ಬಿಎಸ್‌ವೈ ವಿರುದ್ಧ ಪೋಕ್ಸೊ | ‘ರೇಪ್ ಆಗಿದೆಯೋ ಇಲ್ಲವೋ ಎಂದು ಚೆಕ್ ಮಾಡಲು ಒಳ ಕರಕೊಂಡು ಹೋಗಿದ್ದೆ’: FIRನಲ್ಲಿ ಇರೋದೇನು?

Date:

Advertisements

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

ಬಿಜೆಪಿಯ ಕಾರ್ಯಕರ್ತೆಯೂ ಆಗಿರುವ ಸಂತ್ರಸ್ತ ಬಾಲಕಿಯ ತಾಯಿ ನೀಡಿರುವ ದೂರಿನ ಆಧಾರದ ಮೇಲೆ ಪೋಕ್ಸೋ ಕಾಯ್ದೆ ಸೆಕ್ಷನ್ 8, ಮತ್ತು ಐಪಿಸಿ ಸೆಕ್ಷನ್ 354(a) ಅಡಿ ಪ್ರಕರಣ ದಾಖಲಾಗಿದೆ. ಗುರುವಾರ ರಾತ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪೋಕ್ಸೋ ಪ್ರಕರಣದಲ್ಲಿ ದಾಖಲಾದರೆ, ಆರೋಪಿ ಎಷ್ಟೇ ಪ್ರಭಾವಿ ಆಗಿದ್ದರೂ ಕೂಡಲೇ‌ ಬಂಧಿಸಬೇಕು. ನಂತರ ತನಿಖೆ‌ ನಡೆಸಬೇಕೆಂದು ಕಾನೂನಿನಲ್ಲಿ ಉಲ್ಲೇಖಿಸಲಾಗಿದೆ. ಸದ್ಯ ಈ ಪ್ರಕರಣದ ಎಫ್ಐಆರ್ ಲಭ್ಯವಾಗಿದ್ದು, “ರೇಪ್ ಆಗಿದೆಯೋ ಇಲ್ಲವೋ ಎಂದು ಚೆಕ್ ಮಾಡಲು ಒಳ ಕರಕೊಂಡು ಹೋಗಿದ್ದೆ ಎಂದು ಯಡಿಯೂರಪ್ಪ ಹೇಳಿದ್ದರು” ಎಂಬಿತ್ಯಾದಿ ಹಲವಾರು ಅಂಶಗಳನ್ನು ಸಂತ್ರಸ್ತೆಯ ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Advertisements

ಎಫ್‌ಐಆರ್‌ನಲ್ಲಿರುವ ಅಂಶಗಳೇನು?

ಈ ಹಿಂದೆ ನನ್ನ ಮಗಳ ಮೇಲೆ ಆಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಸಹಾಯ ಕೇಳಲೆಂದು ಫೆ. 2, 2024ರಂದು ನನ್ನ ಮಗಳನ್ನು ಕರೆದುಕೊಂಡು ಯಡಿಯೂರಪ್ಪ ಅವರ ಬಳಿ ಹೋಗಿದ್ದೆ. ನನ್ನ ಮಗಳ ಮೇಲಾಗಿದ್ದ ದೌರ್ಜನ್ಯವನ್ನು ಎಸ್‌ಐಟಿಗೆ ವಹಿಸುವ ವಿಚಾರವಾಗಿ ನೆರವು ಕೇಳಿಕೊಂಡು ಹೋಗಿದ್ದೆ. ಯಡಿಯೂರಪ್ಪನವರನ್ನು ನಾನು ಅಪ್ಪಾಜಿ ಎಂದು ಕರೆಯುತ್ತಿದ್ದೆ. ಅವರ ಮನೆಯಲ್ಲಿ ಅಂದು ಸುಮಾರು ಒಂಭತ್ತು ನಿಮಿಷಗಳ ಕಾಲ ಮಾತನಾಡಿ, ನಮಗೆ ಟೀ ಕೊಡಿಸಿದರು. ನನ್ನ ಮಗಳ ಕೈಯನ್ನು ಹಿಡಿದುಕೊಂಡು ಯಡಿಯೂರಪ್ಪನವರು ಮಾತನಾಡಿಸುತ್ತಿದ್ದಾಗ, ನನ್ನ ಮಗಳು ತಾತ ಎಂದು ಕರೆಯುತ್ತಿದ್ದಳು. ಆ ಬಳಿಕ ಮಗಳೊಂದಿಗೆ ಮಾತನಾಡುತ್ತೇನೆ ಎಂದು ಹೇಳುತ್ತಾ ಐದು ನಿಮಿಷ ತನ್ನ ರೂಮಿನೊಳಗೆ ಕರೆದುಕೊಂಡು ಹೋಗಿ, ಬಳಿಕ ಲಾಕ್ ಮಾಡಿದ್ದಾರೆ. ರೂಮಿನಲ್ಲಿ ನನ್ನ ಮಗಳು ಹಾಕಿದ್ದ ಶ್ವೆಟರ್‌ನ ಒಳಗೆ ಕೈ ಹಾಕಿ, ಬಲಭಾಗದ ಎದೆಯ ಮೇಲೆ ಕೈ ಹಾಕಿ, ಹಿಚುಕಿದ್ದಾರೆ. ಈ ವೇಳೆ ನನ್ನ ಮಗಳು ಅವರಿಂದ ತಪ್ಪಿಸಿಕೊಳ್ಳಲು ಯತ್ನಿಸಿದರೂ ಕೂಡ ಹೊರಗೆ ಬರಲು ಯಡಿಯೂರಪ್ಪನವರು ಬಿಡಲಿಲ್ಲ. ಆಮೇಲೆ ಮೆಲ್ಲಗೆ ಯಡಿಯೂರಪ್ಪನವರೇ ಬಾಗಿಲು ತೆರೆದಾಗ, ಮಗಳು ಓಡಿ ಬಂದು ಕೂಡಲೇ ರೂಮಿನೊಳಗೆ ನಡೆದ ವಿಚಾರವನ್ನು ತಿಳಿಸಿದ್ದಾಳೆ. ಈ ಬಗ್ಗೆ ಯಡಿಯೂರಪ್ಪ ಅವರೊಂದಿಗೆ ಯಾಕೆ ಹೀಗೆ ಮಾಡಿದ್ರಿ ಎಂದು ಕೇಳಿದ್ದಕ್ಕೆ, ಅವರು, “ಆಕೆಗೆ(ಮಗಳಿಗೆ) ರೇಪ್ ಆಗಿದೆಯೋ? ಇಲ್ಲವೋ? ಎಂದು ಚೆಕ್ ಮಾಡಲು ಹಾಗೆ ಮಾಡಿದೆ” ಎಂದು ಹೇಳಿರುವುದಾಗಿ ಸಂತ್ರಸ್ತ ಬಾಲಕಿಯ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಪ್ರಕರಣ | ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದೇನು?

“ನಾನು ಪ್ರಶ್ನಿಸಿದಾಗ, ಕೂಡಲೇ ನನ್ನೊಂದಿಗೆ ಯಡಿಯೂರಪ್ಪನವರು ಕ್ಷಮೆಯಾಚಿಸುತ್ತಾ, ನಿಮಗೆ ಮೋಸ ಆಗಿರುವ ಬಗ್ಗೆ ನಾನು ಸಹಾಯ ಮಾಡುತ್ತೇನೆ ಎಂದು ಹೇಳಿದರು. ಅದಕ್ಕೆ ನಾನು ಒಪ್ಪಲಿಲ್ಲ. ಆದರೂ, ಯಡಿಯೂರಪ್ಪನವರು ಇಲ್ಲಿನ ವಿಚಾರವನ್ನು ಹೊರಗೆ ಎಲ್ಲೂ ತಿಳಿಸಬಾರದೆಂದು ನಮ್ಮನ್ನು ತಡೆಯಲು ತುಂಬಾ ಪ್ರಯತ್ನಿದ್ದಾರೆ” ಎಂದು ಆರೋಪಿಸಿದ್ದಾರೆ.

WhatsApp Image 2024 03 15 at 12.01.37 PM
ಎಫ್ಐಆರ್ ಪ್ರತಿ

”ನನ್ನ ಮಗಳಿಗಾದ ಅನ್ಯಾಯಕ್ಕೆ ನ್ಯಾಯ ಕೇಳಲು ಹೋಗಿದ್ದಾಗ ನನ್ನ ಮಗಳಿಗೆ ಯಡಿಯೂರಪ್ಪನವರು ಲೈಂಗಿಕ ಕಿರುಕುಳ ನೀಡಿದ್ದಾರೆ. ಹಾಗಾಗಿ, ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು” ಎಂದು ದೂರಿನಲ್ಲಿ ಅಪ್ರಾಪ್ತ ಬಾಲಕಿಯ ತಾಯಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಯಡಿಯೂರಪ್ಪ ವಿರುದ್ಧ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X