ಎ ಟಿ ರಾಮಸ್ವಾಮಿ ಬಿಜೆಪಿ ಸೇರ್ಪಡೆ

Date:

Advertisements
  • ಎ ಟಿ ರಾಮಸ್ವಾಮಿ ಕಾಂಗ್ರೆಸ್ ಸೇರುವ ವದಂತಿಗೆ ತೆರೆ
  • ಪಕ್ಷಕ್ಕೆ ಬರಮಾಡಿಕೊಂಡ ಸಚಿವ ಅನುರಾಗ್ ಠಾಕೂರ್

ಅರಕಲಗೂಡು ಮಾಜಿ ಶಾಸಕ ಎ ಟಿ ರಾಮಸ್ವಾಮಿ ಅವರು ಇಂದು (ಏಪ್ರಿಲ್‌ 1) ದೆಹಲಿಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಜೆಡಿಎಸ್ ಕಟ್ಟಾಳು ಎಂದೇ ಗುರುತಿಸಿಕೊಂಡಿದ್ದ ಸಜ್ಜನ ರಾಜಕಾರಣಿ ಎ ಟಿ ರಾಮಸ್ವಾಮಿ ದೆಹಲಿಯಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಕೇಂದ್ರ ಸಚಿವ ಅನುರಾಗ್ ಠಾಕೂರ್‌ ನೇತೃತ್ವದಲ್ಲಿ ಕಮಲ ಪಡೆ ಸೇರಿಕೊಂಡಿದ್ದಾರೆ. ಈ ಮೂಲಕ ಬಿಜೆಪಿಯ ಅರಕಲಗೂಡು ಕ್ಷೇತ್ರ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

ಎ ಟಿ ರಾಮಸ್ವಾಮಿ ಸೇರ್ಪಡೆ ಕುರಿತು ಮಾತನಾಡಿದ ಅನುರಾಗ್ ಸಿಂಗ್ ಠಾಕೂರ್, “ರಾಮಸ್ವಾಮಿ ಅವರು ಸರಿಯಾದ ನಿರ್ಧಾರ ತೆಗೆದುಕೊಂಡಿದ್ದಾರೆ. ದೇಶದ ಅತಿದೊಡ್ಡ ಪಕ್ಷವನ್ನು ಸೇರಿದ್ದಾರೆ. ಅವರ ಸೇರ್ಪಡೆಯಿಂದ ಬಿಜೆಪಿಗೂ ಶಕ್ತಿ ಸಿಗಲಿದೆ” ಎಂದಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? `ಜೆಡಿಎಸ್‌ನವರೆ ನನ್ನನ್ನು ಹೊರ ಹಾಕಿದ್ರು’: ಶಾಸಕ ಸ್ಥಾನಕ್ಕೆ ಎಟಿಆರ್ ರಾಜೀನಾಮೆ

ಎ ಟಿ ರಾಮಸ್ವಾಮಿ ಅವರು ಜೆಡಿಎಸ್‌ನಿಂದ ಹೊರ ಬಂದ ಬಳಿಕ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆಂಬ ಮಾತುಗಳು ಈ ಮೊದಲು ಕೇಳಿ ಬಂದಿದ್ದವು. ಆದರೆ, ಕಾಂಗ್ರೆಸ್‌ನಲ್ಲಿ ಟಿಕೆಟ್ ದೊರೆಯುವ ಸೂಚನೆ ಸಿಗದಿದ್ದರಿಂದ ಇದೀಗ ಬಿಜೆಪಿ ಸೇರಿದ್ದಾರೆ ಎನ್ನಲಾಗಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಮಸ್ವಾಮಿ ಅವರು ಕಾಂಗ್ರೆಸ್ ಅಭ್ಯರ್ಥಿ ಎ ಮಂಜು ವಿರುದ್ಧ ಗೆಲುವು ಸಾಧಿಸಿದ್ದರು. ಆದರೆ, ಈ ಬಾರಿ ಕ್ಷೇತ್ರದ ಚಿತ್ರಣವೇ ಬದಲಾಗಿದೆ. ಎ.ಮಂಜು ಅವರು ಜೆಡಿಎಸ್‌ಗೆ ಸೇರ್ಪಡೆಗೊಂಡು ಅಭ್ಯರ್ಥಿಯಾಗಲಿದ್ದಾರೆ.

1989, 1994ರಲ್ಲಿ ಕಾಂಗ್ರೆಸ್‌ನಿಂದ ಮತ್ತು 2004 ಮತ್ತು 2018ರಲ್ಲಿ ಜೆಡಿಎಸ್‌ನಿಂದ ವಿಧಾನಸಭೆ ಪ್ರವೇಶ ಮಾಡಿದ್ದ ರಾಮಸ್ವಾಮಿ ಅವರು ಈ ಬಾರಿಯ ತಮ್ಮ ಮೂರನೇ ಪಕ್ಷ ಬಿಜೆಪಿಯಿಂದ ಕಣಕ್ಕಿಳಿಯಲು ಸಿದ್ಧತೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X