ಬ್ಯಾಂಕ್‌ಗೆ ವಂಚಿಸಿದ್ದ ಪ್ರಕರಣದಲ್ಲಿ ಬಿಜೆಪಿ ನಾಯಕ, ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಅವರನ್ನು ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಅವರಿಗೆ ಜೈಲು ಶಿಕ್ಷೆ ವಿಧಿಸಿದೆ.
ಮಾಲೂಕು ಕ್ಷೇತ್ರದ ಬಿಜೆಪಿ ಶಾಸಕರೂ ಆಗಿದ್ದ, ಬಾಲಾಜಿಕೃಪಾ ಎಂಟರ್‌ಪ್ರೈಸಸ್‌ನ ಮಾಲೀಕ ಕೃಷ್ಣಯ್ಯ ಶೆಟ್ಟಿ 1993ರಲ್ಲಿ ಸಾರ್ವಜನಿಕ ಉದ್ದಿಮೆಗಳ ನೌಕರರಿಗೆ ಗೃಹ ನಿರ್ಮಾಣಕ್ಕೆ ಸಾಲ ಕೊಡಿಸುವುದಾಗಿ ಆಮಿಷವೊಡ್ಡಿ, ಹಲವು ನೌಕರರ ಹೆಸರಿನಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ 7.17 ಕೋಟಿ ರೂ. ಬ್ಯಾಂಕ್ ಸಾಲ ಪಡೆದಿದ್ದರು. ಇದರಲ್ಲಿ 3.53 ಕೋಟಿ ಸಾಲ ತೀರಿಸಿಲ್ಲ ಎಂದು ಆರೋಪಿಸಲಾಗಿತ್ತು. ಪ್ರಕರಣವನ್ನು ಸಿಬಿಐ ತನಿಖೆ ನಡೆಸಿ, ಚಾರ್ಜ್‌ಶೀಟ್ ಸಲ್ಲಿಸಿತ್ತು.
ಪ್ರಕರಣದಲ್ಲಿ ಕೃಷ್ಣಯ್ಯ ಶೆಟ್ಟಿ ಅವರೊಂದಿಗೆ ಕೆ.ವಿ.ಹನುಮಪ್ಪ ರೆಡ್ಡಿ, ಜಿ.ಎಂ.ರಮೇಶ್, ಶೀನಿವಾಸ್ ಹಾಗೂ ಮುನಿರಾಜು ಎಂಬವರು ಭಾಗಿಯಾಗಿದ್ದಾರೆ. ಅಲ್ಲದೆ, ಬೆಂಗಳೂರು ಗ್ರಾಮಾಂತರ ನಗರ ಶಾಖೆಯ ಎಸ್‌ಬಿಎಂ ವ್ಯವಸ್ಥಾಪಕ ಎಂ.ಟಿ.ವಿ ರೆಡ್ಡಿ ಕೂಡ ಶಾಮೀಲಾಗಿದ್ದಾರೆ ಎಂದು ಆರೋಪಿಸಲಾಗಿತ್ತು.
ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ 120ಬಿ, 409, 419, 420, 467, 471 ಹಾಗೂ ಸಿಆರ್‌ಪಿಸಿ ಸೆಕ್ಷನ್ 13(1)ಡಿ, 13(2) ಅಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ನ್ಯಾಯಾಲಯವು, ಇದೀಗ, ಕೃಷ್ಣಯ್ಯ ಸೆಟ್ಟಿ ಸೇರಿದಂತೆ ಎಲ್ಲ ಆರೋಪಿಗಳನ್ನು ಅಪರಾಧಿಗಳು ಘೋಷಿಸಿದೆ. ಜೈಲು ಶಿಕ್ಷೆ ವಿಧಿಸಿದೆ. ಶಿಕ್ಷೆಯ ಪ್ರಮಾಣ ಇನ್ನೂ ಘೋಷಿಸಲಾಗಿಲ್ಲ. ಶುಕ್ರವಾರ ಘೋಷಿಸುವ ಸಾಧ್ಯತೆಗಳಿವೆ.
ಮಮೂರೂವರೆ ಕೋಟಿ ಎಲ್ಲ ಒಂದು ವಂಚನೆ ಏನ್ರೀ!