ಮಾಜಿ ಶಾಸಕ ಕೆ ರಘುಪತಿ ಭಟ್ ಬಿಜೆಪಿಯಿಂದ ಉಚ್ಚಾಟನೆ

Date:

ವಿಧಾನ ಪರಿಷತ್ ಟಿಕೆಟ್ ನೀಡದ ಕಾರಣಕ್ಕಾಗಿ ಬಿಜೆಪಿಯೊಳಗೆ ಬಂಡಾಯ ಎದ್ದು, ನೈಋತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಶಾಸಕ ಕೆ ರಘುಪತಿ ಭಟ್ ಅವರನ್ನು ಬಿಜೆಪಿ ಆರು ವರ್ಷಗಳ ಕಾಲ ಉಚ್ಚಾಟಿಸಿದೆ.

- Advertisement -

ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್‌ ಪಾಟೀಲ್‌ ಅವರು ಉಚ್ಚಾಟನಾ ಆದೇಶ ಹೊರಡಿಸಿದ್ದು, ಈ ಆದೇಶದಲ್ಲಿ, “ಪಕ್ಷದ ಸೂಚನೆಯನ್ನು ಕಡೆಗಣಿಸಿ ವಿಧಾನ ಪರಿಷತ್ ಚುನಾವಣೆಗೆ ನೈಋತ್ಯ ಪದವೀಧರ ಕ್ಷೇತ್ರದಿಂದ ನಮ್ಮ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧವೇ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷಕ್ಕೆ ಮುಜುಗರ ತಂದಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ. ತಮ್ಮನ್ನು ತಕ್ಷಣದಿಂದಲೇ ಪಕ್ಷದ ಎಲ್ಲ ಜವಾಬ್ದಾರಿಗಳಿಂದ ಮುಕ್ತಗೊಳಿಸಿ, ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಉಡುಪಿ ಬಿಜೆಪಿಯ ಮಾಜಿ ಶಾಸಕ ರಘುಪತಿ ಭಟ್‌ಗೆ ಬಿಜೆಪಿ ರಾಜ್ಯ ಶಿಸ್ತು ಸಮಿತಿ ನೋಟಿಸ್ ಎರಡು ದಿನದ ಹಿಂದೆಯೇ ನೋಟಿಸ್‌ ನೀಡಿ, 2 ದಿನದೊಳಗಾಗಿ ಸ್ಪಷ್ಟೀಕರಣ ನೀಡುವಂತೆ ಸೂಚನೆ ನೀಡಿತ್ತು.

ಕೆ ರಘುಪತಿ ಭಟ್‌

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSSಗೆ ಅಪಾರ್ಟ್‌ಮೆಂಟ್ ಬಾಗಿಲು ತೆರೆದಿದ್ದಕ್ಕೆ ಪ್ರಿಯಾಂಕ್ ಖರ್ಗೆ ಆಕ್ಷೇಪ: ಪಾರದರ್ಶಕತೆ ಪ್ರಶ್ನಿಸುವಂತೆ ಸಂಘಗಳಿಗೆ ಸಲಹೆ

ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಆರ್‌ಎಸ್‌ಎಸ್‌ ಆಯೋಜಿಸಿದ್ದ ಸಭೆಗೆ ಗೃಹ ಸಚಿವ ಪ್ರಿಯಾಂಕ್...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...