ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂದು ಮಾಜಿ ಸಚಿವ ವಿ ಸೋಮಣ್ಣ ಹೇಳುವ ಮೂಲಕ ಹಾಲಿ ಸಂಸದ ತೇಜಸ್ವಿ ಸೂರ್ಯ ಅವರ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ.
ಬೆಂಗಳೂರಿನ ಗೋವಿಂದರಾಜ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸೋಮಣ್ಣ, “ನಾನೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ” ಎಂದಿದ್ದಾರೆ.
“ನಾನು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಲು ಬಯಸಿದ್ದೇನೆ. ಕಳೆದ ಕೆಲವು ವರ್ಷಗಳಿಂದ ನಿರ್ದಿಷ್ಟ ಸಮುದಾಯಕ್ಕೇ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಲಾಗುತ್ತಿದೆ. ಈ ಬಾರಿ ಬೇರೆ ಸಮುದಾಯಗಳಿಗೂ ಬಿಜೆಪಿ ಹೈಕಮಾಂಡ್ ಪ್ರಾತಿನಿಧ್ಯ ನೀಡಬೇಕು” ಎಂದು ಬೇಡಿಕೆ ಮುಂದಿಟ್ಟಿದ್ದಾರೆ.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಕ್ಷೇತ್ರದ ಟಿಕೆಟ್ ತಮಗೆ ಬೇಕೆಂದು ಬಹಿರಂಗವಾಗಿ ಬೇಡಿಕೆ ಇಟ್ಟಿದ್ದಾರೆ. ಅಲ್ಲದೇ ವಿಧಾನಸಭಾ ಚುನಾವಣೆಯಲ್ಲಿ ಯಾರ್ಯಾರು ಸೋಲಿಗೆ ಕಾರಣರಾದರೋ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲೇಬೇಕು. ಮತ್ತೊಂದು ಬಾರಿ ನಿಮ್ಮನ್ನೆಲ್ಲ ಕರೆದು ಚರ್ಚೆ ನಡೆಸುತ್ತೇನೆ ಎಂದು ಸಭೆಯಲ್ಲಿ ಭಾವುಕರಾಗಿ ಮಾತನಾಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಜೆಡಿಎಸ್ ಜೊತೆ ಹೊಂದಾಣಿಕೆಗೆ ಯಾವುದೇ ಪ್ರಸ್ತಾವ ಪಕ್ಷದ ಮುಂದಿಲ್ಲ: ನಳಿನ್ ಕುಮಾರ್ ಕಟೀಲ್
ಸೋಮಣ್ಣ ಬೆಂಗಳೂರು ದಕ್ಷಿಣ ಕ್ಷೇತ್ರದ ಟಿಕೆಟ್ ಬೇಡಿಕೆ ಇಟ್ಟಿದ್ದಾರೆ. ಆದರೆ, ಹೈಕಮಾಂಡ್, ಹಾಲಿ ಸಂಸದ, ಬಿಜೆಪಿ ರಾಷ್ಟ್ರೀಯ ಯುವ ಘಟಕದ ಸಾರಥಿ ತೇಜಸ್ವಿ ಸೂರ್ಯ ಅವರನ್ನು ಬಿಟ್ಟು ಸೋಮಣ್ಣ ಅವರಿಗೆ ಮಣೆ ಹಾಕುವುದೇ, ಕಾದು ನೋಡಬೇಕು.
ವಿ ಸೋಮಣ್ಣ ಅವರು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಮತ್ತು ಚಾಮರಾಜನಗರ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದರು.