ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ನಿಧನ

Date:

ಜಾರ್ಖಂಡ್‌ನ ಮುಖ್ಯಮಂತ್ರಿಯಾಗಿ ಮೂರು ಅವಧಿಗೆ ಸೇವೆ ಸಲ್ಲಿಸಿದ್ದ ಹಿರಿಯ ಬುಡಕಟ್ಟು ನಾಯಕ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಶಿಬು ಸೊರೇನ್ ಸೋಮವಾರ ನಿಧನರಾಗಿದ್ದಾರೆ.

- Advertisement -

ಗಂಭೀರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ನವದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಇದನ್ನು ಓದಿದ್ದೀರಾ? ಜಾರ್ಖಂಡ್‌| ಶಿಬು ಸೊರೇನ್‌ ಸೊಸೆಯಂದಿರ ನಡುವೆ ಲೋಕಸಭೆ ಚುನಾವಣೆ ಜಿದ್ದಾಜಿದ್ದಿ

ಈ ಬಗ್ಗೆ ಶಿಬು ಸೊರೇನ್ ಅವರ ಪುತ್ರ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ದೃಢಪಡಿಸಿದ್ದಾರೆ. ಶಿಬು ಅವರು ಜೂನ್ ಕೊನೆಯ ವಾರದಲ್ಲಿ ಮೂತ್ರಪಿಂಡ ಸಂಬಂಧಿತ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು.

‘ಗುರೂಜಿ’ ಎಂದೇ ಪ್ರಸಿದ್ಧರಾದ ಸೊರೇನ್ ಅವರು ಪ್ರತ್ಯೇಕ ಜಾರ್ಖಂಡ್ ರಾಜ್ಯಕ್ಕಾಗಿ ನಡೆದ ಚಳವಳಿಯಲ್ಲಿ ಪ್ರಮುಖ ವ್ಯಕ್ತಿ. ಬುಡಕಟ್ಟು ಮತ್ತು ಹಿಂದುಳಿದ ಸಮುದಾಯಗಳ ಹಕ್ಕುಗಳನ್ನು ಪ್ರತಿಪಾದಿಸುತ್ತಾ ಸಂಘಟನೆ ಕಟ್ಟಿಕೊಂಡರು. ದಶಕಗಳ ಕಾಲ ಜಾರ್ಖಂಡ್ ಮತ್ತು ದೇಶದ ರಾಜಕೀಯದಲ್ಲಿ ಪ್ರಮುಖ ಶಕ್ತಿ ಎಂದು ಗುರುತಿಸಿಕೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದದ ನಡುವೆ ಒಡಿಶಾ ಮುಖ್ಯ ಚುನಾವಣಾಧಿಕಾರಿ ಸ್ವಯಂ ನಿವೃತ್ತಿಗೆ ಅರ್ಜಿ; ಆರ್ ಎಸ್ ಗೋಪಾಲನ್ ಹೇಳಿದ್ದೇನು?

ಒಡಿಶಾದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ...

ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಕಾರ ಆರೋಪ; ರಸ್ತೆ ಬದಿಯಲ್ಲೇ ಮಗುವಿಗೆ ಜನ್ಮ ನೀಡಿದ ದಲಿತ ಮಹಿಳೆ

ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಿರಾಕರಿಸಿದ್ದರಿಂದ 20 ವರ್ಷದ ಬುಡಕಟ್ಟು (ದಲಿತ) ಮಹಿಳೆಯೊಬ್ಬರು...

ಆರೋಪಿಯನ್ನು ಹಿಡಿದರೂ FIRನಲ್ಲಿ ಹೆಸರಿಲ್ಲ; ಯುಪಿ ಪೊಲೀಸರ ನಡೆಗೆ ಸುಪ್ರೀಂ ಅಸಮಾಧಾನ

ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ತನಿಖೆಯಲ್ಲಿ ಉತ್ತರ ಪ್ರದೇಶ ಪೊಲೀಸರ...

ಇಡಿ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಪ್ರಕರಣ: ಪ್ರತಿಕ್ರಿಯಿಸಲು ವಿಳಂಬ ಮಾಡಿದ ಸಿಎಂ ಸೊರೇನ್‌ಗೆ ಜಾರ್ಖಂಡ್ ಹೈಕೋರ್ಟ್ ದಂಡ

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ...