- ಪಿಎಸ್ಐ ಹಗರಣ ಒಳಗೊಂಡಂತೆ ಹಲವು ಅಕ್ರಮಗಳ ತನಿಖೆ
- ಹೊಂದಾಣಿಕೆ ರಾಜಕಾರಣದ ಆರೋಪ ತಪ್ಪಿಸಿಕೊಳ್ಳಲು ಕೈ ಚಿಂತನೆ
ಬಿಜೆಪಿ ಸರ್ಕಾರದ ಅವಧಿಯ ಹಗರಣಗಳ ತನಿಖೆಗಾಗಿ ಎಸ್ಐಟಿ ರಚನೆ ಮಾಡುವ ಇಂಗಿತವನ್ನು ರಾಜ್ಯ ಸರ್ಕಾರ ವ್ಯಕ್ತಪಡಿಸಿದೆ. ಈ ಕುರಿತ ನಿರ್ಧಾರ ವಾರದ ಬಳಿಕ ಪ್ರಕಟಗೊಳ್ಳುವ ಸಾಧ್ಯತೆ ಇದೆ.
ಇಂದಿನ ಸಚಿವ ಸಂಪುಟ ಸಭೆಯಲ್ಲಿ ಎಸ್ಐಟಿ ರಚನೆ ಸಂಬಂಧ ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗೂ ಕೃಷ್ಣಬೈರೇಗೌಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.
ಹಿಂದೆ ನಾವು ಬಿಜೆಪಿ ಅವಧಿಯಲ್ಲಿನ ಹಗರಣಗಳ ಬಗ್ಗೆ ಧ್ವನಿ ಎತ್ತಿದ್ದೇವೆ. ಈಗ ತನಿಖೆ ಮಾಡದಿದ್ದರೆ ಹೊಂದಾಣಿಕೆ ರಾಜಕಾರಣ ಎನ್ನುತ್ತಾರೆ. ಹೀಗಾಗಿ ಕೂಡಲೇ ವಿಶೇಷ ತನಿಖಾ ತಂಡ ರಚಿಸಿ ತನಿಖೆಗೆ ಸೂಚಿಸಿ ಎಂದು ಸಭೆಯಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ, ಕೃಷ್ಣಭೈರೇಗೌಡ ಸಿಎಂಗೆ ಮನವಿ ಮಾಡಿದ್ದಾರೆ.
ಈ ಸುದ್ದಿ ಓದಿದ್ದೀರಾ?:ಸಂಪುಟ ಸಭೆ | ಮತಾಂತರ ನಿಷೇಧ ಕಾಯ್ದೆ, ಪಠ್ಯಪುಸ್ತಕ ಪರಿಷ್ಕರಣೆ, ಎಪಿಎಂಸಿ ಕಾಯ್ದೆ ರದ್ದು ಮಾಡಲು ತೀರ್ಮಾನ
ಇದಕ್ಕೆ ಸಚಿವ ದಿನೇಶ್ ಗುಂಡೂರಾವ್ ಧ್ವನಿಗೂಡಿಸಿದ್ದಾರೆ. ಪ್ರಸ್ತಾವಿತ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಇದರ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ನಿರ್ಧರಿಸೋಣ ಎಂದಿದ್ದಾಗಿ ತಿಳಿದು ಬಂದಿದೆ.