ಕಮಲ ಮುಡಿದ ಆಂಧ್ರಪ್ರದೇಶದ ಮಾಜಿ ಸಿಎಂ ಕಿರಣ್ ಕುಮಾರ್ ರೆಡ್ಡಿ

Date:

ಕೇರಳದ ಮಾಜಿ ಸಿಎಂ ಎಕೆ ಆ್ಯಂಟನಿ ಅವರ ಮಗ ಅನಿಲ್‌ ಆ್ಯಂಟನಿ ಅವರು ಬಿಜೆಪಿ ಸೇರ್ಪಡೆಯಾದ ಮರುದಿನವೇ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಶುಕ್ರವಾರ ಕಮಲ ಮುಡಿದಿದ್ದಾರೆ.

ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಹಾಗೂ ಸಂಸದ ಕೆ ಲಕ್ಷ್ಮಣ್ ಅವರ ಸಮ್ಮುಖದಲ್ಲಿ ರೆಡ್ಡಿ ಬಿಜೆಪಿಗೆ ಸೇರ್ಪಡೆಯಾದರು.

2014ರಲ್ಲಿ ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಯಾಗುವುದಕ್ಕೂ ಮುನ್ನ ಕಿರಣ್ ಕುಮಾರ್ ರೆಡ್ಡಿಅವಿಭಜಿತ ಆಂಧ್ರಪ್ರದೇಶದ ಕೊನೆಯ ಮುಖ್ಯಮಂತ್ರಿಯಾಗಿದ್ದರು. ಕಾಂಗ್ರೆಸ್‌ ಪಕ್ಷದ ಜೊತೆಗಿನ ಭಿನ್ನಾಭಿಪ್ರಾಯದಿಂದಾಗಿ ಮಾರ್ಚ್ 13ರಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದು ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ಅವರು ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದರು.

ಈ ಸುದ್ದಿ ಓದಿದ್ದೀರಾ?: ಪಿಐಬಿ ಮೂಲಕ ಸರ್ಕಾರಿ ವಿರೋಧಿ ‘ನಕಲಿ’ ಸುದ್ದಿಗಳಿಗೆ ಕಡಿವಾಣಕ್ಕೆ ಸಿದ್ಧತೆ

ಆಂಧ್ರ ಪ್ರದೇಶದಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದ್ದು, ಬಿಜೆಪಿಯನ್ನು ಗಟ್ಟಿಗೊಳಿಸಲು ಕಿರಣ್ ನೆರವಾಗಲಿದ್ದಾರೆ ಎಂದು ಕೇಸರಿ ಪಕ್ಷ ನಿರೀಕ್ಷಿಸಿದೆ.

ಕಿರಣ್ ಕುಮಾರ್ ರೆಡ್ಡಿ ಅವರು ಕಾಂಗ್ರೆಸ್ ತೊರೆದಿರುವುದು ಇದು ಮೊದಲಲ್ಲ. ಆಂಧ್ರಪ್ರದೇಶವನ್ನು ವಿಭಜಿಸುವ ಅಂದಿನ ಯುಪಿಎ ಸರ್ಕಾರದ ನಿರ್ಧಾರವನ್ನು ವಿರೋಧಿಸಿ 2014ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.

ಬಳಿಕ ‘ಜೈ ಸಮೈಕ್ಯಂಧ್ರ’ ಎಂಬ ಪಕ್ಷವನ್ನು ಸ್ಥಾಪಿಸಿ 2014ರ ಚುನಾವಣೆಯಲ್ಲಿ ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರು. 2018ರಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿಯಾದ ನಂತರ ಮತ್ತೆ ಕಾಂಗ್ರೆಸ್‌ಗೆ ಸೇರಿದ್ದರು.

2009ರಿಂದ 2010ರವರೆಗೆ ವಿಧಾನಸಭಾ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭ್ರೂಣ ಲಿಂಗ ಪತ್ತೆ ಪ್ರಕರಣ: ಸಿಐಡಿ ತನಿಖೆಗೊಪ್ಪಿಸಿದ ರಾಜ್ಯ ಸರ್ಕಾರ

ರಾಜ್ಯಾದ್ಯಂತ ಭಾರೀ ಸಂಚಲನ ಸೃಷ್ಟಿಸಿರುವ ಭ್ರೂಣ ಲಿಂಗ ಪತ್ತೆ ಪ್ರಕರಣವನ್ನು ರಾಜ್ಯ...

ಪಂಚ ರಾಜ್ಯಗಳ ಎಕ್ಸಿಟ್ ಪೋಲ್: ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ಗೆ ಅಧಿಕಾರ ಸಾಧ್ಯತೆ

ಐದು ರಾಜ್ಯಗಳ ಮತದಾನ ಮುಕ್ತಾಯವಾಗಿದ್ದು ವಿವಿಧ ಸಂಸ್ಥೆಗಳ ಚುನಾವಣೋತ್ತರ ಸಮೀಕ್ಷೆಯ(ಎಕ್ಸಿಟ್ ಪೋಲ್)...

ಆಸ್ಟ್ರೇಲಿಯನ್ ಹೂಡಿಕೆದಾರರಿಗೆ ಸಿಎಂ ಸಿದ್ದರಾಮಯ್ಯ ಆಹ್ವಾನ

ರಾಜ್ಯದ ಮೂಲಸೌಕರ್ಯ ಅಭಿವೃದ್ಧಿ ವಲಯದಲ್ಲಿ ಹೂಡಿಕೆ ಗ್ರೀನ್ ಫೀಲ್ಡ್...

ಸರ್ಕಾರದ ಉಚಿತ ಕೊಡುಗೆಗಳು ಜನರಲ್ಲಿ ಖರೀದಿಸುವ ಶಕ್ತಿ ಹೆಚ್ಚಿಸುತ್ತವೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರಿನಲ್ಲಿ ನಡೆಯುತ್ತಿರುವ ಬೆಂಗಳೂರು ಟೆಕ್‌ ಸಮ್ಮಿಟ್‌ನಲ್ಲಿ ಇನ್ಫೋಸಿಸ್‌ ಸ್ಥಾಪಕಾಧ್ಯಕ್ಷ ನಾರಾಯಣ ಮೂರ್ತಿ...