ಬಿಜೆಪಿಯೊಂದಿಗೆ ಜೆಡಿಎಸ್ ಮಾಡಿಕೊಂಡಿರುವ ಮೈತ್ರಿಯಿಂದ ಬೇಸತ್ತು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿರುವುದಾಗಿ ಮಾಜಿ ಶಾಸಕ ಎಸ್ ಶಫಿ ಅಹಮದ್ ಹೇಳಿದ್ದಾರೆ.
ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ, ಮುಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಅವರು ಬುಧವಾರ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಸಿ.ಎಂ ಇಬ್ರಾಹಿಂ ಅವರ ಕರೆಯ ಮೇರೆಗೆ ಜೆಡಿಎಸ್ ಪಕ್ಷಕ್ಕೆ ಸೇರಿದ್ದೆ ಎಂದು ಅವರು ಹೇಳಿದ್ದಾರೆ.
ಜೆಡಿಎಸ್ ಪಕ್ಷದ ರಾಜ್ಯ ಹಿರಿಯ ಉಪಾಧ್ಯಕ್ಷರಾಗಿ ಅಹಮದ್ ಕಾರ್ಯನಿರ್ವಹಿಸಿದ್ದರು. ಇತ್ತೀಚೆಗೆ ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಅವರು ಬುಧವಾರ ಕಾಂಗ್ರೆಸ್‌ಗೆ ಮರಳಿ ಬಂದಿದ್ದಾರೆ.
ಅವರು ಕಾಂಗ್ರೆಸ್ ಸೇರುವ ವೇಳೆ, ಸಚಿವ ಮಧು ಬಂಗಾರಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಸರಕಾರದ ಮುಖ್ಯ ಸಚೇತಕ ಸಲೀಂ ಅಹಮದ್, ಮಾಜಿ ಸಂಸದ ಚಂದ್ರಪ್ಪ ಇದ್ದರು.