ಸಚಿವ ವೆಂಕಟೇಶ್‌ ಕಸಾಯಿ ಖಾನೆಗೆ ಭೇಟಿ ನೀಡಿ ಬಳಿಕ ಹೇಳಿಕೆ ನೀಡಲಿ; ಪ್ರಭು ಚೌಹಾಣ್‌

Date:

  • ಪಶುಸಂಗೋಪನೆ ಸಚಿವ ಕೆ ವೆಂಕಟೇಶ್ ಹೇಳಿಕೆಗೆ ಮಾಜಿ ಸಚಿವ ತಿರುಗೇಟು
  • ಗೋ ಹತ್ಯೆ ನಿಷೇಧ ಕಾಯ್ದೆ ಕಾಂಗ್ರೆಸ್ ಅವಧಿಯಲ್ಲಿ 1964ರಿಂದಲೂ ಅಸ್ತಿತ್ವದಲ್ಲಿತ್ತು

ಗೋವುಗಳನ್ನು ಏಕೆ ಕಡಿಯಬಾರದು ಎನ್ನುವ ನಿಮ್ಮ ಮನಸ್ಥಿತಿಯೇ ನನಗೆ ವಿಚಿತ್ರವಾಗಿ ಕಾಣಿಸುತ್ತಿದೆ. ಒಂದಿಷ್ಟು ಕಸಾಯಿ ಕಾಖಾನೆಗಳಿಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ, ಗೋವುಗಳ ದಾರುಣ ಅಂತ್ಯ ಎಲ್ಲವನ್ನು ನೋಡಿದ ನಂತರ ಮತ್ತೊಮ್ಮೆ ಆಲೋಚನೆ ಮಾಡಿ ಹೇಳಿಕೆ ನೀಡಿ ಎಂದು ಪಶುಸಂಗೋಪನಾ ಇಲಾಖೆ ಮಾಜಿ ಸಚಿವ ಪ್ರಭು ಚೌಹಾಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೋರಡಿಸಿರುವ ಪ್ರಭು ಚೌಹಾಣ್ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ತನ್ನ ನಿಜ ಬಣ್ಣವನ್ನು ತೋರಿಸಲು ಪ್ರಾರಂಭಿಸಿದೆ. ಯಾರ ಹೊಟ್ಟೆಯನ್ನು ತುಂಬಲು ಗೋವುಗಳನ್ನು ಕಡಿಯಲು ಪ್ರೇರಣೆ ನೀಡುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

ಗೋ ಹತ್ಯೆ ನಿಷೇಧ ಕಾಯ್ದೆ ಕಾಂಗ್ರೆಸ್ ಅವಧಿಯಲ್ಲಿ 1964ರಿಂದಲೂ ಅಸ್ತಿತ್ವದಲ್ಲಿತ್ತು. ಆಗಲೂ ಹಸುವನ್ನು ಕಡಿಯಬಾರದು ಎಂದು ಕಾನೂನಾಗಿತ್ತು. ಆದರೆ, ಆ ಕಾನೂನಿನಲ್ಲಿದ್ದ ಕೆಲ ದುರ್ಬಲವಾದ ಅಂಶಗಳನ್ನು ಗಣನೆಗೆ ತೆಗೆದುಕೊಂಡು ಗೋಹತ್ಯೆ ನಿಷೇಧ ಕಾಯ್ದೆಯನ್ನು ನಮ್ಮ ಸರ್ಕಾರದ ಅವಧಿಯಲ್ಲಿ ಬಲಪಡಿಸಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಕೇವಲ ರಾಜಕೀಯ ಲಾಭ ನಷ್ಟದ ದೃಷ್ಟಿಯಿಂದ ನೋಡುವ ಬದಲು ಜನಸಾಮಾನ್ಯನ, ರೈತನ ಜೀವನದಲ್ಲಿ ಇರುವ ಅದರ ಭಾವನಾತ್ಮಕ ಸಂಬಂಧದ ಬಗ್ಗೆ ತಿಳಿದುಕೊಂಡು ಮಾತನಾಡುವುದು ಒಳ್ಳೆಯದು ಎಂದು ಸಲಹೆ ನೀಡಿದ್ದಾರೆ.

