ಮಾಜಿ ಸಂಸದ ಸಿ ಪಿ ಮೂಡಲಗಿರಿಯಪ್ಪ ನಿಧನ

Date:

Advertisements

ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಂಸದ ಸಿ ಪಿ ಮೂಡಲಗಿರಿಯಪ್ಪ ಶನಿವಾರ (ಮಾ.23) ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.

ತೀವ್ರ ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಬೆಂಗಳೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಾಗಿದ್ದರು. ತೀವ್ರ ನಿಗಾ ಘಟಕದಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿರತಹಳ್ಳಿ ಗ್ರಾಮದ ನಿವಾಸಿ‌ಯಾಗಿದ್ದ ಮೃತರು, ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿದ್ದವರು. ಹಾಗೆಯೇ ಶಿರಾ ಕ್ಷೇತ್ರದ ಮಾಜಿ ಶಾಸಕರು ಕೂಡ ಆಗಿದ್ದರು.

Advertisements

1985 ರಲ್ಲಿ ಮೊದಲ ಬಾರಿಗೆ ಕಾಂಗ್ರೆಸ್​ ಮೂಲಕ ರಾಜಕೀಯ ಪ್ರವೇಶಿಸಿದ್ದ ಇವರು, ಮೊದಲ ಪ್ರಯತ್ನದಲ್ಲೇ ಶಿರಾ ವಿಧಾನಸಭೆ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ನಂತರ ರಾಷ್ಟ್ರ ರಾಜಕಾರಣದ ಕಡೆ ಮುಖಮಾಡಿ, ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ 1989, 1991 ಹಾಗೂ 1998 ರಲ್ಲಿ ಗೆದ್ದು ಸಂಸದರಾಗಿದ್ದರು.

ಭಾನುವಾರ ಬೆಳಿಗ್ಗೆ 10 ಗಂಟೆಗೆ ಸ್ವಗೃಹ ಚಿರತಹಳ್ಳಿ ಗ್ರಾಮದ ತೋಟದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

Download Eedina App Android / iOS

X