ಬೆಚ್ಚಿ ಬೀಳಿಸಿದ್ದ ಉನ್ನಾಂವ್ ಅತ್ಯಾಚಾರ: ಯುಪಿಯ ಬಿಜೆಪಿ ನಾಯಕ ಕುಲದೀಪ್‌ ಜೀವಾವಧಿ ಶಿಕ್ಷೆ ಅಮಾನತು!

Date:

2017ರ ಉನ್ನಾಂವ್ ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಯಾಗಿರುವ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್‌ಗೆ ದೆಹಲಿ ಹೈಕೋರ್ಟ್ ಮಂಗಳವಾರ ಜಾಮೀನು ನೀಡಿದೆ. ಹಾಗೆಯೇ ನ್ಯಾಯಮೂರ್ತಿಗಳಾದ ಸುಬ್ರಮೋನಿಯಂ ಪ್ರಸಾದ್ ಮತ್ತು ಹರೀಶ್ ವೈದ್ಯನಾಥನ್ ಶಂಕರ್ ಅವರ ಪೀಠವು, ಕುಲದೀಪ್ ಶಿಕ್ಷೆಯ ವಿರುದ್ಧ ಸಲ್ಲಿಸಿರುವ ಮೇಲ್ಮನವಿ ವಿಚಾರಣೆಯ ಸಮಯದಲ್ಲಿ ಆತನಿಗೆ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದೆ.

- Advertisement -

ಜಾಮೀನಿನ ಅವಧಿಯಲ್ಲಿ ಸಂತ್ರಸ್ತೆಯ ಮನೆಯ 5 ಕಿಲೋಮೀಟರ್ ವ್ಯಾಪ್ತಿಯಲ್ಲಿ ಬರಬಾರದು ಮತ್ತು ದೆಹಲಿಯಲ್ಲಿಯೇ ಇರಬೇಕೆಂದು ಹೈಕೋರ್ಟ್ ಸೆಂಗಾರ್‌ಗೆ ಆದೇಶಿಸಿದೆ. ಪ್ರತಿ ಸೋಮವಾರ ಪೊಲೀಸ್ ಠಾಣೆಗೆ ಹಾಜರಾಗಬೇಕು ಎಂದೂ ಹೈಕೋರ್ಟ್ ತಿಳಿಸಿದೆ. “ಯಾವುದೇ ಷರತ್ತು ಉಲ್ಲಂಘಿಸಿದರೆ ಜಾಮೀನು ರದ್ದುಪಡಿಸಲಾಗುತ್ತದೆ” ಎಂದು ನ್ಯಾಯಾಲಯ ಎಚ್ಚರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಇದನ್ನು ಓದಿದ್ದೀರಾ? ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಮನೆಗೆ ಬೆಂಕಿ; ಆರೋಪಿಗಳಲ್ಲಿ ಬಿಜೆಪಿಯ ಮಾಜಿ ಶಾಸಕನ ಹೆಸರು

2017ರ ಉನ್ನಾಂವ್ ಪ್ರಕರಣವು ಭಾರತದ ನ್ಯಾಯಾಂಗ ಇತಿಹಾಸದಲ್ಲಿ ಅತಿ ಹೆಚ್ಚು ಚರ್ಚೆಗೆ ಗ್ರಾಸವಾದ ಅಪರಾಧ ಪ್ರಕರಣಗಳಲ್ಲಿ ಒಂದಾಗಿದೆ. ಉತ್ತರ ಪ್ರದೇಶದ ಉನ್ನಾಂವ್‌ದ 17 ವರ್ಷದ ಅಪ್ರಾಪ್ತ ಬಾಲಕಿಯನ್ನು 2017ರ ಜೂನ್ 4ರಂದು ಅಂದಿನ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅಪಹರಿಸಿ ಅತ್ಯಾಚಾರ ಮಾಡಿದ್ದು, ಕೆಲಸ ಕೊಡಿಸುವ ನೆಪದಲ್ಲಿ ಬಾಲಕಿಯನ್ನು ಸೆಂಗಾರ್ ಮನೆಗೆ ಕರೆದೊಯ್ಯಲಾಗಿತ್ತು.

