ದೆಹಲಿ ಮಾಜಿ ಸಚಿವ ರಾಜ್ ಕುಮಾರ್ ಆನಂದ್ ಬಿಜೆಪಿ ಸೇರ್ಪಡೆ

Date:

ದೆಹಲಿ ಎಎಪಿ ಸರ್ಕಾರದಲ್ಲಿ ಸಮಾಜ ಕಲ್ಯಾಣ ಸಚಿವರಾಗಿದ್ದ ರಾಜ್ ಕುಮಾರ್ ಆನಂದ್ ಬುಧವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಎಎಪಿ ತೊರೆದಿದ್ದ ರಾಜ್ ಕುಮಾರ್ ಮೇ ತಿಂಗಳಲ್ಲಿ ಮಾಯಾವತಿ ಅವರ ಬಿಎಸ್‌ಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಈಗ ಬಿಎಸ್‌ಪಿಯಿಂದ ಬಿಜೆಪಿಗೆ ಜಿಗಿದಿದ್ದಾರೆ.

ರಾಜ್ ಕುಮಾರ್ ಆನಂದ್ ಅವರ ಪತ್ನಿ ಮತ್ತು ಮಾಜಿ ಎಎಪಿ ಶಾಸಕಿ ವೀಣಾ, ಎಎಪಿ ಶಾಸಕ ಕರ್ತಾರ್ ಸಿಂಗ್ ತನ್ವಾರ್, ಎಎಪಿ ಕೌನ್ಸಿಲರ್ ಉಮೇದ್ ಸಿಂಗ್ ಫೋಗಟ್ ಮತ್ತು ಎಎಪಿ ನಾಯಕ ರತ್ನೇಶ್ ಗುಪ್ತಾ ಸೇರಿದಂತೆ ಇತರ ಮೂವರು ರಾಜ್‌ ಕುಮಾರ್ ಜೊತೆಯಲ್ಲೇ ಬಿಜೆಪಿಗೆ ಸೇರಿದ್ದಾರೆ.

ರಾಜ್ ಕುಮಾರ್ ಆನಂದ್ ಅವರು ಬಿಜೆಪಿ ದೆಹಲಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಮತ್ತು ಬಿಜಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದನ್ನು ಓದಿದ್ದೀರಾ?  ಹರಿಯಾಣ| ಮಾಜಿ ಕಾಂಗ್ರೆಸ್ ನಾಯಕಿ ಕಿರಣ್ ಚೌಧರಿ, ಪುತ್ರಿ ಶ್ರುತಿ ಬಿಜೆಪಿ ಸೇರ್ಪಡೆ

ದಲಿತ ಸಮುದಾಯಕ್ಕೆ ಸೇರಿದ ರಾಜ್ ಕುಮಾರ್ ಆನಂದ್ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸಮಾಜ ಕಲ್ಯಾಣ ಸಚಿವರಾಗಿದ್ದರು. ಅಬಕಾರಿ ಪ್ರಕರಣದಲ್ಲಿ ಕೇಜ್ರಿವಾಲ್ ಬಂಧನದ ಬಳಿಕ ಎಎಪಿ ತೊರೆದು, ಬಿಎಸ್‌ಪಿ ಸೇರಿದ್ದರು. ಇದೀಗ ಬಿಜೆಪಿಗೆ ಪಕ್ಷಾಂತರಗೊಂಡಿದ್ದಾರೆ.

ಬಿಜೆಪಿ ಸೇರ್ಪಡೆಯಾದ ಬಳಿಕ ರಾಜ್ ಕುಮಾರ್ ಆನಂದ್ ಅವರು ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ದೆಹಲಿ ಸಿಎಂ ಕೇಜ್ರಿವಾಲ್ ದಲಿತರಿಗೆ ಮೋಸ ಮಾಡುತ್ತಿದ್ದಾರೆ” ಎಂದು ಆನಂದ್ ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

1950ರ ಕೇಂದ್ರ ಬಜೆಟ್ ಸೋರಿಕೆ: ನಡೆದಿದ್ದೇನು, ಪರಿಣಾಮವೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಸತತ ಏಳನೇ...

ನಾಲ್ಕು ಕೃಷಿ ಡಿಪ್ಲೊಮಾ ಕಾಲೇಜು ಪುನರಾರಂಭಕ್ಕೆ ಮರು ಅನುಮತಿ ನೀಡಿದ ಸರ್ಕಾರ

ಕಳೆದ ಸರ್ಕಾರದ ಅವದಿಯಲ್ಲಿ ತಡೆಹಿಡಿಯಲಾಗಿದ್ದ ವಿವಿಧ ಕೃಷಿ ವಿವಿ ವ್ಯಾಪ್ತಿಯ ನಾಲ್ಕು...

ವಾಲ್ಮೀಕಿ ನಿಗಮ ಅಕ್ರಮ | ಹಣ ಲೂಟಿ ಮಾಡಲು ನಕಲಿ ಹುದ್ದೆ ಸೃಷ್ಟಿ!

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಕೋಟ್ಯಂತರ ರೂ.ಗಳನ್ನು ಲೂಟಿ...

ಕೇದಾರನಾಥ ದೇಗುಲದಿಂದ 228 ಕೆಜಿ ಚಿನ್ನ ನಾಪತ್ತೆ: ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ

"ಕೇದಾರನಾಥ ದೇವಸ್ಥಾನದಲ್ಲಿದ್ದ ಚಿನ್ನ ನಾಪತ್ತೆಯಾಗಿದೆ, 228 ಕೆಜಿ ಚಿನ್ನದ ಹಗರಣ ನಡೆದಿದೆ. ಆದರೆ...