ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಮರಳಿದ ಮಾಜಿ ಸಂಸದ ಎಲ್​.ಆರ್ ಶಿವರಾಮೇಗೌಡ

Date:

ಪಕ್ಷಾಂತರದಲ್ಲೂ ಹೆಸರು ಮಾಡಿರುವ ಮಂಡ್ಯದ ಮಾಜಿ ಸಂಸದ ಎಲ್‌.ಆರ್ ಶಿವರಾಮೇಗೌಡ ಇದೀಗ, ಬಿಜೆಪಿ ತೊರೆದು ಮತ್ತೆ ಕಾಂಗ್ರೆಸ್‌ಗೆ ಮರಳಿದ್ದಾರೆ. ಬೆಂಗಳೂರಿನ ಕಾಂಗ್ರೆಸ್‌ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.

- Advertisement -

ಶಿವರಾಮೇಗೌಡ ಜೊತೆಗೆ ಅವರ ಪುತ್ರ ಮಂಜೇಗೌಡ,ಎಎಪಿಯಲ್ಲಿದ್ದ ಬ್ರಿಜೇಶ್ ಕಾಳಪ್ಪ ಮತ್ತು ಎಲ್.ಎಸ್ ಚೇತನ್ ಗೌಡ ಹಾಗೂ ಹಲವಾರು ಬೆಂಬಲಿಗರು ಕೂಡ ಕಾಂಗ್ರೆಸ್‌ ಸೇರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಹಲವು ದಿನಗಳಿಂದ ಶಿವರಾಮೇಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಜೊತೆಗೆ ಮತ್ತೆ ಮಾತುಕತೆ ನಡೆಸುತ್ತಿದ್ದರು. ಚನ್ನಪಟ್ಟಣ ಉಪಚುನಾವಣೆಯಲ್ಲಿಯೂ ಕಾಂಗ್ರೆಸ್‌ ಪರವಾಗಿ ಪ್ರಚಾರ ಮಾಡಿದ್ದರು. ಆಗಲೇ ಅವರು ಕಾಂಗ್ರೆಸ್‌ಗೆ ಮರಳುತ್ತಾರೆಂದು ಹೇಳಲಾಗಿತ್ತು. ಈಗ, ಕಾಂಗ್ರೆಸ್‌ಗೆ ಸೇರಿದ್ದಾರೆ.

ಶಿವರಾಮೆಗೌಡರ ಪಕ್ಷಾಂತರ ಪರ್ವ ಹೊಸತೇನಲ್ಲ. 1996ರಲ್ಲಿ ಜೆಡಿಎಸ್‌ನಲ್ಲಿ ಸಕ್ರಿಯರಾಗಿದ್ದ ಅವರು, 1999ರಲ್ಲಿ ಕಾಂಗ್ರೆಸ್‌ ಸೇರಿದ್ದರು. ಬಳಿಕ, 2009ರಲ್ಲಿ ಬಿಜೆಪಿ ಸೇರಿದ್ದರು. ಆನಂತರ, 2010ರಲ್ಲಿ ಮತ್ತೆ ಕಾಂಗ್ರೆಸ್‌ಗೆ ಮರಳಿದ್ದರು. ಆದಾಗ್ಯೂ, 2018ರಲ್ಲಿ ಜೆಡಿಎಸ್‌ಗೆ ವಲಸೆ ಹೋಗಿದ್ದರು. 2019ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಮಂಡ್ಯದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿದ್ದ ಸುಮಲತಾ ವಿರುದ್ಧ ನಾಲಿಗೆ ಹರಿಬಿಟ್ಟು, ಆಕ್ರೋಶಕ್ಕೆ ಗುರಿಯಾಗಿದ್ದರು.

ಅಲ್ಲದೆ, 2023ರಲ್ಲಿ ಮಾಜಿ ಸಂಸದ ಜಿ ಮಾದೇಗೌಡರ ವಿರುದ್ಧ ಲಘುವಾಗಿ ಮಾತನಾಡಿದ್ದರು. ಆ ಕಾರಣಕ್ಕೆ, 2023ರಲ್ಲಿ ಅವರನ್ನು ಜೆಡಿಎಸ್‌ನಿಂದ ಉಚ್ಛಾಟನೆ ಮಾಡಲಾಗಿತ್ತು. ಬಳಿಕ ಅವರು ಬಿಜೆಪಿ ಸೇರಿದ್ದರು. ಈಗ, ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...