ರೇಬಿಸ್ ನಿರ್ಮೂಲನೆಗೆ ಪರಿಣಾಮಕಾರಿ ಕ್ರಿಯಾಯೋಜನೆ ರೂಪಿಸಿ: ಶಾಲಿನಿ ರಜನೀಶ್

Date:

  • ರೇಬಿಸ್ ನಿರ್ಮೂಲನೆಗೆ ರಚಿಸಿರುವ ಜಂಟಿ ಚಾಲನಾ ಸಮಿತಿಯಿಂದ ಕಾರ್ಯು
  • ವಿವಿಧ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ಕೆಲಸ ಮಾಡಿ

ನಾಯಿಯಿಂದ ಹರಡುವ ರೇಬಿಸ್ ನಿರ್ಮೂಲನೆಗೆ ರಚಿಸಿರುವ ಜಂಟಿ ಚಾಲನಾ ಸಮಿತಿಯು ಸಂಬಂಧಿಸಿದ ಎಲ್ಲಾ ಇಲಾಖೆಗಳು ಹಾಗೂ ತಜ್ಞರ ಸಲಹೆ ಆಧರಿಸಿ ಪರಿಣಾಮಕಾರಿಯಾದ ಕ್ರಿಯಾಯೋಜನೆ ರೂಪಿಸಿ ಅನುಷ್ಠಾನಕ್ಕೆ ತರಬೇಕು ಎಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಶಾಲಿನಿ ರಜನೀಶ್ ಸೂಚನೆ ನೀಡಿದರು.

ವಿಕಾಸಸೌಧದಲ್ಲಿ ಗುರುವಾರ ರೇಬಿಸ್ ನಿರ್ಮೂಲನೆಗಾಗಿ ರಚಿಸಿರುವ ಜಂಟಿ ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

“ರೇಬಿಸ್ ನಿರ್ಮೂಲ‌ನೆಗಾಗಿ ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ರಚಿಸುವ ಸಮಿತಿಗಳಲ್ಲಿನ ವಿವಿಧ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ತಮ್ಮ ಕರ್ತವ್ಯ, ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಬೇಕು” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಬೃಹತ್‌ ಬೆಂಗಳೂರು ಮಹಾನಗರಪಾಲಿಕೆ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್, ಅರಣ್ಯ ಇಲಾಖೆಗಳು, ವನ್ಯಜೀವಿ ಸಂರಕ್ಷಣಾ ಮಂಡಳಿಗಳು ಹಾಗೂ ಸರ್ಕಾರೇತರ ಸಂಸ್ಥೆಗಳ ಸಮನ್ವಯದೊಂದಿಗೆ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಬೇಕು. ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ರಾಜೀವಗಾಂಧಿ ಆರೋಗ್ಯ ವಿಜ್ಞಾನ ವಿವಿಗಳ ತಜ್ಞರು ಕೂಡ ಈ ಕ್ರಿಯಾಯೋಜನೆಯ ಭಾಗವಾಗಿ ತಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕು” ಎಂದು ಹೇಳಿದರು.‌

“ಬೆಂಗಳೂರು ಮಹಾನಗರದಲ್ಲಿ ಬೀದಿನಾಯಿಗಳಿಗೆ ರೇಬಿಸ್ ನಿರೋಧಕ ಲಸಿಕೆ (Anti Rabies Vaccine) ಆಂದೋಲನ ಕೈಗೊಳ್ಳಲು ಬಿಬಿಎಂಪಿಯ ಪಶುಸಂಗೋಪನೆ ವಿಭಾಗಕ್ಕೆ ತ್ವರಿತವಾಗಿ 2 ಕೋಟಿ ರೂ.ಗಳನ್ನು ಬಿಡುಗಡೆ ಮಾಡಬೇಕು” ಎಂದು ಸೂಚಿಸಿದರು.

“ಸಮೀಕ್ಷಾ ಕಾರ್ಯ ಮತ್ತು ಪ್ರಕರಣಗಳ ಸರಿಯಾದ ವರದಿಯಾಗಲು ರಾಷ್ಟ್ರೀಯ ಮಾರ್ಗಸೂಚಿಗಳ ಪ್ರಕಾರ ವಿವಿಧ ಹಂತಗಳ ವೈದ್ಯಕೀಯ, ಆರೋಗ್ಯ ಸಿಬ್ಬಂದಿಗೆ ತರಬೇತಿ ಆಯೋಜಿಸಬೇಕು. ನಾಯಿಕಡಿತದ ಪ್ರಕರಣಗಳ ನಿರ್ವಹಣೆಗೆ ಅಗತ್ಯವಿರುವ ರೇಬಿಸ್ ನಿರೋಧಕ ಲಸಿಕೆ, ರೇಬಿಸ್ ಇಮ್ಯುನೊಗ್ಲಾಬ್ಯುಲಿನ್‌ ಎಲ್ಲ ಕಡೆ ಲಭ್ಯವಿರುವಂತೆ ನೋಡಿಕೊಳ್ಳಬೇಕು, ಘನತ್ಯಾಜ್ಯ ವಿಲೇವಾರಿ ಕುರಿತು ನಿರಂತರವಾಗಿ ಜನಜಾಗೃತಿ ಮೂಡಿಸಲು ಸಂಬಂಧಿತ ಎಲ್ಲಾ ಇಲಾಖೆಗಳ ನೋಡಲ್ ಅಧಿಕಾರಿಗಳು ತಮ್ಮ ಕಾರ್ಯಪ್ರವೃತ್ತರಾಗಬೇಕು. ನಿರ್ದಿಷ್ಟ ಗುರಿಗಳನ್ನು ಹಾಕಿಕೊಂಡು 2030 ರೊಳಗೆ ರೇಬಿಸ್ ನಿರ್ಮೂಲನೆಗೆ ಆಂದೋಲನದ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು” ಎಂದು ಶಾಲಿನಿ ರಜನೀಶ್ ತಿಳಿಸಿದರು.

ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಮಾತನಾಡಿ, “ಕೆಎಫ್ ರಾಜ್ಯದಲ್ಲಿ ಪ್ರಕರಣಗಳು ಹೆಚ್ಚು ವರದಿಯಾಗುವ ಜಿಲ್ಲೆಗಳ ತುಲನಾತ್ಮಕ ಅಧ್ಯಯನ ಮಾಡಿ ನಿಖರವಾದ ವೈಜ್ಞಾನಿಕ ಕಾರಣಗಳನ್ನು ಕಂಡುಕೊಳ್ಳಬೇಕು. ವಿವಿಧ ಪ್ರದೇಶಗಳ ಭೂಮಿಯ ಮಣ್ಣು ಹಾಗೂ ವಾತಾವರಣಕ್ಕೆ ಅನುಗುಣವಾಗಿ ನಿಯಂತ್ರಣ ಕ್ರಮಗಳನ್ನು ಅನುಷ್ಠಾನಕ್ಕೆ ತರಬೇಕು” ಎಂದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲಕುಮಾರ್, ಪಶುಸಂಗೋಪನೆ ಹಾಗೂ ಮೀನುಗಾರಿಕೆ ಇಲಾಖೆಯ ಕಾರ್ಯದರ್ಶಿ ಸಲ್ಮಾ ಕೆ.ಫಾಹಿಮ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಡಿ.ರಂದೀಪ್, ಬಿಬಿಎಂಪಿ ವಿಶೇಷ ಆಯುಕ್ತ ಡಾ.ಕೆ.ವಿ.ತ್ರಿಲೋಕಚಂದ್ರ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು, ವಿಶ್ವವಿದ್ಯಾಲಯಗಳ ತಜ್ಞರು ಸಭೆಯಲ್ಲಿ ಉಪಸ್ಥಿತರಿದ್ದರು.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಭಾಸ್‌ ಅಭಿನಯದ ‘ಕಲ್ಕಿ 2898 ಎಡಿ’ ಏಕಕಾಲದಲ್ಲೇ ಮೂರು ‘ಒಟಿಟಿ’ಗಳಿಗೆ ಮಾರಾಟ

ತೆಲುಗು ನಟ ಪ್ರಭಾಸ್ ಅಭಿನಯದ ‘ಕಲ್ಕಿ 2898 ಎಡಿ’ ಭಾರತದ ಅತ್ಯಂತ...

ಮೋದಿ ಸುಳ್ಳುಗಳು | ಶೋಷಣೆಯಿಂದ ಮುಕ್ತಿ ನೀಡದ ಮೋದಿ, ಬುಡಕಟ್ಟುಗಳ ಅಭಿವೃದ್ಧಿಗೆ ನಿಲ್ಲುತ್ತಾರೆಯೇ?  

ಜಾರ್ಖಂಡ್‌ನ ದುಮ್ಕಾದಲ್ಲಿ ಇಂದು ನಡೆದ ಸಾರ್ವಜನಿಕ  ಸಮಾವೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ...

ರೇವ್ ಪಾರ್ಟಿ | ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೇಳಿದ ತೆಲುಗು ನಟಿ ಹೇಮಾ

ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿ ಸಮೀಪದ ಜಿ.ಆರ್‌.ಫಾರ್ಮ್‌ಹೌಸ್‌ನಲ್ಲಿ ನಡೆದಿದ್ದ ‘ರೇವ್‌ ಪಾರ್ಟಿ’ ಪ್ರಕರಣಕ್ಕೆ...

ಅಧಿಕಾರಿ ಚಂದ್ರಶೇಖರ್‌ ಆತ್ಮಹತ್ಯೆ | ಸಚಿವ ಬಿ.ನಾಗೇಂದ್ರ ವಜಾಗೊಳಿಸಿ: ಪ್ರಲ್ಹಾದ್‌ ಜೋಶಿ ಆಗ್ರಹ

ಕರ್ನಾಟಕ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಬೆಂಗಳೂರು ಕಚೇರಿಯಲ್ಲಿ ಅಧೀಕ್ಷಕರಾಗಿ ಸೇವೆ...