ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಚನೆ, ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನ

Date:

Advertisements

ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ರಚಿಸಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು.

ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸಭೆಯಲ್ಲಿ ಮಾತನಾಡಿದರು.

“ವಿಧಾನಸಭೆಯಲ್ಲಿಯೂ ಒಂದು ಸಮಿತಿ ಇರಲಿದ್ದು, ರಾಜ್ಯಮಟ್ಟದಲ್ಲಿ ಅಧ್ಯಕ್ಷರು, ಐದು ಜನ ಉಪಾಧ್ಯಕ್ಷರು ಇರಲಿದ್ದಾರೆ. ಅಧ್ಯಕ್ಷರಾದವರಿಗೆ ಸಂಪುಟ ದರ್ಜೆ ಸ್ಥಾನಮಾನ ಇರಲಿದೆ. ಉಪಾಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನ ನೀಡಲಾಗುವುದು. ಸುಮಾರು 31 ಜನ ಸದಸ್ಯರು ಇರಲಿದ್ದು ಇವರೆಲ್ಲರೂ ಕಾರ್ಯಕರ್ತರು. 31 ಜಿಲ್ಲಾ ಮಟ್ಟದಲ್ಲಿ ಒಬ್ಬ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಹಾಗೂ ಸದಸ್ಯರು ಇರಲಿದ್ದಾರೆ. ಅವರಿಗೆ ಕಚೇರಿ ವ್ಯವಸ್ಥೆ ಹಾಗೂ ಗೌರವಧನ ನೀಡುವ ವ್ಯವಸ್ಥೆ ಆಗಲಿದೆ. ಹಾಗೆಯೇ 50 ಸಾವಿರ ರೂ.ಗಳನ್ನು ಪ್ರತಿ ತಿಂಗಳು ನೀಡಲಾಗುವುದು. 21 ಸದಸ್ಯರು ಇರಲಿದ್ದು, 224 ಕ್ಷೇತ್ರಗಳಲ್ಲಿ ಅಧ್ಯಕ್ಷರು ಹಾಗೂ 11 ಸದಸ್ಯರು ಇರಲಿದ್ದಾರೆ ಇವರಿಗೆ ಗೌರವಧನ ಹಾಗೂ ಸಿಟ್ಟಿಂಗ್ ಫೀಸ್ ಸಹ ಒದಗಿಸಲಾಗುವುದು. ಈ ಮೊತ್ತವನ್ನು ರಾಜ್ಯ ಖಜಾನೆಯಿಂದ ಭರಿಸಲಾಗುವುದು” ಎಂದು ವಿವರಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ; ಮಾಧ್ಯಮದವರ ಪ್ರಶ್ನೆಗೆ ಸಿಡಿಮಿಡಿಗೊಂಡ ಡಿ ಕೆ ಶಿವಕುಮಾರ್‌

“ಸರ್ಕಾರಕ್ಕೆ ಇದು ದೊಡ್ಡ ಹೊರೆಯೇನಲ್ಲ. ಪರಿಣಾಮಕಾರಿಯಾಗಿ ಗ್ಯಾರಂಟಿಗಳ ಅನುಷ್ಠಾನವಾಗಬೇಕು ಎಂಬ ಕಾರಣಕ್ಕೆ 16 ಕೋಟಿ ರೂ.ಗಳನ್ನು ಭರಿಸುತ್ತೇವೆ. ಅಪಪ್ರಚಾರಕ್ಕೆ ಉತ್ತರ ಕೊಡಲು ಈ ಸಮಿತಿಗಳನ್ನು ರಚಿಸಲಾಗುತ್ತಿದೆ” ಎಂದರು.

“ಕಾರ್ಯಕರ್ತರಿಗೆ, ಶಾಸಕರಲ್ಲದವರಿಗೆ, ಸಂಸದರಲ್ಲದವರಿಗೆ, ಸಮಿತಿ ಸದಸ್ಯತ್ವ ದೊರೆಯಲಿದೆ. ವಿವಿಧ ಇಲಾಖೆಗಳ ಸಮಿತಿಗಳನ್ನು ಕೂಡಲೇ ರಚಿಸಲು ಆಯಾ ಇಲಾಖೆಗಳ ಸಚಿವರ ವಿವೇಚನೆಗೆ ಬಿಡಲಾಗಿದೆ. ಹೆಸರುಗಳನ್ನು ಪಡೆಯುವಾಗ, ನಮ್ಮ ಶಾಸಕರು, ಸಂಸದರ ಸಲಹೆ ಪಡೆಯುವಂತೆ ಸೂಚಿಸಿದರು. ಕೆಲವು ಶಾಸಕರಿಗೆ, ವಿಧಾನಸಭೆ ಟಿಕೆಟ್ ದೊರೆಯದವರಿಗೆ ಅವಕಾಶ ಕಲ್ಪಿಸಲಾಗುವುದು. ಎರಡು ವರ್ಷಗಳ ಅವಧಿ ಇರಲಿದೆ. ಕಾರ್ಯಕರ್ತರ ಶ್ರಮದಿಂದ ಪಕ್ಷ ಗಟ್ಟಿಯಾಗಿದೆ” ಎಂದರು.

ಸಕಾರಾತ್ಮಕವಾಗಿರಿ: ಸಿಎಂ ಕಿವಿಮಾತು

“ಚುನಾವಣೆಯನ್ನು ನಾವು ಗೆಲ್ಲಲೇಬೇಕು. ಇಷ್ಟೆಲ್ಲಾ ಮಾಡಿಯೂ ನಾವು ಗೆಲ್ಲದೆ ಹೋದರೆ ಅದು ನಮಗೆ ಹಿನ್ನಡೆಯಾಗಲಿದೆ. 28ಕ್ಕೆ 28 ಸೀಟನ್ನು ಗೆಲ್ಲಬೇಕು. ಕನಿಷ್ಠ 26 ಸೀಟು ಗೆಲ್ಲಬೇಕು. ಜನರ ನಾಡಿಮಿಡಿತ ನಮ್ಮ ಪರವಾಗಿರುವುದರಿಂದ ಅಪಪ್ರಚಾರದಿಂದ ನಾವು ಯಾರೂ ಹತಾಶರಾಗಬಾರದು. ಸಕಾರಾತ್ಮಕವಾಗಿರಬೇಕು” ಎಂದು ಸಿಎಂ ಕಿವಿಮಾತು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಸೌಜನ್ಯ ಹೋರಾಟ ಮುಂದುವರಿಯಲಿದೆ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಧರ್ಮಸ್ಥಳ | ದೂರುದಾರನ ಹಿನ್ನೆಲೆ ತಿಳಿದುಕೊಂಡಿದ್ದರೆ ಸರ್ಕಾರದ ದುಡ್ಡು ಉಳೀತಿತ್ತು: ಆರ್. ಅಶೋಕ್

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂತಿಡಲಾಗಿದೆ ಎಂದು ದೂರು ಕೊಟ್ಟಿದ್ದ ಸಾಕ್ಷಿ ದೂರುದಾರನನ್ನು...

ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಬಂಧಿಸಿದ ಇಡಿ: ನಗದು ಸಹಿತ ಚಿನ್ನಾಭರಣ ವಶಕ್ಕೆ

ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮನೆ, ಕಚೇರಿ ಸೇರಿದಂತೆ 31...

Download Eedina App Android / iOS

X