ಮನೆಯಲ್ಲಿ ಗೋವು ಸಾಕುವುದಿಲ್ಲವೆಂದ ಮಾತ್ರಕ್ಕೆ ಅದರ ಬಗ್ಗೆ ಭಾವನಾತ್ಮಕ ಸಂಬಂಧ ಇರಬಾರದು ಎಂದೇನಿಲ್ಲ. ಅದು ತಾಯಿಯಂತೆ ನಿತ್ಯ ಪೂಜೆಗೊಳಗಾಗುವ ದೈವ. ಅದರ ಸಂರಕ್ಷಣೆ, ಪೋಷಣೆ ಮತ್ತು ಗೋ ತಳಿಗಳ ಅಭಿವೃದ್ಧಿ ಸರ್ಕಾರದ ಮೂಲ ಕರ್ತವ್ಯವಾಗಿರಬೇಕೇ ಹೊರತು ಗೋವುಗಳನ್ನು ಕಡಿಯುವುದಕ್ಕೆ ಪ್ರೇರೇಪಿಸುವುದಲ್ಲ ಎಂದು ಕಿಡಿ ಕಾರಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗೋಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ಬಗ್ಗೆ ಚರ್ಚಿಸಿ ತೀರ್ಮಾನ: ಪಶುಸಂಗೋಪನೆ ಸಚಿವ ವೆಂಕಟೇಶ್

ನಮ್ಮ ಸರ್ಕಾರದ ಅವಧಿಯಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಅನುಷ್ಠಾನದ ನಂತರ ಗೋವುಗಳ ಸಂರಕ್ಷಣೆಗೆ ಶ್ರಮ ಪಟ್ಟಿದ್ದೇವೆ. ಪ್ರಾಣಿ ಕಲ್ಯಾಣ ಸಹಾಯವಾಣಿ, ಪ್ರಾಣಿ ಕಲ್ಯಾಣ ಮಂಡಳಿ, ಜಿಲ್ಲೆಗೊಂದು ಗೋಶಾಲೆ, ಪಶು ಚಿಕಿತ್ಸಾ ವಾಹನ ಹೀಗೆ ಗೋ ಸಂರಕ್ಷಣೆಗೆ ಬೇಕಾದ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ.

ಗೋವನ್ನು ಒಮ್ಮೆ ವೈಜ್ಞಾನಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಅಧ್ಯಯನ ನಡೆಸಿ ನಂತರ ತೀರ್ಮಾನಿಸಿ ಎಂದು ಕಾಂಗ್ರೆಸ್ಸಿನ ಪಶುಸಂಗೋಪನಾ ಸಚಿವ ವೆಂಕಟೇಶ್ ಅವರಿಗೆ ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ಜಾತಿ ನಿಂದನೆ; ನಟ ಉಪೇಂದ್ರ ಬಂಧನಕ್ಕೆ ಆಗ್ರಹ

ನಟ ಉಪೇಂದ್ರ ಅವರು, ʼಊರು ಇದ್ದಲ್ಲಿ ಹೊಲಗೇರಿʼ ಎನ್ನುವ ಮಾತನ್ನು ಹೇಳುವುದರ...

ಕಾವೇರಿ ವಿವಾದ | ಬೆಂಗಳೂರು ಬಂದ್‌ಗೆ ಎಫ್‌ಐಟಿಯು ಬೆಂಬಲ: ಅಬ್ದುಲ್ ರಹಿಮಾನ್

ಕಾವೇರಿ ಜಲ ವಿವಾದದ ಹಿನ್ನಲೆಯಲ್ಲಿ ಮಂಗಳವಾರ ನಡೆಯಲಿರುವ ಬೆಂಗಳೂರು ಬಂದ್‌ಗೆ ಫೆಡರೇಶನ್...

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲು ಮಸೂದೆಗೆ ತಿದ್ದುಪಡಿ: ಮಲ್ಲಿಕಾರ್ಜುನ ಖರ್ಗೆ

2024ರಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲಾತಿ ಮಸೂದೆಗೆ ತಿದ್ದುಪಡಿ ತರುವುದಾಗಿ...

ಬೀದರ್‌ | ಪಡಿತರದಲ್ಲಿ ಅಕ್ರಮ; 22 ನ್ಯಾಯಬೆಲೆ ಅಂಗಡಿಗಳ ಅಮಾನತು

ಪಡಿತರ ಮಾರಾಟದಲ್ಲಿ ನಿಗದಿತ ಬೆಲೆಗಿಂತ ಹೆಚ್ಚು ದರ ವಿಧಿಸುವುದು, ಇಲ್ಲವೇ ಬಯೋಮೆಟ್ರಿಕ್‌...