ಕಾಂಗ್ರೆಸ್‌ನ ಮಾಜಿ ಶಾಸಕ, ʼಮೇಯರ್ʼ ವಾಸು ನಿಧನ

Date:

ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್‌ನ ಮಾಜಿ‌ ಶಾಸಕ ವಾಸು (72) ಶನಿವಾರ ನಿಧನರಾದರು.

- Advertisement -

ಹಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೈಸೂರಿನ ಜಯಲಕ್ಷ್ಮೀಪುರಂ ನಿವಾಸದಲ್ಲಿ ವಾಸು ಕೊನೆಯುಸಿರೆಳೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ʼಮೇಯರ್ʼ ವಾಸು ಎಂದೇ ಖ್ಯಾತರಾಗಿದ್ದ ಮಾಜಿ ಶಾಸಕ ವಾಸು ಅವರು, 2013ರಲ್ಲಿ ಚಾಮರಾಜ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಶಾಸಕರಾಗಿದ್ದರು. ತಮ್ಮ ಐದು ವರ್ಷಗಳ ಶಾಸಕ ಅವಧಿಯಲ್ಲಿ ವಾಸು ಅವರು ತಮ್ಮ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದರು.

ವಿದ್ಯಾವಿಕಾಸ ಎಂಜಿನಿಯರಿಂಗ್‌ ಕಾಲೇಜು ನಡೆಸುತ್ತಿದ್ದರು. ಸ್ಥಳೀಯ ‘ಪ್ರಜಾನುಡಿ’ ಪತ್ರಿಕೆಯನ್ನೂ ನಡೆಸುತ್ತಿದ್ದರು. ಕಳೆದ‌ ವಿಧಾನಸಭೆ ಚುನಾವಣೆಯಲ್ಲಿ ಚಾಮರಾಜ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಬಯಸಿದ್ದರು.‌ ಆದರೆ ಅವರಿಗೆ ಟಿಕೆಟ್ ಕೊಟ್ಟಿರಲಿಲ್ಲ. ಇದರಿಂದ ಆಕ್ರೋಶಗೊಂಡ ಅವರು ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರದಿಂದ ‌ದೂರ ಉಳಿದಿದ್ದರು. ಈಚೆಗೆ, ಲೋಕಸಭಾ ‌ಚುನಾವಣೆ ಬಗ್ಗೆ ಪಕ್ಷದಿಂದ ಆಯೋಜಿಸಿದ್ದ ಪ್ರಮುಖರ ಸಭೆಯಲ್ಲಿ ಕಾಣಿಸಿಕೊಂಡಿದ್ದರು.

ಈ ಬಾರಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿಯವರಿಗೆ ಆಪ್ತರಾಗಿದ್ದ ವಾಸುರವರು ಮೊಯ್ಲಿ ಅವಧಿಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...