ಮಾಜಿ ಸಚಿವ ಅಂಜನಮೂರ್ತಿ ನಿಧನ

Date:

ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್‌ನ ಮಾಜಿ ಸಚಿವ ಅಂಜನಮೂರ್ತಿ ಅವರು ಗುರುವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. 

ನೆಲಮಂಗಲದ ಇಂದಿರಾನಗರದಲ್ಲಿ ವಾಸಿಸುತ್ತಿದ್ದ ಅಂಜನಮೂರ್ತಿ ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಅವರನ್ನು ಎರಡು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಲ್ಲೇಶ್ವರಂನ ಅಪೋಲೊ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಅಂಜನಮೂರ್ತಿ ಅವರು 1989-1994, 1999-2004, 2004-2007 ಮೂರು ಅವಧಿಗೆ ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ. 1993ರ ಫೆಬ್ರವರಿಯಿಂದ 1994ರ ಡಿಸೆಂಬರ್‌ವರೆಗೆ ವಿಧಾನಸಬಾ ಉಪಸಭಾಪತಿ ಆಗಿ ಸೇವೆ ಸಲ್ಲಿಸಿದ್ದರು. 2003 ರಿಂದ 2004 ಎಸ್​​ಸಿ ಮತ್ತು ಎಸ್​ಟಿ ಆಯೋಗದ ಮುಖ್ಯಸ್ಥರಾಗಿದ್ದರು. 2005 ರಿಂದ 2006 ಅವಧಿಯಲ್ಲಿ ವಸತಿ ಸಚಿವರಾಗಿದ್ದರು.

ಅಂಜನಮೂರ್ತಿ ಅವರು ಶಿರೋಮಣಿ ವಿಕಾಸ್ ಪ್ರಶಸ್ತಿ, ಮಾನವ ಸೇವಾ ಪುರಸ್ಕಾರ, ವಿಶೇಷ ಸ್ಕ್ರಾಲ್ ಆಫ್ ಹಾನರ್, ಇಂಟರ್‌ನ್ಯಾಶನಲ್‌ನಿಂದ ಎಕ್ಸಲೆನ್ಸ್-94 ಪ್ರಶಸ್ತಿಗೆ ಭಾಜನರಾಗಿದ್ದರು.

2008 ಮತ್ತು 2013ರ ವಿಧಾನಸಭಾ ಚುನಾವಣೆಯಲ್ಲಿ ಅಂಜನಮೂರ್ತಿ ಅವರು ಸೋಲನುಭವಿಸಿದ್ದರು. ಕಳೆದ ಚುನಾವಣೆಯಲ್ಲಿ ಅವರಿಗೆ ಟಿಕೆಟ್‌ ನಿರಾಕರಿಸಲಾಗಿತ್ತು. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲೂ ಟಿಕೆಟ್‌ ಆಕಾಂಕ್ಷಿಯಾಗಿದ್ದ ಅಂಜನಮೂರ್ತಿ ಪ್ರಸ್ತುತ ದಿನಮಾನಗಳಲ್ಲಿ ನಡೆಯುತ್ತಿರುವ ನೆಲಮಂಗಲ ವಿಧಾನಸಭಾ ಕ್ಷೇತ್ರದ ರಾಜಕೀಯ ಬೆಳವಣಿಗೆಯ ಬಗ್ಗೆ ತೀವ್ರ ಅಸಮಾಧಾನ ಹೊಂದಿದ್ದರು.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮಹಾಧರಣಿ’ಗೆ ಸಿಎಂ ಸಿದ್ದರಾಮಯ್ಯ ಸ್ಪಂದನೆ: ಡಿ.19ರಂದು ಮಹತ್ವದ ಸಭೆ

ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಕಳೆದ ಮೂರು ದಿನಗಳಿಂದ ಸಂಯುಕ್ತ ಹೋರಾಟ ಸಮಿತಿಯ...

ದೇಶದಲ್ಲಿ ‘ಬ್ರ್ಯಾಂಡ್‌ ಬೆಂಗಳೂರು’ ನಂಬರ್ ಒನ್ ಆಗಿಸಬೇಕಿದೆ: ಸಿದ್ದರಾಮಯ್ಯ

'ದೇಶ ಸುಸ್ಥಿರವಾಗಿ ಬೆಳೆಯಬೇಕಾದರೆ ನಗರ-ಗ್ರಾಮೀಣ ಸುಸ್ಥಿರ ಬೆಳವಣಿಗೆ ಕಾಣಬೇಕು' 'ರಾಜ್ಯದ...

‘ಫ್ರೀಡಂ ಪಾರ್ಕ್’ನಿಂದ ನಮಗೆ ‘ಫ್ರೀಡಂ’ ಕೊಡಿ: ಸಿಎಂ ಸಿದ್ದರಾಮಯ್ಯಗೆ ‘ಮಹಾಧರಣಿ’ ಆಗ್ರಹ

ರಾಜಧಾನಿ ಬೆಂಗಳೂರಿನಲ್ಲಿ ನಡೆಯುವ ಪ್ರತಿಯೊಂದು ಪ್ರತಿಭಟನೆಗಳು ಕೇವಲ 'ಫ್ರೀಡಂ ಪಾರ್ಕ್‌'ಗೆ ಸೀಮಿತವಾಗಿದ್ದು,...

ಬೆಂಗಳೂರು | 20 ದಿನದ ಹಸುಗೂಸು ಮಾರಾಟ; ಸಿಸಿಬಿ ಪೊಲೀಸರ ಕಾರ್ಯಾಚರಣೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಹಸುಗೂಸು ಮಾರಾಟ ದಂಧೆ ಮತ್ತೆ ಬೆಳಕಿಗೆ...