ಬಿಜೆಪಿ ಸರ್ಕಾರದ ಕೋವಿಡ್ ಅಕ್ರಮ ತನಿಖೆಗೆ ಎಸ್​​ಐಟಿ ರಚನೆ, ಸಚಿವ ಸಂಪುಟ ಸಭೆ ತೀರ್ಮಾನ

Date:

ಕೋವಿಡ್-19 ಅಕ್ರಮದ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿ.ಕುನ್ಹಾ ಆಯೋಗದ ಮಧ್ಯಂತರ ವರದಿ ಮಾಹಿತಿ ಆಧಾರವಾಗಿಸಿಕೊಂಡು ಮುಂದಿನ ತನಿಖೆ ಹಾಗೂ ಕ್ರಮ ವಹಿಸಲು ವಿಶೇಷ ತನಿಖಾ ತಂಡ (ಎಸ್​​ಐಟಿ) ರಚನೆಗೆ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.

- Advertisement -

ಈ ಸಂಬಂಧ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ”ಮಧ್ಯಂತರ ವರದಿ ಪರಿಶೀಲಿಸಿ ರಾಜ್ಯ ಸರ್ಕಾರ ಎಸ್​​ಐಟಿ ರಚಿಸಲು ತೀರ್ಮಾನಿಸಿದೆ. ವರದಿಯಲ್ಲಿನ ಆಧಾರಗಳು, ವಿಷಯ, ಮಾಹಿತಿಯನ್ನು ಆಧಾರವಾಗಿಸಿ ಮುಂದಿನ ತನಿಖೆ ಹಾಗೂ ಕ್ರಮಕ್ಕಾಗಿ ಎಸ್​ಐಟಿ ರಚಿನೆ ಮಾಡಲು ಸಚಿವ ಸಂಪುಟ ತೀರ್ಮಾನಿಸಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಅಗತ್ಯಬಿದ್ದರೆ ಎಫ್​ಐಆರ್ ದಾಖಲಿಸಿ ಕ್ರಮ

”ಮೈಕಲ್ ಡಿ.ಕುನ್ಹಾ ಆಯೋಗದ ವರದಿ ಮೇಲೆ ಕಂಡು ಬಂದ ಅಕ್ರಮಗಳ ಬಗ್ಗೆ ತನಿಖೆ ಮಾಡಲಾಗುವುದು. ಐಜಿ ನೇತೃತ್ವದಲ್ಲಿ ಎಸ್​​ಐಟಿ ರಚನೆ ಮಾಡಲಾಗುತ್ತದೆ. ಆಯೋಗದ ಮಾಹಿತಿ ಆಧಾರದಲ್ಲಿ ತನಿಖೆ ಮಾಡಲಾಗುವುದು. ಎಸ್​​ಐಟಿ ಆರ್ಥಿಕ ಅಂಶಗಳು ಸೇರಿದಂತೆ ಅಪರಾಧ ಪ್ರಕರಣಗಳನ್ನು ದಾಖಲಿಸಿ ಕ್ರಮ ತೆಗದುಕೊಳ್ಳಲಿದೆ. ಅಗತ್ಯಬಿದ್ದರೆ ವರದಿಯ ಮಾಹಿತಿ ಹೊರತಾಗಿ ಮತ್ತೆ ತನಿಖೆ ಮಾಡಿ, ಎಫ್​ಐಆರ್ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು” ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.

”ಕೋವಿಡ್ ವೇಳೆ ರಾಜ್ಯದಲ್ಲಿ ಯಾರು ಅಕ್ರಮ ಮಾಡಿದ್ದಾರೆಯೋ ಅವರ ಮೇಲೆ ಎಫ್ಐಆರ್ ದಾಖಲಿಸಿ ಕ್ರಮ ತೆಗೆದುಕೊಳ್ಳಲಾಗುವುದು. ಸತ್ಯಾನ್ವೇಷಣೆ, ನ್ಯಾಯ ಒದಗಿಸುವ ನಿಟ್ಟಿನಲ್ಲಿ ಮುಂದುವರೆದ ಕ್ರಮವಾಗಿ ಎಸ್ಐಟಿ ರಚನೆ ಮಾಡಲು ತೀರ್ಮಾನಿಸಲಾಗಿದೆ” ಎಂದು ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಯ ಧ್ವಂಸ ಸಂಸ್ಕೃತಿಗೆ ಸುಪ್ರೀಂ ಸುತ್ತಿಗೆ ಏಟು

