂ ಮುನ್ನ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕರ್ನಾಟಕವನ್ನು “ಮಾದಕದ್ರವ್ಯ ಮುಕ್ತ” ರಾಜ್ಯವನ್ನಾಗಿಸುವುದು ಪ್ರಮುಖ ಗುರಿಯಾಗಬೇಕು.ಇದಕ್ಕಾಗಿ ಕ್ರಿಯಾ ಯೋಜನೆ’ ರೂಪಿಸಬೇಕು, ಕೆಲವು ದೇಶಗಳ ಪ್ರಜೆಗಳು ಹೆಚ್ಚಾಗಿ ಮಾದಕದ್ರವ್ಯ ಚಟುವಟಿಕೆಗಳಲ್ಲಿ ತೊಡಗುತ್ತಿದ್ದು, ಹಲವು ವರ್ಷಗಳಿಂದ ವಾಸಿಸುತ್ತಿರುವ ಹಾಗೂ ರಾಜ್ಯಕ್ಕೆ ಬರುವ ವಿದೇಶಿ ಪ್ರಜೆಗಳ ಮೇಲೆ ನಿಗಾವಹಿಸಬೇಕು” ಎಂದು ಸೂಚಿಸಿದರು.

“ಪೊಲೀಸ್ ಇ-ಬೀಟ್ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿಭಾಯಿಸಬೇಕು, ಆಯಾ ವಿಭಾಗದಲ್ಲಿ ನಡೆಯುವ ಘಟನೆಗಳಿಗೆ ಡಿಸಿಪಿಗಳು ಜವಾಬ್ದಾರರು, ಹಳೇ ಪ್ರಕರಣಗಳ ಮೇಲೆ ನಿಗಾವಹಿಸಿ” ಎಂದು ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X