ಮಾಜಿ ಸಚಿವ ಕೆ.ಎನ್ ರಾಜಣ್ಣ BJP ಸೇರುತ್ತಾರೆ: ಕಾಂಗ್ರೆಸ್‌ ಶಾಸಕ ಬಾಲಕೃಷ್ಣ

Date:

ಮತಗಳ್ಳತನ ವಿರುದ್ದ ಹೋರಾಟದ ವಿಚಾರವಾಗಿ ತಮ್ಮದೇ ಪಕ್ಷದ ವಿರುದ್ಧ ಮಾತನಾಡಿ, ಸಚಿವ ಸ್ಥಾನ ಕಳೆದುಕೊಂಡಿರುವ ಕೆ.ಎನ್‌ ರಾಜಣ್ಣ ಅವರು ಬಿಜೆಪಿ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ. ಕೆ.ಎನ್ ರಾಜಣ್ಣ ಬಿಜೆಪಿಗೆ ಸೇರಿಕೊಳ್ಳಲು ಅರ್ಜಿ ಹಾಕಿದ್ದಾರೆ ಎಂದು ಕಾಂಗ್ರೆಸ್‌ ಶಾಸಕ ಎಚ್‌.ಸಿ ಬಾಲಕೃಷ್ಣ ಆರೋಪಿಸಿದ್ದಾರೆ.

- Advertisement -

ಸಹಕಾರ ಸಚಿವರಾಗಿದ್ದ ರಾಜಣ್ಣ ಅವರನ್ನು ಅಧಿವೇಶನ ನಡೆಯುತ್ತಿದ್ದ ಸಮಯಲ್ಲಿಯೇ ಸಚಿವ ಸಂಪುಟದಿಂದ ಕೈಬಿಡಲಾಯಿತು. ಈ ಬಗ್ಗೆ ವಿಧಾನಸಭೆ ಮತ್ತು ವಿಧಾನ ಪರಿಷತ್‌ನಲ್ಲಿ ಭಾರೀ ಚರ್ಚೆಯಾಗಿತ್ತು. ಮಾತ್ರವಲ್ಲದೆ, ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ಕೈಬಿಟ್ಟಿದ್ದನ್ನು ವಿರೋಧಿಸಿ ಅವರ ಅಭಿಮಾನಿಗಳು ಮಧುಗಿರಿಯಲ್ಲಿ ಪ್ರತಿಭಟನೆ ನಡೆಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದೆಲ್ಲದರ ನಡುವೆ, ರಾಜಣ್ಣ ಅವರ ಭವಿಷ್ಯದ ನಡೆಯ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಇದೇ ಹೊತ್ತಿನಲ್ಲಿ ಮಾಗಡಿ ಶಾಸಕ ಬಾಲಕೃಷ್ಣ ಅವರು ರಾಜಣ್ಣ ಬಿಜೆಪಿಗೆ ಹೋಗುತ್ತಾರೆ ಎಂದು ಆರೋಪಿಸಿದ್ದಾರೆ.

“ರಾಜಣ್ಣ ಮಂತ್ರಿಯಾಗಿದ್ದಾಗ ಯಾವ ರೀತಿ ನಡೆದುಕೊಂಡರು ಎಂಬುದನ್ನು ಜಗತ್ತು ಗಮನಿಸಿದೆ. ʼಮಾತು ಮನೆ ಕೆಡಿಸಿತು, ತೂತು ಒಲೆ ಕೆಡಿಸಿತುʼ ಎನ್ನುವಂತೆ ಅವರು ಮಾತಾಡುತ್ತಿದ್ದರು. ಅವರ ಹೇಳಿಕೆಯಿಂದಲೇ ಅವರು ಸಚಿವ ಸ್ಥಾನ ಕಳೆದುಕೊಂಡರು. ಇದರ ಹಿಂದೆ ಯಾರದ್ದೇ ಷಡ್ಯಂತ್ರವಿಲ್ಲ” ಎಂದು ಬಾಲಕೃಷ್ಣ ಹೇಳಿದ್ದಾರೆ.

“ಹೈಕಮಾಂಡ್‌ ವಿರುದ್ಧ ಮಾತನಾಡಿದ್ದಾಗಿ ಅವರನ್ನು ವಜಾಗೊಳಿಸಲಾಗಿದೆ. ಅವರು ಬೇರೆ ಪಕ್ಷಕ್ಕೆ ಹೋಗುವ ಮುನ್ನ ನಮ್ಮ ಮೇಲೆ ಗೂಬೆ ಕೂರಿಸಲು ಯತ್ನಿಸುತ್ತಿದ್ದಾರೆ. ನನಗೆ ಯಾವ ಪಕ್ಷದ ಅವಶ್ಯಕತೆಯೂ ಇಲ್ಲವೆಂದು ಅವರು ಹೇಳಿಕೊಳ್ಳುತ್ತಿದ್ದರು. ಆದರೆ, ಅವರು ಯಾರ ಸಂಪರ್ಕದಲ್ಲಿದ್ದಾರೆ ಎಂಬುದು ಗೊತ್ತಾಗಬೇಕು. ಅವರನ್ನು ಬ್ರೈನ್ ಮ್ಯಾಪಿಂಗ್‌ಗೆ ಒಳಪಡಿಸಿದರೆ, ಸತ್ಯ ಗೊತ್ತಾಗುತ್ತದೆ. ಅವರು ಈಗಾಗಲೇ ಒಂದು ಕಾಲು ಹೊರಗೆ ಇಟ್ಟಿದ್ದಾರೆ. ಬೇರೆ ಪಕ್ಷ ಸೇರುತ್ತಾರೆ” ಎಂದು ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಫಾದರ್ ವಿರುದ್ಧ ಪೋಕ್ಸೋ ಕೇಸ್

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ...