ಮೋದಿ ನೇತೃತ್ವದ ಹೊಸ ಸರ್ಕಾರದಲ್ಲಿ ಹಿಂದಿನ ಸಚಿವರಿಗೆ ಖೊಕ್!

Date:

Advertisements

ಮೋದಿ ಮೂರನೇ ಅವಧಿಗೆ ಪ್ರಧಾನಿ ಆಗಲಿದ್ದಾರೆ. ಯಾವುದೇ ಪಕ್ಷಕ್ಕೂ ಬಹುಮತವಿಲ್ಲದ ಸಮ್ಮಿಶ್ರ ಸರ್ಕಾರದಲ್ಲಿ ಮೊದಲ ಬಾರಿಗೆ ಮೋದಿ ಪ್ರಧಾನಿ ಆಗುತ್ತಿದ್ದಾರೆ. ಬಹುಮತವಿಲ್ಲದ ಬಿಜೆಪಿಗೆ ಸಮ್ಮಿಶ್ರ ಸರ್ಕಾರವನ್ನು ನಡೆಸುವ ಸವಾಲು ಇದೆ. ಅದರಲ್ಲೂ, ಹಿಂದಿನ ಮೋದಿ ಸರ್ಕಾರದಲ್ಲಿ ಸಚಿವರಾಗಿದ್ದ 19 ಮಂತ್ರಿಗಳು ಹೀನಾಯವಾಗಿ ಸೋಲುಂಡಿದ್ದಾರೆ. ಅವರಲ್ಲಿ, ಸ್ಮೃತಿ ಇರಾನಿ, ರಾಜೀವ್ ಚಂದ್ರಶೇಖರ್, ಆರ್ ಕೆ ಸಿಂಗ್ ಮತ್ತು ಅರ್ಜುನ್ ಮುಂಡಾ ಪ್ರಮುಖರು.

ಈಗ ಮೋದಿ ನೇತೃತ್ವದಲ್ಲಿ ಹೊಸ ಸರ್ಕಾರ ರಚನೆಯಾಗುತ್ತಿದೆ. ತಮ್ಮ ಮಿತ್ರ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎನ್‌ಡಿಎ ಸರ್ಕಾರವನ್ನು ಮುನ್ನಡೆಸುವ ಸವಾಲು ಮೋದಿ-ಶಾ ಜೋಡಿಗಿದೆ. ಮಿತ್ರ ಪಕ್ಷಗಳು ಸಂಪುಟದಲ್ಲಿ ನಾನಾ ಸ್ಥಾನಗಳಿಗೆ ಬೇಡಿಕೆ ಇಟ್ಟಿದ್ದು, ಅವರಿಗೂ ಅವಕಾಶ ಕೊಡಬೇಕಾಗಿದೆ. ಹೀಗಾಗಿ, ಸೋತವರು ಮತ್ತು ಕಡಿಮೆ ಅಂತರದಲ್ಲಿ ಗೆದ್ದ ಹಿಂದಿನ ಸರ್ಕಾರದ ಮಂತ್ರಿಗಳನ್ನು ಈ ಬಾರಿಯ ಸಂಪುಟದಲ್ಲಿ ಕೈಬಿಟ್ಟು, ಹೊಸಬರಿಗೆ ಮಣೆ ಹಾಕಲು ಬಿಜೆಪಿ ಮುಂದಾಗಿದೆ ಎಂದು ವರದಿಯಾಗಿದೆ.

ಹೊಸ ಸಚಿವ ಸಂಪುಟದಲ್ಲಿ ಪ್ರಾದೇಶಿಕತೆ ಮತ್ತು ಜಾತಿ ಪ್ರಾತಿನಿಧ್ಯ ಹಾಗೂ ಆಡಳಿತಾತ್ಮಕ ಸಾಮರ್ಥ್ಯವನ್ನು ಗಣನೆಗೆ ತೆಗೆದುಕೊಳ್ಳುವ ಸಾಧ್ಯತೆಗಳು ಹೆಚ್ಚಾಗಿವೆ. ಅದಾಗ್ಯೂ, ಸೋತ ಮಂತ್ರಿಗಳಲ್ಲಿ ತಮ್ಮ ಸರ್ಕಾರದ ನೀತಿಗಳನ್ನು ಸಮರ್ಥಿಸಿಕೊಂಡಿದ್ದ ಸ್ಮೃತಿ ಇರಾನಿ, ಅರ್ಜುನ್ ಮುಂಡಾ ಮತ್ತು ಆರ್‌ಕೆ ಸಿಂಗ್ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಿ, ಮಂತ್ರಿಗಿರಿ ಕೊಡುವ ಸಾಧ್ಯತೆಗಳೂ ಇವೆ ಎಂದು ಹೇಳಲಾಗುತ್ತಿದೆ.

