ಗುತ್ತಿಗೆದಾರರಿಗೆ ಬಿಲ್ ಬಾಕಿ ಬಗ್ಗೆ ತನಿಖೆ ನಡೆಸಲು ನಾಲ್ಕು ತಂಡ ರಚನೆ: ಸಚಿವ ರಾಮಲಿಂಗಾ ರೆಡ್ಡಿ

Date:

  • ‘ಕಾಂಗ್ರೆಸ್ ವಿರುದ್ಧ ಮಾಡುತ್ತಿರುವ 15% ಆರೋಪ ಸುಳ್ಳು’
  • ‘ಬಿಜೆಪಿ ಟೀಕೆ ಮಾಡುವ ನೈತಿಕ ಹಕ್ಕು ಕಳೆದುಕೊಂಡಿದೆ’

ಗುತ್ತಿಗೆದಾರರಿಗೆ ಬಿಲ್ ಬಾಕಿ ಬಗ್ಗೆ ತನಿಖೆ ನಡೆಸಲು ನಾಲ್ಕು ತಂಡ ರಚನೆ ಮಾಡಲಾಗಿದೆ. ವರದಿ ಬಳಿಕ ಬಿಲ್ ಕ್ಲಿಯರ್ ಮಾಡುತ್ತೇವೆ ಎಂದು ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು.

ವಿಧಾನಸೌಧದಲ್ಲಿ ಗುರುವಾರ ಮಾತನಾಡಿದ ಅವರು, “ಬಿಜೆಪಿ ಸರ್ಕಾರದ ವಿರುದ್ಧ ಗುತ್ತಿಗೆದಾರರು ಮಾಡಿದ್ದ 40% ಆರೋಪ ಸತ್ಯ. ಆದರೆ ಇವಾಗ ಕಾಂಗ್ರೆಸ್ ವಿರುದ್ಧ ಮಾಡುತ್ತಿರುವ 15% ಆರೋಪ ಸುಳ್ಳು” ಎಂದು ಸ್ಷಷ್ಟನೆ ನೀಡಿದರು..

“ಬಿಜೆಪಿ ಅವರ ಮಾತಿಗೆ ಕಿಮ್ಮತ್ತಿಲ್ಲ. ತಮ್ಮ ಸರ್ಕಾರದಲ್ಲಿ 40% ಕಮಿಷನ್ ಆಯಿತು. ನಮ್ಮ ಸರ್ಕಾರದ ಬಗ್ಗೆ ಟೀಕೆ ಮಾಡುವ ನೈತಿಕ ಹಕ್ಕು ಕಳೆದುಕೊಂಡಿದ್ದಾರೆ. ಐದು ವರ್ಷ ವಿರೋಧ ಪಕ್ಷದಲ್ಲಿದ್ದು ಕೆಲಸ ಮಾಡಲಿ ಅಷ್ಟೇ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ವರದಿ ಕೊಡುವ ಮೊದಲೇ ಕಮಿಷನ್ ಆರೋಪ ಮಾಡಲಾಗುತ್ತಿದೆ. ಅವರು‌ ಮಾಡಿರುವ ಆಪಾದನೆ ಸತ್ಯಕ್ಕೆ ದೂರವಾಗಿದೆ. ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡಬೇಕು. ‌ಬೇಗ ಬಿಲ್ ಬಿಡುಗಡೆಯಾದರೆ ಕೆಲಸ ಮಾಡಲು ಅನುಕೂಲವಾಗುತ್ತದೆ. ಆನ್ ಲೈನ್ ನಲ್ಲಿ ಬಿಲ್ ಪೇಮೆಂಟ್ ಮಾಡಲು ಕ್ರಮ ಕೈಗೊಳ್ಳುತ್ತೇವೆ” ಎಂದು ತಿಳಿಸಿದರು.

ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ‌ ಬಿಬಿಎಂಪಿ ಗುತ್ತಿಗೆದಾರರ ಸಂಘ 15% ಕಮಿಷನ್ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿದೆ. ಬಾಕಿ ಬಿಲ್ ಬಿಡುಗಡೆ ಮಾಡಲು ಗುತ್ತಿಗೆದಾರರು ಈ ಬಗ್ಗೆ ರಾಜ್ಯಪಾಲರಿಗೂ ದೂರು ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರನ್ನು ಗುತ್ತಿಗೆದಾರರು ಭೇಟಿ ಮಾಡಿದ್ದಾರೆ. ಬಾಕಿ ಪಾವತಿ ಆಗದಿದ್ದಲ್ಲಿ ಕೆಲಸ ನಿಲ್ಲಿಸುವ ಬೆದರಿಕೆ ಕೂಡ ಹಾಕಿದ್ದನ್ನು ಇಲ್ಲಿ ನೆನೆಯಬಹುದು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪೋಕ್ಸೊ ಪ್ರಕರಣ | ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೋರಿದ ಬಿಎಸ್‌ವೈ, ಪೊಲೀಸರಿಂದ ಬಂಧನಕ್ಕೆ ಸಿದ್ಧತೆ

ಪೋಕ್ಸೊ ಪ್ರಕರಣದಲ್ಲಿ ತನಿಖೆಗೆ ಹಾಜರಾಗುವಂತೆ ಸಿಐಡಿ ಪೊಲೀಸರು ನೀಡಿದ್ದ ನೋಟಿಸ್​ಗೆ ಬಿ...

ಅಮಿತ್ ಮಾಳವೀಯ ಎಂಬ ಸ್ತ್ರೀಪೀಡಕನೂ, ಬಿಜೆಪಿಯ ಬೇಟಿ ಬಚಾವೋ ಎಂಬ ಘೋಷಣೆಯೂ…

ಬಿಜೆಪಿ ಐಟಿ ಸೆಲ್‌ನ ಮುಖ್ಯಸ್ಥ ಅಮಿತ್‌ ಮಾಳವೀಯ ಪಶ್ಚಿಮ ಬಂಗಾಳದ...

ಬೆಂಗಳೂರು | ಗಗನಕ್ಕೇರಿದ ದಿನಸಿ, ತರಕಾರಿ ಬೆಲೆ; ₹50ಕ್ಕೇರಿದ ಟೊಮೆಟೊ ದರ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ತರಕಾರಿ ಬೆಲೆ ಸೇರಿದಂತೆ ನಿತ್ಯ...

ಪೋಕ್ಸೊ ಪ್ರಕರಣ | ಯಡಿಯೂರಪ್ಪರನ್ನು ಬಂಧಿಸಬೇಕು ಎಂದು ನಾನು ಹೇಳಲು ಆಗುವುದಿಲ್ಲ: ಸಚಿವ ಪರಮೇಶ್ವರ್

ಪೋಕ್ಸೊ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ಅವರನ್ನು ಬಂಧಿಸುವ ಅಗತ್ಯ ಇದೆ...