ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನ

Date:

ಪಾಕಿಸ್ತಾನದ ಮಾಜಿ ಪ್ರಧಾನಿ ಹಾಗೂ ಪಿಟಿಐ ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಅವರನ್ನು ಇಸ್ಲಾಮಾಬಾದ್ ಹೈಕೋರ್ಟ್‌ನ ಹೊರಗೆ ಅರೆಸೇನಾ ಪಡೆ ಬಂಧಿಸಿದೆ ಎಂದು ಮಾಧ್ಯಮ ಸಂಸ್ಥೆಗಳು ವರದಿ ಮಾಡಿವೆ. ಇಮ್ರಾನ್‌ ಪರ ವಕೀಲ ಫೈಸಲ್‌ ಚೌಧರಿ ಬಂಧನವನ್ನು ಖಚಿತಪಡಿಸಿದ್ದಾರೆ.

ಇಮ್ರಾನ್ ಖಾನ್ ಅವರನ್ನು ಇಸ್ಲಾಮಾಬಾದ್ ಹೈಕೋರ್ಟ್ ಹೊರಗೆ ರೇಂಜರ್‌ಗಳು ಬಂಧಿಸಿದ್ದಾರೆ. ಕಳೆದ ವರ್ಷ ಏಪ್ರಿಲ್‌ನಲ್ಲಿ ಅಧಿಕಾರದಿಂದ ಕೆಳಗಿಳಿದ ನಂತರ ಇಮ್ರಾನ್ ಖಾನ್ ಅವರು ನೂರಕ್ಕೂ ಹೆಚ್ಚು ಭ್ರಷ್ಟಾಚಾರ ಪ್ರಕರಣಗಳಲ್ಲಿ ಭಾಗಿಯಾಗಿದ್ದರು ಎಂದು ಆರೋಪಿಸಲಾಗಿದೆ.

ಇಸ್ಲಾಮಾಬಾದ್‌ನಲ್ಲಿ ಪಾಕಿಸ್ತಾನ ರೇಂಜರ್ಸ್‌ ಇಮ್ರಾನ್‌ ಖಾನ್‌ರನ್ನು ವಶಕ್ಕೆ ಪಡೆದುಕೊಂಡಿದ್ದು, ಪಾಕಿಸ್ತಾನದ ಸೇನೆಯನ್ನು ಸಾರ್ವಜನಿಕವಾಗಿ ಟೀಕೆ ಮಾಡಿದ ಕೆಲವೇ ದಿನಗಳಲ್ಲಿ ಇಮ್ರಾನ್‌ ಖಾನ್‌ರನ್ನು ಬಂಧಿಸಲಾಗಿದೆ. ಮಂಗಳವಾರ ಇಸ್ಲಾಮಾಬಾದ್‌ ಹೈಕೋರ್ಟ್‌ನ ಎದುರು ಇಮ್ರಾನ್‌ ಖಾನ್‌ರನ್ನು ರೇಂಜರ್‌ಗಳು ವಶಕ್ಕೆ ಪಡೆದುಕೊಳ್ಳುವ ವೇಳೆ ಇಮ್ರಾನ್‌ ಪರ ವಕೀಲರಿಗೆ ಗಂಭೀರ ಗಾಯವಾಗಿದೆ. 

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ನನ್ನ ಮೇಲೆ ಅತ್ಯಾಚಾರವೆಸಗಿದ್ದ ಡೊನಾಲ್ಡ್ ಟ್ರಂಪ್; ಪತ್ರಕರ್ತೆ ಇ ಜೀನ್‌ ಕ್ಯಾರೊಲ್ ಗಂಭೀರ ಆರೋಪ