Advertisements

ಕಾಂಗ್ರೆಸ್‌ನ ಶಶಿ ತರೂರ್ ವಿರುದ್ಧ ಸ್ಪರ್ಧಿಸಿದ್ದ ರಾಜೀವ್ ಚಂದ್ರಶೇಖರ್ ತಿರುವನಂತಪುರಂನಲ್ಲಿ 16,077 ಮತಗಳ ಅಂತರದಿಂದ ಸೋತಿದ್ದರೆ, ಅಮೇಥಿಯಲ್ಲಿ ಸ್ಮೃತಿ ಇರಾನಿ 1.67 ಲಕ್ಷ ಮತಗಳ ಅಂತರದಿಂದ ಸೋತಿದ್ದಾರೆ. ಅರ್ಜುನ್ ಮುಂಡಾ 1.49 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಸೋತಿದ್ದಾರೆ.

ಕಡಿಮೆ ಅಂತದಿಂದ ಗೆದ್ದಿರುವ ಸಂಸದರನ್ನು ಸಂಪುಟದಲ್ಲಿ ಸಚಿವರನ್ನಾಗಿ ಸೇರಿಸಿಕೊಳ್ಳಲು ಬಿಜೆಪಿ ನಾಯಕತ್ವ ನಿರಾಕರಿಸುತ್ತಿದೆ ಎಂದು ಮೂಲಗಳು ಹೇಳುತ್ತಿವೆ. ಮುಂದಿನ ಸಂಪುಟದಲ್ಲಿ ಹಲವಾರು ಬದಲಾವಣೆಗಳಾಗಲಿದ್ದು, ರಾಜ್ಯಸಭೆ ಸದಸ್ಯೆಯಾಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಸಂಪುಟದಿಂದ ಕೈಬಿಡುವ ಸಾಧ್ಯತೆಗಳಿವೆ.

ಬುಡಕಟ್ಟು ವ್ಯವಹಾರಗಳ ಸಚಿವಾಲಯವನ್ನು ತನ್ನ ಮಿತ್ರ ಪಕ್ಷ ಟಿಡಿಪಿ ಅಥವಾ ಜೆಡಿಯುಗೆ ಬಿಟ್ಟುಕೊಡುವ ಸಾಧ್ಯತೆಗಳಿವೆ.

“ರೈಲ್ವೆ ಸಚಿವಾಲಯವನ್ನು ಬಿಜೆಪಿ ಉಳಿಸಿಕೊಂಡರೆ, ಅದರ ಎರಡು ಕೇಂದ್ರ ರಾಜ್ಯ ಸಚಿವ ಹುದ್ದೆಗಳಲ್ಲಿ ಒಂದು ಜೆಡಿಯು ಅಥವಾ ಟಿಡಿಪಿ ಅಥವಾ ಶಿವಸೇನಾ (ಶಿಂಧೆ ಬಣ)ಕ್ಕೆ ನೀಡುವ ಸಾಧ್ಯತೆಗಳಿವೆ. ಎನ್‌ಡಿಎ ಮೈತ್ರಿಕೂಟದ ಎಲ್ಲ ನಾಯಕರೊಂದಿಗೆ ಬಿಜೆಪಿ ಸಮಾಲೋಚನೆ ನಡೆಸುತ್ತಿದೆ ಎಂದು ವರದಿಯಾಗಿದೆ.

ಅಜಯ್ ಕುಮಾರ್ ಮಿಶ್ರಾ, ಸುಭಾಷ್ ಸರ್ಕಾರ್, ಕೈಲಾಶ್ ಚೌಧರಿ, ಸಂಜೀವ್ ಬಲ್ಯಾನ್, ರಾವ್ಸಾಹೇಬ್ ದಾನ್ವೆ, ಕುಶಾಲ್ ಕಿಶೋರ್, ನಿರಂಜನ್ ಜ್ಯೋತಿ ಮತ್ತು ಮಹೇಂದ್ರ ನಾಥ್ ಪಾಂಡೆ ಅವರು ಚುನಾವಣೆಯಲ್ಲಿ ಸೋತಿರುವ ಕೇಂದ್ರ ರಾಜ್ಯ ಸಚಿವರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X