ಪಶ್ಚಿಮ ಬಂಗಾಳ| ರಾಮನವಮಿ ಮೆರವಣಿಗೆ ವೇಳೆ ಕಲ್ಲು ತೂರಾಟ; ಪೂರ್ವ ಯೋಜಿತ ಎಂದ ಮಮತಾ

Date:

ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪೋರ್ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆದಿದ್ದು ಕನಿಷ್ಠ ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಈ ಘಟನೆಯು ಪೂರ್ವ ಯೋಜಿತ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

- Advertisement -

ಬುಧವಾರ ರಾತ್ರಿ 9.10ರ ಸುಮಾರಿಗೆ ಮೆರವಣಿಗೆಯು ಎಗ್ರಾದ ಕಾಲೇಜ್ ಮೋರ್ ಮೂಲಕ ಹಾದು ಹೋಗುತ್ತಿದ್ದಾಗ ಕಲ್ಲು ತೂರಾಟ ನಡೆಸಿದ ನಾಲ್ವರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಭೆ ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಬೇಕಾಯಿತು ಎಂದು ಕೂಡಾ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ರಾಮನವಮಿ ಆಚರಣೆಯ ಸಂದರ್ಭದಲ್ಲಿ ಬಿಜೆಪಿ ಹಿಂಸಾಚಾರವನ್ನು ಪ್ರಚೋದಿಸಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಹೇಳಿದ್ದಾರೆ. ಹಿಂಸಾಚಾರ ಪೂರ್ವ ಯೋಜಿತ ಎಂದು ಅವರು ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ?  ರಾಮ ನವಮಿ ಸಂಘರ್ಷ | ಪ.ಬಂಗಾಳದ ಹೂಗ್ಲಿಯಲ್ಲಿ ಮತ್ತೆ ಕೋಮು ಹಿಂಸಾಚಾರ

ರಾಯ್‌ಗಂಜ್ ಲೋಕಸಭಾ ಕ್ಷೇತ್ರದ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ ಅವರು, “ಘರ್ಷಣೆಗೆ ಮುನ್ನ ಮುರ್ಷಿದಾಬಾದ್‌ನಿಂದ ಪೊಲೀಸ್ ಅಧಿಕಾರಿಯನ್ನು ತೆಗೆದುಹಾಕಲಾಗಿದೆ” ಎಂದು ಹೇಳಿದ್ದಾರೆ.

“ಎಲ್ಲವೂ ಪೂರ್ವ ಯೋಜಿತವಾಗಿತ್ತು. ರಾಮನವಮಿಯ ಒಂದು ದಿನ ಮುಂಚಿತವಾಗಿ ಮುರ್ಷಿದಾಬಾದ್‌ನ ಡಿಐಜಿ ಅವರನ್ನು ತೆಗೆದುಹಾಕಲಾಗಿದೆ. ಆದ್ದರಿಂದ ನೀವು (ಬಿಜೆಪಿ) ಹಿಂಸಾಚಾರವನ್ನು ನಡೆಸಬಹುದು” ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ?  ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿ ಗಲಭೆ ಸೃಷ್ಟಿಸಲಿದೆ: ಮಮತಾ ಬ್ಯಾನರ್ಜಿ ಎಚ್ಚರಿಕೆ

ಇನ್ನು “ಪ್ರದೇಶದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ನಾವು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ನಾಲ್ವರನ್ನು ಬಂಧಿಸಲಾಗಿದೆ ಮತ್ತು ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ” ಎಂದು ಪೊಲೀಸ್ ಅಧಿಕಾರಿ ಪಿಟಿಐಗೆ ತಿಳಿಸಿದರು.

“ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿ ಗಲಭೆಯನ್ನು ಸೃಷ್ಟಿಸಲಿದೆ” ಎಂದು ಈ ಹಿಂದೆ ಹಲವಾರು ಬಾರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಜಾಪ್ರಭುತ್ವದ ಗಟ್ಟಿತನವಿರುವುದು ಪ್ರಜೆಗಳಿಗೆ ಸರ್ಕಾರವನ್ನು ಪ್ರಶ್ನಿಸುವ ಸ್ವಾತಂತ್ರ್ಯ ಇರುವಲ್ಲಿ: ಸಿಎಂ ಡಿ.ಕೆ ಶಿವಕುಮಾರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ಹೊಣೆಗಾರಿಕೆಯೇ ಬುನಾದಿಯಾಗಿದೆ. ಎಲ್ಲರೂ ಸರ್ಕಾರಕ್ಕೆ ಕುರುಡಾಗಿ ತಲೆಬಾಗುವುದೇ...

ಪತ್ರಕರ್ತರ ಮೇಲಿನ ಪೊಲೀಸ್‌ ದಾಳಿಗೆ ಡಿಎಸ್‌ಜೆಎ ಖಂಡನೆ; ಪ್ರೆಸ್ ಕೌನ್ಸಿಲ್‌ನಿಂದ ಮಾರ್ಗಸೂಚಿ ಪ್ರಕಟ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ಪೊಲೀಸ್ ಕ್ರಮಗಳನ್ನು ವರದಿ ಮಾಡುತ್ತಿರುವ ಪತ್ರಕರ್ತರ...

ದೇಶದ ಜನತೆ ಅಧಿಕಾರ ಬದಲಾವಣೆ ಬಯಸಿದ್ದಾರೆ, ನೀವು ಹೊರಡುವ ಸಮಯ ಬಂದಿದೆ; ರಾಜ್‌ನಾಥ್‌ಗೆ ಸಿಬಲ್‌ ಎಚ್ಚರಿಕೆ

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಬಾಂಗ್ಲಾದೇಶ ಮಾದರಿಯಲ್ಲಿ ದೇಶದಲ್ಲಿ 'ಸರ್ಕಾರ ಬದಲಾವಣೆ'ಯ...

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರಗಳಿಗೆ ಸುಮಧುರ ಸಂಗೀತ...