ನಿವೃತ್ತ ಐಎಎಸ್ ಅಧಿಕಾರಿ, ನಟ, ಬಿಜೆಪಿ ಮುಖಂಡ ಕೆ ಶಿವರಾಂ ಇನ್ನಿಲ್ಲ

Date:

Advertisements

ಮೊದಲ ಬಾರಿಗೆ ಕನ್ನಡದಲ್ಲಿ ಐಎಎಸ್‌ ಪರೀಕ್ಷೆ ಬರೆದು, ಐಎಎಸ್‌ ಅಧಿಕಾರಿಯಾಗಿದ್ದ, ಬಿಜೆಪಿ ಮುಖಂಡ, ನಟ ಕೆ ಶಿವರಾಂ ಅವರು ಹೃದಯಾಘಾತದಿಂದ ಗುರುವಾರ ಮೃತಪಟ್ಟಿದ್ದಾರೆ.

ಬುಧವಾರ ಅವರಿಗೆ ಹೃದಯಾಘಾತವಾಗಿತ್ತು. ಅವರನ್ನು ಬೆಂಗಳೂರಿನ ಹೆಚ್‌ಸಿಜಿ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೆ, ಗುರುವಾರ ಬೆಳಗ್ಗೆ ಮೃತಪಟ್ಟಿದ್ದಾರೆ.

ರಾಮನಗರ ಜಿಲ್ಲೆಯ ಬಿಡದಿ ಬಳಿಯ ಉರುಗಳ್ಳಿಯ ಹಾರ್ಮೋನಿಯಂ ಮೇಷ್ಟ್ರು ಕೆಂಪಯ್ಯನವರ ಮಗನಾಗಿ 1953ರಲ್ಲಿ ಜನಿಸಿದ್ದ ಶಿವರಾಂ, 1985ರಲ್ಲಿ ಕೆಎಎಸ್‌ ಅಧಿಕಾರಿಯಾಗಿ ಆಯ್ಕೆಯಾಗಿದ್ದರು. ಬಳಿಕ ಕನ್ನಡದಲ್ಲಿಯೇ ಐಎಎಸ್‌ ಪರೀಕ್ಷೆ ಬರೆದು ಐಎಎಸ್‌ ಅಧಿಕಾರಿಯೂ ಆಗಿದ್ದರು. ಆ ಮೂಲಕ ಕನ್ನಡದಲ್ಲಿ ಐಎಎಸ್‌ ಬರೆದು ಅಧಿಕಾರಿಯಾದ ಮೊದಲ ಕನ್ನಡಿಗ ಎಂಬ ಹೆಗ್ಗಳಿಕೆಗೂ ಭಾಜನರಾಗಿದ್ದರು.

Advertisements

1993ರಲ್ಲಿ ಸಿನಿರಂಗಕ್ಕೆ ಎಂಟ್ರಿ ಕೊಟ್ಟಿದ್ದ ಶಿವರಾಂ ಅವರು, ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾದಲ್ಲಿ ನಾಯಕ ನಟನಾಗಿ ನಟಿಸಿದ್ದರು. ವಸಂತ ಕಾವ್ಯ, ಖಳನಾಯಕ, ಸಾಂಗ್ಲಿಯಾನ-3, ಪ್ರತಿಭಟನೆ, ಯಾರಿಗೆ ಬೇಡ ದುಡ್ಡು, ಗೇಮ್ ಫಾರ್ ಲವ್ ಹಾಗೂ ಟೈಗರ್ ಸಿನಿಮಾಗಳಲ್ಲಿ ನಟಿಸಿದ್ದರು.

2013ರಲ್ಲಿ ಐಎಎಸ್‌ ಹುದ್ದೆಗೆ ರಾಜೀನಾಮೆ ನೀಡಿ, ಸ್ವಯಂ ನಿವೃತ್ತಿ ಪಡೆದ ಅವರು ಕಾಂಗ್ರೆಸ್‌ ಸೇರಿ, ರಾಜಕಾರಣಿಯಾಗಿದ್ದರು. 2014ರ ಲೋಕಸಭಾ ಚುನಾವಣೆಯಲ್ಲಿ ವಿಜಯಪುರ ಕ್ಷೇತ್ರದಲ್ಲಿ ಸ್ಪರ್ಧಿಸಿ, ಸೋಲುಂಡಿದ್ದರು. ಬಳಿಕ, ಕಾಂಗ್ರೆಸ್‌ ತೊರೆದು, ಬಿಜೆಪಿ ಸೇರಿದ್ದರು. ಅಲ್ಲದೆ, ಛಲವಾದಿ ಮಹಸಭಾ ಅಧ್ಯಕ್ಷರೂ ಆಗಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X