ತಮ್ಮ ವಿರುದ್ಧ ಸರ್ಕಾರ ಹೂಡಿರುವ ಹಲವು ಪ್ರಕರಣಗಳ ವಿರುದ್ಧ ಜಾಮೀನು ಪಡೆದುಕೊಳ್ಳುವ ಸಲುವಾಗಿ ಇಮ್ರಾನ್‌ ಖಾನ್‌ ಇಸ್ಲಾಮಾಬಾದ್‌ ಹೈಕೋರ್ಟ್‌ಗ ತೆರಳಿದ್ದರು. ಪ್ರಧಾನಿ ಹುದ್ದೆಯಿಂದ ಕೆಳಗಿಳಿದ ದಿನದಿಂದಲೂ ಅವರು ಪಾಕಿಸ್ತಾನದ ಸೇನೆಯ ಉನ್ನತ ಅಧಿಕಾರಿಗಳನ್ನು ಟೀಕಿಸುವ ಮೂಲಕ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿದ್ದರು.

ಇಮ್ರಾನ್‌ ಖಾನ್‌ ಬಂಧನದ ಬಗ್ಗೆ ಮಾತನಾಡಿರುವ ಪಿಟಿಐ ಮುಖ್ಯಸ್ಥ ಮಸರತ್‌ ಚೌಧರಿ, ‘ನನ್ನ ಎದುರೆ ಇಮ್ರಾನ್‌ ಖಾನ್‌ ಅವರ ಮೇಲೆ ಹಲ್ಲೆ ಮಾಡಿ ಬಂಧಿಸಲಾಗಿದೆ. ಅವರನ್ನು ಕೊಂದುಹಾಕಬಹುದು ಎನ್ನುವ ಭಯ ಕೂಡ ನನಗೆ ಕಾಡಿದೆ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇಮ್ರಾನ್‌ ಖಾನ್‌ ಬಂಧನದ ಬೆನ್ನಲ್ಲಿಯೇ ಇಡೀ ದೇಶದಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ನಡೆಸುವಂತೆ ಪಿಟಿಐ ತನ್ನ ಕಾರ್ಯಕರ್ತರಿಗೆ ಕರೆ ನೀಡಿದೆ. ಈ ನಡುವೆ ಪಾಕಿಸ್ತಾನದ ಹಲವು ನಗರಗಳಲ್ಲಿ ಪೊಲೀಸ್‌ ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೀಸಲಾತಿ ರದ್ದು ಮಾಡುವುದೇ ಬಿಜೆಪಿ ಗುರಿ; ಅದರ ನಾಯಕರ ಹೇಳಿಕೆಗಳಿಂದಲೇ ಸ್ಪಷ್ಟ: ರಾಹುಲ್ ಗಾಂಧಿ

ಸಂವಿಧಾನವನ್ನು ಬದಲಿಸುವ ಮೂಲಕ ಪ್ರಜಾಪ್ರಭುತ್ವವನ್ನು ನಾಶಪಡಿಸುವುದು ಮತ್ತು ದಲಿತರು, ಹಿಂದುಳಿದ ವರ್ಗಗಳು...

‘ಪ್ರಧಾನಿ ಮೋದಿಗೆ ಗುಜರಾತ್‌ನಲ್ಲಿ ಮುಸ್ಲಿಂ ಒಬಿಸಿ ಮೀಸಲಾತಿ ಓಕೆ, ಇತರೆಡೆ ಮಾತ್ರ ಬೇಡ’

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮುಸ್ಲಿಂ ಒಬಿಸಿ ಮೀಸಲಾತಿ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ....

ಬಿಜೆಪಿ ನಾಯಕರು ಖಿನ್ನತೆಗೆ ಒಳಗಾಗಿದ್ದಾರೆ ಎಂದ ತೇಜಸ್ವಿ ಯಾದವ್!

ಬಿಹಾರದ ಎರಡನೇ ಹಂತದ ಲೋಕಸಭಾ ಚುನಾವಣೆಯ ನಂತರ ಬಿಜೆಪಿ ನಾಯಕರು ಖಿನ್ನತೆಗೆ...