ಜೆಡಿಎಸ್‌ಗೆ ಆಘಾತ; ಕಾಂಗ್ರೆಸ್ ಸೇರಿದ ಮಂಡ್ಯ ಭಾಗದ ಮೂವರು ಮಾಜಿ ಶಾಸಕರು

Date:

ಮಂಡ್ಯ ಜಿಲ್ಲೆಯ ಜೆಡಿಎಸ್ ನಾಯಕ ಮಾಜಿ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ, ಮಾಜಿ ಎಂಎಲ್‌ಸಿ ಅಪ್ಪಾಜಿಗೌಡ, ಮಾಜಿ ಶಾಸಕ ಎಂ ಶ್ರೀನಿವಾಸ, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ವೆಂಕಟೇಶ್, ಸದಸ್ಯ ಯೋಗೇಶ್, ಮಂಜುನಾಥ್ ಗೌಡ ಹಾಗೂ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಆಶಾ ಸುರೇಶ್ ಅವರು ಸೇರಿದಂತೆ ನೂರಾರು ಕಾರ್ಯಕರ್ತರು ಜೆಡಿಎಸ್ ಮತ್ತು ಬಿಜೆಪಿ ತೊರೆದು ಶುಕ್ರವಾರ ಕಾಂಗ್ರೆಸ್ ಸೇರ್ಪಡೆಗೊಂಡರು.

- Advertisement -

ಬಿಜೆಪಿ ಜತೆ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದ್ದರಿಂದ ಆಕ್ರೋಶಗೊಂಡು ವಿಧಾನ ಪರಿಷತ್ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿ ಜೆಡಿಎಸ್ ತೊರೆದ ಮರಿತಿಬ್ಬೇಗೌಡ ಅವರು ತಮ್ಮ ಅಪಾರ ಅಭಿಮಾನಿಗಳ ಜತೆ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಸಿಎಂ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಇವರೆನ್ನಲ್ಲ ಕಾಂಗ್ರೆಸ್‌ಗೆ ಸ್ವಾಗತಿಸಿದರು.

ಕಾಂಗ್ರೆಸ್ ಸೇರಿದ ಬಳಿಕ ಮಾತನಾಡಿದ ಮರಿತಿಬ್ಬೇಗೌಡ, “ಜಾತ್ಯಾತೀತ ತತ್ವಗಳನ್ನು ಜೆಡಿಎಸ್ ಗಾಳಿಗೆ ತೂರಿದ ಕಾರಣ ನನ್ನ ಕ್ಷೇತ್ರದ ಶಿಕ್ಷಕರ ಅಭಿಪ್ರಾಯ ಕೇಳಿ ಕಾಂಗ್ರೆಸ್ ಪಕ್ಷಕ್ಕೆ ಸೇರುವ ತೀರ್ಮಾನ ಮಾಡಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ, ಚಿಕ್ಕೋಡಿ, ಉತ್ತರ ಕನ್ನಡ ಕ್ಷೇತ್ರದಲ್ಲಿ ಒಗ್ಗಟ್ಟಾಗಿ ಚುನಾವಣೆ ಮಾಡಿ, ಗೆಲುವು ಖಚಿತ: ಸಿಎಂ ಸಿದ್ದರಾಮಯ್ಯ 

“ಜೆಡಿಎಸ್ ಅಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಗೆ, ಕಾರ್ಯಕರ್ತರ, ಮುಖಂಡರ ಅಭಿಪ್ರಾಯಗಳಿಗೆ ಬೆಲೆ ಇಲ್ಲ. ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ಕಾವೇರಿ ವಿಚಾರವನ್ನು ಭಾವನಾತ್ಮಕವಾಗಿ ಬಳಸಿಕೊಂಡಿದ್ದಾರೆ. ರೈತರ ಹೆಸರೇಳಿಕೊಂಡು ಜನತಾದಳ ಕೇವಲ ರಾಜಕಾರಣ ಮಾಡಿದೆ. ಮಂಡ್ಯ ಜಿಲ್ಲೆಗೆ ಜೆಡಿಎಸ್ ಕೊಡುಗೆ ಶೂನ್ಯ. ಚೆಲುವರಾಯ ಸ್ವಾಮಿ ಅವರು ಆರೋಗ್ಯ ಸಚಿವರಾಗಿದ್ದಾಗ ಮೆಡಿಕಲ್ ಕಾಲೇಜು ತಂದರು” ಎಂದು ಹೇಳಿದರು.

“ಜನತಾದಳದವರು ನನಗೆ ಟಿಕೆಟ್ ಮಾತ್ರ ನೀಡಿದರು ಆದರೆ ಬೆಂಬಲ ಮಾತ್ರ ನೀಡಲಿಲ್ಲ. ಕೇವಲ ಕುಟುಂಬದ ಪರವಾಗಿ ಮಾತ್ರ ಪಕ್ಷದ ಸಭೆಗಳಲ್ಲಿ ತೀರ್ಮಾನ ತೆಗೆದುಕೊಳ್ಳುತ್ತಿದ್ದರು. ನಾನು ಅನೇಕ ಬಾರಿ ಇದರ ವಿರುದ್ಧ ದನಿ ಎತ್ತಿದ್ದೇನೆ. ರೈತ ವಿರೋಧಿ ಕಾಯ್ದೆಗಳನ್ನು ಜೆಡಿಎಸ್ ಬೆಂಬಲ ವ್ಯಕ್ತಪಡಿಸಿದಾಗ ನಾನು ವಿರೋಧ ವ್ಯಕ್ತಪಡಿಸಿದ್ದೆ” ಎಂದರು.