‘ಕೋವಿಡ್ ವೇಳೆ ರಾಜ್ಯದಲ್ಲಿ ವ್ಯಾಪಕ ಭ್ರಷ್ಟಾಚಾರ, ಬೇಜವಾಬ್ದಾರಿತನ, ವಂಚನೆ ನಡೆದಿತ್ತು. ಮಾಹಿತಿಗಳನ್ನು ಅದಿಮಿಟ್ಟುಕೊಂಡು, ಕಡತ ಸಿಗದಂತೆ ಮಾಡಲಾಗಿತ್ತು. ಪಿಎಸಿ ಕೆಲಸ ಮಾಡದಂತೆ ನಿಯಂತ್ರಣ ಮಾಡಿದ್ದರು. ಎಲ್ಲಾ ವಿಧಾನಮಂಡಲ ಸಮಿತಿಗಳು ಸಭೆ ಸೇರುವುದಕ್ಕೆ ನಿರ್ಬಂಧ ಹೇರಲಾಗಿತ್ತು.‌ ಪಿಪಿಇ ಕಿಟ್ 330-440 ರೂ. ಲಭ್ಯವಿದ್ದರೆ ಅದನ್ನು ಬಿಟ್ಟು 2,017 ರೂ.ಗೆ ಲಕ್ಷಾಂತರ ಕಿಟ್ ಖರೀದಿ ಮಾಡಲಾಗಿದೆ. ದುಪ್ಪಟ್ಟು ದರದಲ್ಲಿ ಹಾಗೂ ಬ್ಲ್ಯಾಕ್ ಲಿಸ್ಟ್​​ನಲ್ಲಿರುವ ಕಂಪನಿಗಳಿಂದ ಖರೀದಿ ಔಷಧಿ ಮಾಡಲಾಗಿದೆ” ಎಂದು ಆರೋಪಿಸಿದರು.

ಬ್ರಹ್ಮಾಂಡ ಭ್ರಷ್ಟಾಚಾರ

”ಕೋವಿಡ್ 19 ಅಕ್ರಮದ ಸಂಬಂಧ ತನಿಖಾ ಆಯೋಗ ನೇಮಕ ಮಾಡಿತ್ತು. 50,000 ಕಡತವನ್ನು ಆಯೋಗ ಪರಿಶೀಲನೆ ನಡೆಸಿ, ಮಧ್ಯಂತರ ವರದಿ ನೀಡಿದೆ. ಆ ವರದಿಯನ್ನು ಅಧ್ಯಯನ ಮಾಡಲು ಸಂಪುಟ ಉಪಸಮಿತಿ ರಚಿಸಲಾಗಿತ್ತು. ಸಂಪುಟ ಉಪಸಮಿತಿ ಸಭೆಯಲ್ಲಿನ ಚರ್ಚೆಗಳನ್ನು ಸಂಪುಟ ಸಭೆಯಲ್ಲಿ ಮಂಡಿಸಲಾಯಿತು. ಕಂಡುಬಂದ ಬ್ರಹ್ಮಾಂಡ ಭ್ರಷ್ಟಾಚಾರ, ಹಲವಾರು ಅಮಾನವೀಯ ಸಂಗತಿ, ಅಧಿಕಾರಿಗಳು ರಾಜಕೀಯ ನಾಯಕರ ನಿರ್ದೇಶನದ ಮೇರೆಗೆ ತೆಗೆದುಕೊಂಡ ಕ್ರಮಗಳು ಎಂಥವರಿಗೂ ನಡುಕ ಹುಟ್ಟಿಸುವಂತಿದೆ. ಅಂದು ಸರ್ಕಾರ ನಡೆದುಕೊಂಡ ರೀತಿ, ಅಂದಿನ ಮಂತ್ರಿಗಳು, ಸಿಎಂ ತೆಗೆದುಕೊಂಡ ಕ್ರಮಗಳು ಸತ್ಯಾನ್ವೇಷಣೆಗೆ ಅಡ್ಡಿಯಾಗುವ ಕ್ರಮವಾಗಿದೆ” ಎಂದು ಹೆಚ್.ಕೆ.ಪಾಟೀಲ್​ ದೂರಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

SIR ವಿರುದ್ಧ ರಾಜ್ಯಾದ್ಯಂತ ಹೋರಾಟಕ್ಕೆ INDIA ಮೈತ್ರಿಕೂಟ ಸಜ್ಜು; ಸಮನ್ವಯ ಸಮಿತಿ ರಚನೆಗೆ ನಿರ್ಧಾರ

ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಮತದಾನದ ಹಕ್ಕಿನ ರಕ್ಷಣೆಗಾಗಿ ಕರ್ನಾಟಕದಲ್ಲಿ INDIA ಮೈತ್ರಿಕೂಟದ...

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...