ಕಾಂಗ್ರೆಸ್ ಕಾರ್ಯಕರ್ತೆ ಮೇಲೆ ಮಾಜಿ ಸಚಿವ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ರೇವಣ್ಣ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ರೇವಣ್ಣ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತೆ ನಂದಿನಿ ನಾಗರಾಜ್ ದೂರು ದಾಖಲಿಸಿದ್ದಾರೆ. “ಬೆಂಗಳೂರಿನಲ್ಲಿರುವ ಸರ್ಕಾರದ ಕುಮಾರಕೃಪಾ ಅತಿಥಿ ಗೃಹದಲ್ಲಿ ಸೋಮವಾರ ತಮ್ಮ ಮೇಲೆ ರೇವಣ್ಣ ಹಲ್ಲೆ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.
“ರೇವಣ್ಣ ಅವರು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ಥಳಿಸಿದ್ದಾರೆ. ಕೊಲೆಗೆ ಯತ್ನಿಸಿದ್ದಾರೆ: ಎಂದು ನಂದಿನಿ ಆರೋಪಿಸಿದ್ದಾರೆ.
ಆದಾಗ್ಯೂ, ಘಟನೆ ಬಗ್ಗೆ ಸ್ಪಷ್ಟನೆ ನೀಡಿರುವ ಎಚ್.ಎಂ ರೇವಣ್ಣ, “ಆಕೆ ಯಾರು ಎಂಬುದು ನನಗೆ ಗೊತ್ತಿಲ್ಲ. ಕಿರಿಕಿರಿ ಮಾಡುತ್ತಾ ಗಲಾಟೆ ಮಾಡುತ್ತಿದ್ದರು. ಆಕೆಗೆ ವಿಡಿಯೋ ಮಾಡಬೇಡಮ್ಮ ಎಂದು ಆಕೆಯ ಮೊಬೈಲ್ ತಳ್ಳಿದೆ, ಅಷ್ಟೇ. ಆದರೆ, ಥಳಿಸಿದರು, ಹಲ್ಲೆ ಮಾಡಿದರು ಎಂದೆಲ್ಲ ಆರೋಪಿಸುವುದು ಸುಳ್ಳು. ನಾನು ತಪ್ಪು ಮಾಡಿದ್ದರೆ ಶಿಕ್ಷೆ ಆಗಲಿ” ಎಂದಿದ್ದಾರೆ.