ಅಷ್ಟು ಮಾತ್ರವಲ್ಲದೆ ತನ್ನ ಮಗಳಿಗೆ ನ್ಯಾಯಕ್ಕಾಗಿ ಹೋರಾಡುತ್ತಿದ್ದ ಸಂತ್ರಸ್ತೆಯ ತಂದೆಯನ್ನು ಕುಲದೀಪ್ ಸೆಂಗಾರ್‌ನ ಸಹೋದರ ಅತುಲ್ ಸಿಂಗ್ ಮತ್ತು ಇತರರು 2018ರ ಏಪ್ರಿಲ್‌ನಲ್ಲಿ ತೀವ್ರವಾಗಿ ಥಳಿಸಿದ್ದರು. ಪೊಲೀಸರು ಸಂತ್ರಸ್ತೆಯ ತಂದೆಯನ್ನೇ ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಆರೋಪದಲ್ಲಿ ಬಂಧಿಸಿದ್ದರು. 2018ರ ಏಪ್ರಿಲ್ 8ರಂದು ಸಂತ್ರಸ್ತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿವಾಸದ ಮುಂದೆ ಆತ್ಮಹತ್ಯೆಗೆ ಪ್ರಯತ್ನಿಸಿದ ನಂತರ ಪ್ರಕರಣ ರಾಷ್ಟ್ರಮಟ್ಟದ ಗಮನ ಸೆಳೆದಿತ್ತು. ಇದಾದ ಮರುದಿನವೇ ಸಂತ್ರಸ್ತೆಯ ತಂದೆ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಗಂಭೀರ ಗಾಯಗಳಿಂದ ಮೃತಪಟ್ಟಿದ್ದರು.

ಅದಾದ ಬಳಿಕ 2019ರ ಜುಲೈ 28ರಂದು ಸಂತ್ರಸ್ತೆಯ ಸಂಬಂಧಿಕರು ಮತ್ತು ವಕೀಲರು ಪ್ರಯಾಣಿಸುತ್ತಿದ್ದ ಕಾರಿಗೆ ರಾಯಬರೇಲಿಯಲ್ಲಿ ಟ್ರಕ್ ಡಿಕ್ಕಿ ಹೊಡೆದಿತ್ತು. ಈ ಘಟನೆಯಲ್ಲಿ ಸಂತ್ರಸ್ತೆಯ ಇಬ್ಬರು ಮಹಿಳಾ ಸಂಬಂಧಿಕರು ಸಾವನ್ನಪ್ಪಿದರು ಮತ್ತು ಸಂತ್ರಸ್ತೆ ಹಾಗೂ ವಕೀಲರು ಗಂಭೀರವಾಗಿ ಗಾಯಗೊಂಡಿದ್ದರು. ಈ ಎಲ್ಲ ಘಟನೆಗಳು ಕುಲದೀಪ್ ಸಿಂಗ್ ಸಂತ್ರಸ್ತೆಯ ಹತ್ಯೆಗೂ ಸಂಚು ಮಾಡುತ್ತಿರುವ ಸಂಶಯ ಹುಟ್ಟಿಸಿತ್ತು.

ಇದನ್ನು ಓದಿದ್ದೀರಾ? ಬಿಜೆಪಿಗೇಕೆ ವಿಕೃತ ಕಾಮಿಗಳ ಕುರಿತು ಇಷ್ಟೊಂದು ಅಕ್ಕರೆ?; ಇದೇನೂ ಆಶ್ಚರ್ಯವಲ್ಲ

ಈ ಪ್ರಕರಣದಲ್ಲಿ 2019ರ ಡಿಸೆಂಬರ್ 20ರಂದು ದೆಹಲಿಯ ತೀಸ್ ಹಜಾರಿ ನ್ಯಾಯಾಲಯವು ಕುಲದೀಪ್ ಸಿಂಗ್ ಸೆಂಗಾರ್‌ ಅಪರಾಧಿ ಎಂದು ಘೋಷಿಸಿ, ಜೀವಾವಧಿ ಶಿಕ್ಷೆ ಮತ್ತು 25 ಲಕ್ಷ ರೂಪಾಯಿ ದಂಡ ವಿಧಿಸಿತ್ತು. ಹಾಗೆಯೇ ಸಂತ್ರಸ್ತೆಯ ತಂದೆಯ ಸಾವಿನ ಪ್ರಕರಣದಲ್ಲಿ 2020ರ ಮಾರ್ಚ್‌ನಲ್ಲಿ ಸೆಂಗಾರ್ ಸೇರಿದಂತೆ ಏಳು ಜನರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು.

ಇದೀಗ ಶಿಕ್ಷೆಯ ವಿರುದ್ಧ ಕುಲದೀಪ್ ಸಲ್ಲಿಸಿರುವ ಮೇಲ್ಮನವಿ ವಿಚಾರಣೆಯನ್ನು ನಡೆಸಿದ ದೆಹಲಿ ಹೈಕೋರ್ಟ್ ಮೇಲ್ಮನವಿ ವಿಚಾರಣೆಯ ಸಮಯದಲ್ಲಿ ಶಿಕ್ಷೆಯನ್ನು ಅಮಾನತುಗೊಳಿಸಿದೆ. ಸೆಂಗಾರ್ 15 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಒದಗಿಸಬೇಕು. ಸಂತ್ರಸ್ತೆಯ ನಿವಾಸದ 5 ಕಿ.ಮೀ ವ್ಯಾಪ್ತಿಯೊಳಗೆ ಪ್ರವೇಶಿಸಬಾರದು ಮತ್ತು ಸಂತ್ರಸ್ತೆ ಅಥವಾ ಆಕೆಯ ತಾಯಿಯನ್ನು ಯಾವುದೇ ರೀತಿಯಲ್ಲಿ ಸಂಪರ್ಕಿಸಬಾರದು ಎಂದು ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಂಜಾಬ್: ಎಲ್‌ಪಿಯು ‘ವಿವಿ’ಯಲ್ಲಿ ಅತ್ಯಾಚಾರ ಆರೋಪ; ಭುಗಿಲೆದ್ದ ಪ್ರತಿಭಟನೆ, ತರಗತಿಗಳು ರದ್ದು

ಪಂಜಾಬ್‌ನ ಫಗ್ವಾರಾದಲ್ಲಿರುವ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಯಲ್ಲಿ (ಎಲ್‌ಪಿಯು) ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ...

3 ದಿನಗಳ ಬ್ಯಾಂಕ್ ಮುಷ್ಕರ ವಾಪಸ್: ವಾರಕ್ಕೆ 5 ದಿನ ಕೆಲಸದ ಪರಿಶೀಲನೆಗೆ ಸಮಿತಿ

ಸಾರ್ವಜನಿಕ ವಲಯದ ಬ್ಯಾಂಕ್‌ ನೌಕರರ ಒಕ್ಕೂಟವು (ಯುಎಫ್‌ಬಿಯು) ಸೋಮವಾರದಿಂದ ಹಮ್ಮಿಕೊಂಡಿದ್ದ ಮೂರು...

2017ರಲ್ಲಿ ಚುನಾವಣಾ ಆಯೋಗವನ್ನು ನಂಬಿದ್ದೆವು, ಆದರೆ 2022ರಲ್ಲಿ ಎಸ್‌ಪಿ ಮತಗಳನ್ನು ಇಸಿ ಅಳಿಸಿದೆ: ಅಖಿಲೇಶ್ ಆರೋಪ

2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಬೆಂಬಲಿಗರ...

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿಗೆ ‘ಅಲ್ಲಾಹ್ ಮೇಲಕ್ಕೆ ಟಿಕೆಟ್ ಕಾಯ್ದಿರಿಸಲಿ’ – ಹುಮಾಯೂನ್ ವಿವಾದಾತ್ಮಕ ಹೇಳಿಕೆ

ಪಶ್ಚಿಮ ಬಂಗಾಳದ ರೇಜಿನಗರ ಉಪಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ವಾಗ್ದಾಳಿಗಳು ತೀವ್ರ ಸ್ವರೂಪ...