ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅನ್ನು ಹೊಗಳಿ ‘ಜೈ ಶ್ರೀರಾಮ್’ ಎಂದ ಕುಮಾರಸ್ವಾಮಿ!

Date:

ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರು ನಡೆಸುತ್ತಿರುವ ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಶನಿವಾರ ಆಯೋಜಿಸಲಾಗಿದ್ದ ಕ್ರೀಡೋತ್ಸವದಲ್ಲಿ ಅತಿಥಿಯಾಗಿ ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಭಾಗವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ಮಾತನಾಡಿದ ಕುಮಾರಸ್ವಾಮಿ, ಕಲ್ಲಡ್ಕ ಪ್ರಭಾಕರ್ ಭಟ್ ಅನ್ನು ಹೊಗಳಿದ್ದಲ್ಲದೇ ‘ಜೈ ಶ್ರೀರಾಮ್’ ಘೋಷಣೆಯೊಂದಿಗೆ ಮಾತು ಮುಗಿಸಿದ ಪ್ರಸಂಗ ನಡೆದಿದೆ.

“ಹಿಂದೆ ಟೀಕೆ ಮಾಡಿದ್ದೆ, ಈಗ ಮನಸ್ಸು ಪರಿವರ್ತನೆ ಮಾಡಿದ್ದೇನೆ. ಹಿಂದೆ ಕಲ್ಲಡ್ಕ ಪ್ರಭಾಕರ ಭಟ್ ಅವರ ಬಗ್ಗೆ ಹೆಚ್ಚಿನ ಮಾಹಿತಿ ಇರಲಿಲ್ಲ. ಕೆಲವರು ದಾರಿ ತಪ್ಪಿಸುವ ಮಾಹಿತಿ ನೀಡಿದ್ದರು. ಇಂದು ನನ್ನ ಕಣ್ಣು ತೆರೆದಿದೆ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಹಿಂದೆ ಒಂದು ರೀತಿಯಾಗಿ ಮಾತನಾಡುತ್ತಿದ್ದ ಕುಮಾರಸ್ವಾಮಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಹೇಗೆ ಎಂದು ಕೆಲವರು ಯೋಚಿಸಬಹುದು. ಅಂದು ನನ್ನನ್ನು ಕೆಲವರು ದಾರಿ ತಪ್ಪಿಸಿದ್ದರು. ನಾನು ತಪ್ಪು ಮಾಡಿದ್ದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ” ಎಂದರು.

“ಈ ಕಾರ್ಯಕ್ರಮ ಜೀವನದ ಅವಿಸ್ಮರಣೀಯ ಕ್ಷಣ. ಇಲ್ಲಿ ಅತ್ಯುತ್ತಮ ಶಿಕ್ಷಣ ಕೊಡಲಾಗುತ್ತಿದೆ. ದೇಶದ ಕೀರ್ತಿ ಎತ್ತಿ ಹಿಡಿದ ವಿಜ್ಞಾನಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಗುರುಕುಲ ಪರಂಪರೆಯನ್ನು ಸಂಸ್ಕೃತಿಗಳನ್ನು ನೀಡಲಾಗುತ್ತಿದೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

“ಉತ್ತಮ ಶಿಸ್ತಿನ ಬದುಕನ್ನು ಇಲ್ಲಿ ಕಲಿಸಿ ಕೊಡಲಾಗುತ್ತದೆ. ಮಾನವೀಯತೆ ವಿಕಸನವನ್ನು ಇಲ್ಲಿ ನೀಡಲಾಗುತ್ತದೆ. ಈ ಕಾರ್ಯಕ್ರಮಕ್ಕೆ ಬಾರದೇ ಇದ್ದರೆ ಜೀವನದಲ್ಲಿ ದೊಡ್ಡ ನಷ್ಟ ಉಂಟಾಗುತ್ತಿತ್ತು. ಗ್ರಾಮೀಣ ಪ್ರದೇಶದ ಕಲೆಗಳನ್ನು ಮಕ್ಕಳಲ್ಲಿ ಮಾಡಿಸಿದ್ದಾರೆ” ಎಂದರು.

“ಚಂದ್ರಯಾನ ಉಡಾವಣೆಯನ್ನು ಕಣ್ಣಿಗೆ ಕಟ್ಟುವ ಹಾಗೆ ತೋರಿಸಿದ್ದೀರಿ. ಮಕ್ಕಳಿದ್ದಾಗ ರಾಮನ ಭಜನೆ ಮಾಡಿದನ್ನು ಇವತ್ತು ಮತ್ತೆ ನೆನಪಿಸಿದ್ದೀರಿ. ಪ್ರಭಾಕರ ಭಟ್ ಬದುಕಿನ ಒಳ್ಳೆಯ ನಡವಳಿಕೆ ಕಲಿಸುವ ನಿಟ್ಟಿನಲ್ಲಿ ಸರ್ಕಾರಕ್ಕೆ ಕಣ್ಣು ತೆರೆಸುತ್ತೀದ್ದೀರಿ” ಎಂದು ಹೇಳಿದರು.

