ಬಿಜೆಪಿಗೆ ಮತ್ತೊಂದು ಆಘಾತ; ಕಾಂಗ್ರೆಸ್‌ನತ್ತ ಹೊರಟ ಬಿಜೆಪಿ ಯುವ ಮೋರ್ಚಾ ಮಾಜಿ ಅಧ್ಯಕ್ಷ ಸಂದೀಪ್ 

Date:

ಲೋಕಸಭಾ ಚುನಾವಣೆ ಸಮಯದಲ್ಲಿ ಪ್ರತಿಪಕ್ಷಗಳನ್ನು ಕಟ್ಟಿಹಾಕಲು ಆಡಳಿತಾರೂಢ ಬಿಜೆಪಿ ನಾನಾ ರೀತಿಯ ತಂತ್ರ-ಕುತಂತ್ರಗಳನ್ನು ಎಣೆಯುತ್ತಿದೆ. ಆದರೆ, ಇದೇ ಸಮಯದಲ್ಲೇ, ಕರ್ನಾಟಕದಲ್ಲಿ ಬಿಜೆಪಿಗೆ ಆಘಾತಗಳ ಮೇಲೆ ಆಘಾತಗಳು ಎದುರಾಗುತ್ತಿವೆ. ಹಲವಾರು ಪ್ರಮುಖ ನಾಯಕರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರುತ್ತಿದ್ದಾರೆ. ಇದೀಗ, ಬಿಜೆಪಿ ರಾಜ್ಯ ಯುವ ಮೋರ್ಚಾದ ಮಾಜಿ ಅಧ್ಯಕ್ಷ ಡಾ. ಸಂದೀಪ್‌ ಕೂಡ ಕಾಂಗ್ರೆಸ್‌ ಸೇರಲು ಮುಂದಾಗಿದ್ದಾರೆ.

- Advertisement -

ಸಂದೀಪ್ ಅವರು ಕಾಂಗ್ರೆಸ್‌ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ. ಏಪ್ರಿಲ್ ಮೊದಲ ವಾರದಲ್ಲಿ ಅವರು ಕಾಂಗ್ರೆಸ್‌ಗೆ ಸೇರಲಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಪರಿಶಿಷ್ಟ ಜಾತಿ ಹಿನ್ನೆಲೆಯ ಸಂದೀಪ್ ಅವರು ಬಿಜೆಪಿಯಲ್ಲಿ ತಳಹಂತದಿಂದಲೂ ಕೆಲಸ ಮಾಡಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅವರಿಗೆ ಸಕಲೇಶಪುರ ಅಥವಾ ಆನೇಕಲ್ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ನೀಡುವುದಾಗಿ ಹೇಳಿತ್ತು. ಆದರೆ, ಕೊಸ ಕ್ಷಣದಲ್ಲಿ ಟಿಕೆಟ್‌ ಕೊಟ್ಟಿರಲಿಲ್ಲ.

ಆಗ, ಲೋಕಸಭಾ ಚುನಾವಣೆಗೆ ಚಿತ್ರದುರ್ಗದಲ್ಲಿ ಟಿಕೆಟ್ ನೀಡುವುದಾಗಿಯೂ ಬಿಜೆಪಿ ನಾಯಕರು ಹೇಳಿದ್ದರು. ಆದರೆ, ಆ ಟಿಕೆಟ್ ಕೂಡ ದೊರೆತಿಲ್ಲ. ಹೀಗಾಗಿ, ಸಂದೀಪ್ ಅವರು ನಿರಂತರವಾಗಿ ಟಿಕೆಟ್ ವಂಚಿತರಾಗಿದ್ದಾರೆ. ಅವರು ಕಾಂಗ್ರೆಸ್‌ ಸೇರಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಸಿಜೆಪಿ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟ ಬೆಂಬಲ: ರಾಜ್ಯಾದ್ಯಂತ ಪಂಜಿನ ಮೆರವಣಿಗೆಗೆ ಕರೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....

ನಮ್ಮ‌ ಪ್ರಸ್ತಾಪಗಳನ್ನು ರಾಷ್ಟ್ರಪತಿ ನಿರಾಕರಿಸಿದ್ದು ಅಚ್ಚರಿ ಮೂಡಿಸಿದೆ, ಸಾಕ್ಷ್ಯ ಕೇಳಿದ್ದಾರೆ – ಕೊಡುತ್ತೇವೆ: ರಾಹುಲ್ ಗಾಂಧಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಿರುವ ಕುರಿತು ನಾವು ಎತ್ತಿರುವ ವಿಷಯವನ್ನು...