“ಕಳೆದ 4 ಬಾರಿ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿದ್ದೆ. ಮೊದಲನೇ ಬಾರಿಗೆ ಡಿ.ಕೆ. ಶಿವಕುಮಾರ್ ಅವರ ಆಶೀರ್ವಾದದಿಂದ ಟಿಕೆಟ್ ದೊರೆಯಿತು. 1985 ರಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಜನತಾದಳಕ್ಕೆ ಸೇರಿದ್ದೆ. ಇಂದು ಜಾತ್ಯತೀತ ತತ್ವಗಳಿಗೆ ಧಕ್ಕೆ ಆಗಿರುವ ಕಾರಣ ಮತ್ತು ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿಗೆ ಸಂಪೂರ್ಣವಾಗಿ ಬೆಂಬಲ ನೀಡಲಿದ್ದೇವೆ” ಎಂದು ತಿಳಿಸಿದರು.

“ಮರಿತಿಬ್ಬೇಗೌಡಗೆ ಬಹಳ ದಿನಗಳಿಂದ ಗಾಳ ಹಾಕ್ತಾ ಇದ್ದೆ, ಆದರೆ ಸಿಕ್ಕಿರಲಿಲ್ಲ. ಇವಾಗ ಅವರು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಜೆಡಿ ಎಸ್ ಗೆ ದೊಡ್ಡ ಅಡಿಪಾಯ ಆಗಿದ್ದವರು ಮರಿತಿಬ್ಬೇಗೌಡರು” ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು.

“ಜನತಾ ದಳ ಗೊಂದಲದ ಗೂಡಾಗಿದೆ. ಅದಕ್ಕೆ ಯಾವುದೇ ಶರತ್ತು ಇಲ್ಲದೆ ಕಾಂಗ್ರೆಸ್ ಗೆ ಸೇರ್ಪಡೆ ಆಗಿದ್ದಾರೆ. ಎಂ ಶ್ರೀನಿವಾಸ್ ಆರೋಗ್ಯ ಸರಿ‌ ಇಲ್ಲದ ಕಾರಣದಿಂದ ಪತ್ರ ಬರೆದು ಪಕ್ಷ ಸೇರ್ಪಡೆಗೆ ಸಮ್ಮತಿ ಸೂಚಿಸಿದ್ದಾರೆ” ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಚೆಲುವರಾಯಸ್ವಾಮಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್, ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣ ಗೌಡ (ಸ್ಟಾರ್ ಚಂದ್ರು), ಶಾಸಕರಾದ ಉದಯ್, ರವಿ ಗಣಿಗ, ರಮೇಶ್ ಬಾಬು ಬಂಡ್ಡಿಸಿದ್ದೇಗೌಡ,ಎಂಎಲ್ಸಿ ದಿನೇಶ್ ಗೂಳಿಗೌಡ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ನವಿ ಪಿಳ್ಳೈಗೆ ಒಲಿದ ಶಾಂತಿ ಪುರಸ್ಕಾರ

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು...

ನಮ್ಮ‌ ಪ್ರಸ್ತಾಪಗಳನ್ನು ರಾಷ್ಟ್ರಪತಿ ನಿರಾಕರಿಸಿದ್ದು ಅಚ್ಚರಿ ಮೂಡಿಸಿದೆ, ಸಾಕ್ಷ್ಯ ಕೇಳಿದ್ದಾರೆ – ಕೊಡುತ್ತೇವೆ: ರಾಹುಲ್ ಗಾಂಧಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಿರುವ ಕುರಿತು ನಾವು ಎತ್ತಿರುವ ವಿಷಯವನ್ನು...

ಬೀದರ್‌ | ʼಕರೇಜ್‌ʼ ದೇಶದ ಜಲಸಂರಕ್ಷಣೆಗೆ ಮಾದರಿ : ಕೇಂದ್ರದ ಅಧಿಕಾರಿಗಳ ಮೆಚ್ಚುಗೆ

ಬೀದರ್‌ನ ಐತಿಹಾಸಿಕ ʼಕರೇಜ್‌ʼ ಜಲವ್ಯವಸ್ಥೆ ದೇಶದ ಜಲಸಂರಕ್ಷಣೆಗೆ ಮಾದರಿಯಾಗಬಲ್ಲದು ಎಂದು ಕೇಂದ್ರ...

ಪ್ರತಿಭಟನೆ ಹಿನ್ನೆಲೆ ಮೆಟ್ರೋ ಬಂದ್; ‘ನೊಣ ಕೊಲ್ಲೋಕೆ ಸುತ್ತಿಗೆ ಬೇಡ’ – ಮಾರ್ಮಿಕವಾಗಿ ನುಡಿದ ಸುಪ್ರೀಂ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಿರುವ ಪ್ರತಿಭಟನೆಯನ್ನು ತಡೆಯಲು...