ಹೊಂದಾಣಿಕೆಯಿಂದ ವಿಜಯೇಂದ್ರ, ಅಶೋಕ್ ಆಯ್ಕೆ: ಅರವಿಂದ ಲಿಂಬಾವಳಿ ಆರೋಪ

Date:

ಆರ್‌. ಅಶೋಕ್ ಅವರಿಗೆ ವಿಧಾನಸಭೆ ಪ್ರತಿಪಕ್ಷ ನಾಯಕ ಮತ್ತು ಬಿ.ವೈ. ವಿಜಯೇಂದ್ರ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ದೊರಕಿರುವುದು ವಿರೋಧ ಪಕ್ಷದವರ ಜತೆಗಿನ ಹೊಂದಾಣಿಕೆಯಿಂದ ಎಂದು ಬಿಜೆಪಿ ಮುಖಂಡ, ಮಾಜಿ ಸಚಿವ ಅರವಿಂದ ಲಿಂಬಾವಳಿ ಆರೋಪಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ”ಈ ಹೊಂದಾಣಿಕೆಯಿಂದಲೇ ಅವರು ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನವನ್ನೂ ಗೆಲ್ಲಿಸಬಹುದು. ಹಾಗಾಗಿ ಇವರನ್ನು ನೇಮಕ ಮಾಡಲಾಗಿದೆ,” ಎಂದು ಪಕ್ಷದ ವಿರುದ್ಧವೇ ಅಸಮಾಧಾನ ಹೊರಹಾಕಿದ್ದಾರೆ.

”ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಆಯ್ಕೆಯಾಗಿರುವ 66 ಶಾಸಕರಲ್ಲಿ ಅನೇಕರು ಸ್ವಂತ ಶಕ್ತಿಯ ಮೇಲೆ ಗೆದ್ದಿದ್ದಾರೆ. ಕೆಲವರು ಹೊಂದಾಣಿಕೆ ಮೇಲೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇಂದು ರಾಜಕೀಯದಲ್ಲಿ ಹೊಂದಾಣಿಕೆ ಮಾಡುವವರ ಕಾಲ” ಎಂದು ಅಸಮಾಧಾನ ಹೊರಹಾಕಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

”ಬಿ.ವೈ. ವಿಜಯೇಂದ್ರ ಅವರನ್ನು ಅಳೆದು, ತೂಗಿ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿಲ್ಲ,” ಎಂದು ಇದೇ ವೇಳೆ ಲಿಂಬಾವಳಿ ಪಕ್ಷದ ನೂತನ ಅಧ್ಯಕ್ಷರ ಆಯ್ಕೆಗೆ ಅಸಮಾಧಾನ ಹೊರಹಾಕಿದ್ದಾರೆ.

ಜಾತಿ ಗಣತಿ ಕುರಿತದ ಕಾಂತರಾಜ ಆಯೋಗದ ವರದಿ ಕುರಿತು ಪ್ರತಿಕ್ರಿಯಿಸಿದ ಲಿಂಬಾವಳಿ, ”ಕಾಂತರಾಜ ಆಯೋಗದ ವರದಿಯ ಮೂಲಪ್ರತಿ ಕಳ್ಳತನವಾಗಿದೆ ಎನ್ನುತ್ತಿದ್ದಾರೆ. ಆ ವರದಿ ಪ್ರತಿ ಕಂಪ್ಯೂಟರ್‌ನಲ್ಲಿ ಇದ್ದೇ ಇರುತ್ತದೆ. ಅದನ್ನು ಕಳ್ಳತನ ಮಾಡಲು ಆಗಲ್ಲ. ಈ ಆಯೋಗದ ವರದಿಯನ್ನು ರಾಜ್ಯ ಸರಕಾರ ಜಾರಿಗೊಳಿಸಲಿ. ಸದನದೊಳಗೆ ಈ ವಿಷಯ ಚರ್ಚೆಗೆ ತರಲಿ” ಎಂದು ಒತ್ತಾಯಿಸಿದರು.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಮಾರಣ್ಣನ ಜೇಬಲ್ಲಿದ್ದ ‘ಪೆನ್‌ಡ್ರೈವ್‌’ನಲ್ಲಿ ಏನಿತ್ತು ಎಂಬುದು ಈಗ ಗೊತ್ತಾಯ್ತು: ಡಿ ಕೆ ಶಿವಕುಮಾರ್

ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಜೆಡಿಎಸ್ ಸಂಸದ ಹಾಗೂ ಹಾಸನ...

‘ಬರ ಪರಿಹಾರ ಸಾಕು’ ಎಂದಿರುವ ಕುಮಾರಸ್ವಾಮಿ ನಾಡದ್ರೋಹಿ: ಡಿಸಿಎಂ ಡಿಕೆಶಿ ವಾಗ್ದಾಳಿ

"ಕೇಂದ್ರ ಸರ್ಕಾರ ಕರ್ನಾಟಕದ ಬರಕ್ಕೆ ಅಲ್ಪ ಪರಿಹಾರ ಮೊತ್ತ ಘೋಷಿಸಿದ್ದು, ನಾವು...

ಹಿಂದುಳಿದ ಸಮುದಾಯಗಳೇ ಎಚ್ಚರ, ಮೋದಿ ನಿಮ್ಮ ಹಾದಿ ತಪ್ಪಿಸುತ್ತಿದ್ದಾರೆ: ಘರ್ಜಿಸಿದ ಸಿದ್ದರಾಮಯ್ಯ

ರಾಜ್ಯದ ಹಿಂದುಳಿದ ಸಮುದಾಯಗಳೇ ಎಚ್ಚರ. ಮೋದಿ ನಿಮ್ಮ ಹಾದಿ ತಪ್ಪಿಸಿ ಮುಸ್ಲಿಮರ...