ತನ್ನ ಮಾತಿನ ಕೊನೆಯಲ್ಲಿ ಕುಮಾರಸ್ವಾಮಿ ಅವರು “ಜೈ ಶ್ರೀರಾಮ್” ಎಂದು ಘೋಷಣೆ ಕೂಗುವ ಎಲ್ಲರ ಹುಬ್ಬೇರಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಭಾಗವಹಿಸಿದ್ದರು.

ಕುಮಾರಸ್ವಾಮಿ ಕಾಲೆಳೆದ ನೆಟ್ಟಿಗರು
ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಹೊಗಳಿ ಅಟ್ಟಕ್ಕೇರಿಸಿರುವ ಕುಮಾರಸ್ವಾಮಿ ಅವರು, ಈಗ ಸೋಷಿಯಲ್ ಮೀಡಿಯಾಗಳಲ್ಲಿ ಟ್ರೋಲರ್‌ಗಳಿಗೆ ಆಹಾರವಾಗಿದ್ದಾರೆ.

“ಇದೆಲ್ಲವೂ ಜೆಡಿಎಸ್ ಪಕ್ಷವು ಲೋಕಸಭಾ ಚುನಾವಣೆಗಾಗಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ಪರಿಣಾಮವಷ್ಟೇ. ಕುಮಾರಸ್ವಾಮಿ ಬಿಜೆಪಿಯಂತೆ ಹಿಂದುತ್ವದ ಜಪ ಮಾಡ್ತಿದ್ದಾರೆ. ಇವೆಲ್ಲದರ ವ್ಯಾಲಿಡಿಟಿ ಲೋಕಸಭಾ ಚುನಾವಣೆಯ ಫಲಿತಾಂಶ ಬೀಳುವವರೆಗೆ ಮಾತ್ರ. ದಯವಿಟ್ಟು ಕುಮಾರಸ್ವಾಮಿ ಅವರು ಜೆಡಿಎಸ್ ಪಕ್ಷದ ಹೆಸರನ್ನು ಜೆಡಿಕೆ ಮಾಡಿ. ಜೆಡಿಎಸ್ ಅಂದರೆ ಜಾತ್ಯಾತೀತ ಜನತಾದಳ, ಜೆಡಿಕೆ ಅಂದರೆ ಜನತಾದಳ ಕೋಮುವಾದ. ಹಾಗಾಗಿ, ಶೀಘ್ರವೇ ಬದಲಾಯಿಸಿ” ಎಂದು ನೆಟ್ಟಿಗರು ಕಾಲೆಳೆದಿದ್ದಾರೆ.

ಕುಮಾರಸ್ವಾಮಿ ಫೋಟೋ ಹಂಚಿಕೊಂಡಿರುವ ಕಾಂಗ್ರೆಸ್ ಮುಖಂಡ ಸೂರ್ಯ ಮುಕುಂದರಾಜ್, “ಅಧಿಕೃತವಾಗಿ ಕುಮಾರಸ್ವಾಮಿ ಅವರನ್ನು ಸಂಘಿಗಳು ಮನೆ ತುಂಬಿಸಿಕೊಂಡಿದ್ದಾರೆ” ಎಂದು ಕಾಲೆಳೆದಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಂಗ್ರೆಸ್‌ ಗ್ಯಾರಂಟಿಗಳಿಂದ ಮಹಿಳೆಯರ ಸಬಲೀಕರಣ ಆಗಲ್ಲ: ಸುಮಲತಾ

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು ಸಮರ್ಥನೀಯವಲ್ಲ. ಅವುಗಳು ಮಹಿಳೆಯರನ್ನು ಸಬಲೀಕರಣ ಮಾಡುವುದಿಲ್ಲ ಎಂದು...

ಅನಾರೋಗ್ಯ ಹಿನ್ನೆಲೆ; ರಾಹುಲ್ ಗಾಂಧಿ ಕೇರಳ ಚುನಾವಣಾ ಪ್ರಚಾರ ರದ್ದು

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಏಪ್ರಿಲ್ 22...

ದೇಶದ ಇತಿಹಾಸದಲ್ಲಿ ಮೋದಿಯಷ್ಟು ತಮ್ಮ ಹುದ್ದೆಯ ಘನತೆಯನ್ನು ಯಾವ ಪ್ರಧಾನಿಯೂ ಇಳಿಸಿಲ್ಲ: ಮಲ್ಲಿಕಾರ್ಜುನ ಖರ್ಗೆ

'ದೇಶದ ಸಂಪತ್ತನ್ನು ಒಟ್ಟುಗೂಡಿಸಿ, ಹೆಚ್ಚು ಮಕ್ಕಳಿರುವ ಮುಸ್ಲಿಮರಿಗೆ ನೀಡುವುದು ಕಾಂಗ್ರೆಸ್‌ನ ಪ್ರಣಾಳಿಕೆ'...

ಬಿಜೆಪಿ ಒತ್ತಡದಿಂದ ಕಾಂಗ್ರೆಸ್‌ ಅಭ್ಯರ್ಥಿ ನಾಮಪತ್ರ ತಿರಸ್ಕಾರ; ಹೈಕೋರ್ಟ್‌ಗೆ ಹೋಗುತ್ತೇವೆಂದ ಕಾಂಗ್ರೆಸ್‌

ಸೂರತ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರ ನಾಮಪತ್ರವನ್ನು...