ಮಾಜಿ ಉಪಸಭಾಪತಿ ಎನ್ ತಿಪ್ಪಣ್ಣ ನಿಧನ

Date:

ಮಾಜಿ ಉಪಸಭಾಪತಿ, ಹಿರಿಯ ವಕೀಲರು, ವೀರಶೈವ ಲಿಂಗಾಯತ ಮಹಾಸಭಾದ ಮಾಜಿ ರಾಜ್ಯಾಧ್ಯಕ್ಷರಾಗಿದ್ದ ಎನ್ ತಿಪ್ಪಣ್ಣ ನಿಧನರಾಗಿದ್ದಾರೆ.

- Advertisement -

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು (ಜು.11) ಬೆಳಿಗ್ಗೆ 5 ಗಂಟೆ ಸುಮಾರಿಗೆ ಬಳ್ಳಾರಿಯ ಗಾಂಧಿನಗರದ ನಿವಾಸದಲ್ಲಿ ತಮ್ಮ 98ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಮೂರು ಬಾರಿ ವಿಧಾನ ಪರಿಷತ್ ಸದಸ್ಯರಾಗಿ, ಎರಡು ಬಾರಿ ವಿಧಾನ ಪರಿಷತ್ ಸಭಾಪತಿಯಾಗಿ ಕಾರ್ಯನಿರ್ವಹಿಸಿದ್ದರು. ಜೊತೆಗೆ ಅನುಭವಿ ಹಿರಿಯ ನ್ಯಾಯವಾದಿಯಾಗಿ ಸಾಕಷ್ಟು ಹೆಸರು ಮಾಡಿದ್ದರು. ಇಂದು ಬಳ್ಳಾರಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಶನಿವಾರ ತಿಪ್ಪಣ್ಣ ಅವರ ಸ್ವಗ್ರಾಮ ಚಿತ್ರದುರ್ಗ ಜಿಲ್ಲೆಯ ತುರುವನೂರು ಗ್ರಾಮದಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ದಾಖಲೆ ಬರೆದ ಶಕ್ತಿ ಯೋಜನೆ: ಆಡಿದ್ದನ್ನು ಮಾಡಿ ತೋರಿಸಿದ ಸರ್ಕಾರ

ತಿಪ್ಪಣ್ಣ ನಿಧನಕ್ಕೆ ಈಶ್ವರ ಖಂಡ್ರೆ ಸಂತಾಪ ಸೂಚಿಸಿದ್ದು, ನಮ್ಮೆಲ್ಲರಿಗೂ ಮಾರ್ಗದರ್ಶಕರಾಗಿದ್ದ ತಿಪ್ಪಣ್ಣನವರು ನಮ್ಮ ತಂದೆ ಶತಾಯುಷಿ ಭೀಮಣ್ಣ ಖಂಡ್ರೆ ಅವರೊಂದಿಗೆ ಸಮಾಜದ ಅಭ್ಯುದಯಕ್ಕೆ ಶ್ರಮಿಸಿದ್ದರು. ಬಸವಾದಿ ಪ್ರಮಥರ ತತ್ವಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ಪಾಲಿಸುತ್ತಿದ್ದ ಅವರು ಸಾವಿರಾರು ವಿದ್ಯಾರ್ಥಿಗಳ ಅನ್ನದಾಸೋಹ, ಜ್ಞಾನದಾಸೋಹಕ್ಕೆ ನೆರವಾಗಿದ್ದರು ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಹಿರಿಯ ನ್ಯಾಯವಾದಿಗಳಾಗಿ, ಸಾರ್ವಜನಿಕ ಅಭಿಯೋಜಕರಾಗಿ, ವಕೀಲರ ಪರಿಷತ್ತಿನ ಅಧ್ಯಕ್ಷರಾಗಿ, ವಿಧಾನಪರಿಷತ್ ಸದಸ್ಯರಾಗಿ, ಉಪಸಭಾಪತಿಗಳಾಗಿ ನಾನಾ ಕ್ಷೇತ್ರದಲ್ಲಿ ಅವರು ರಾಜ್ಯಕ್ಕೆ ನೀಡಿರುವ ಕೊಡುಗೆ ಅನುಪಮವಾದ್ದು. ಎಲ್ಲ ಕ್ಷೇತ್ರದಲ್ಲೂ ಅವರು ತಮ್ಮದೇ ಛಾಪು ಮೂಡಿಸಿದ್ದರು. ಸರಳ ಸಜ್ಜನಿಕೆಯ ಸಾಕಾರ ಮೂರ್ತಿಗಳಾಗಿದ್ದ ತಿಪ್ಪಣ್ಣನವರ ಆತ್ಮಕ್ಕೆ ಈಶ್ವರ ಚಿರಶಾಂತಿ ನೀಡಲಿ, ಅವರ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಬಂಧು ಮಿತ್ರರಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪದಲ್ಲಿ ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...