ವದಂತಿಗಳಿಗೆ ಕಿವಿಗೊಡಬೇಡಿ, ಉಚಿತ ಬಸ್ ಪ್ರಯಾಣ 10 ವರ್ಷ ಮುಂದುವರಿಯಲಿದೆ: ರಾಮಲಿಂಗಾರೆಡ್ಡಿ

Date:

  • ‘ಮಹಿಳೆಯರ ಉಚಿತ ಬಸ್ ಪ್ರಯಾಣ ಬಂದ್’ ಎಂದು ಸೋಷಿಯಲ್ ಮೀಡಿಯಾಗಳಲ್ಲಿ ಸುಳ್ಳು ಸುದ್ದಿ
  • ‘ಒಂದು ಪಕ್ಷದವರು ಬಂದ್ ವದಂತಿ ಹರಡಿಸುತ್ತಿದ್ದಾರೆ’ ಎಂದ ಸಚಿವ ರಾಮಲಿಂಗಾ ರೆಡ್ಡಿ

ಮಹಿಳೆಯರಿಗೆ ಈಗಾಗಲೇ ನೀಡಲಾಗಿರುವ ಗ್ಯಾರಂಟಿಗಳ ಪೈಕಿ ಉಚಿತ ಬಸ್ ಪ್ರಯಾಣದ ಯೋಜನೆಯಾದ ‘ಶಕ್ತಿ’ಯು ಇನ್ನೂ ಹತ್ತು ವರ್ಷಗಳ ಕಾಲ ಮುಂದುವರಿಯಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

‘ಶಕ್ತಿ ಯೋಜನೆ ನಿಲ್ಲಿಸಲಾಗುತ್ತೆಂದು ಸುಳ್ಳು ಸುದ್ದಿ’ಯನ್ನು ಸೋಷಿಯಲ್ ಮೀಡಿಯಾಗಳಲ್ಲಿ ಹರಿಬಿಡಲಾಗಿದೆ.

ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಇದು ವದಂತಿಯಷ್ಟೇ. ಒಂದು ಪಕ್ಷದವರು ಇಂತಹ ವದಂತಿ ಹಬ್ಬಿಸುತ್ತಿದ್ದಾರೆ. ಮುಂದಿನ ಬಾರಿಯೂ ನಾವೇ ಅಧಿಕಾರಕ್ಕೆ ಬರುತ್ತೇವೆ. ಹಾಗಾಗಿ, 10 ವರ್ಷಗಳ ಕಾಲ ಶಕ್ತಿ ಯೋಜನೆ ಮುಂದುವರಿಯುತ್ತದೆ. ಮಹಿಳೆಯರು ಯಾರೂ ಕೂಡ ಪಾಸ್ ಪಡೆಯುವ ಅಗತ್ಯವಿಲ್ಲ’ ಎಂದು ಸ್ಪಷ್ಟಪಡಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

‘ನಮ್ಮ ಸರ್ಕಾರದ ಶಕ್ತಿ ಯೋಜನೆಯ ಬಗ್ಗೆ ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಕೆಲವರು ಬಸ್ ಪಾಸ್ ಕೊಡಿ ಎಂದು ಅಧಿಕಾರಿಗಳಲ್ಲಿ ಕೇಳುತ್ತಿದ್ದಾರೆ ಅಂತ ಮಾಹಿತಿ ಬಂದಿದೆ. ಇದು ವದಂತಿಯಷ್ಟೇ. ಮುಂದಿನ ಬಾರಿ ಅಧಿಕಾರಕ್ಕೆ ಬರುವುದರ ಜೊತೆಗೆ 10 ವರ್ಷಗಳ ಕಾಲವೂ ಮುಂದುವರಿಯುತ್ತದೆ. ಹಾಗಾಗಿ, ಹೆಣ್ಣುಮಕ್ಕಳು ಯಾರೂ ಬಸ್ ಪಾಸ್ ಪಡೆಯುವ ಅಗತ್ಯವಿಲ್ಲ. ವದಂತಿಗಳನ್ನು ನಂಬಬೇಡಿ’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟೀಕರಣ ನೀಡಿದರು.

ಈ ನಡುವೆ ಕೆಎಸ್‌ಆರ್‌ಟಿಸಿ ಕೂಡ ಪ್ರಕಟಣೆ ಹೊರಡಿಸಿದ್ದು, ಸಾಮಾಜಿಕ‌ ಜಾಲತಾಣಗಳಲ್ಲಿ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಶಕ್ತಿ ಯೋಜನೆ ಕೊನೆಗೊಳ್ಳಲಿದ್ದು, ಮಹಿಳೆಯರಿಗೆ ಒದಗಿಸುತ್ತಿರುವ ಉಚಿತ ಪ್ರಯಾಣ ಶೀಘ್ರದಲ್ಲಿಯೇ ಸ್ಥಗಿತಗೊಳ್ಳಲಿದೆ ಎಂಬುದಾಗಿ ಸುದ್ದಿಯನ್ನು ಪ್ರಕಟಿಸುತ್ತಿರುವುದು ಸತ್ಯಕ್ಕೆ ದೂರವಾದ ವಿಷಯವಾಗಿರುತ್ತದೆ. ಈ ರೀತಿಯ ಯಾವುದೇ ಗೊಂದಲದ ಸಂದೇಶಗಳನ್ನು ಸಾರ್ವಜನಿಕ ಪ್ರಯಾಣಿಕರು ನಂಬಬಾರದು. ಈ ಬಗ್ಗೆ ನಾವು ಸಾರ್ವಜನಿಕರಿಗೆ ಕಾಲಕಾಲಕ್ಕೆ ಸಮರ್ಪಕವಾದ ಮಾಹಿತಿಯನ್ನು ಒದಗಿಸುತ್ತೇವೆ. ಮಹಿಳೆಯರ ಉಚಿತ‌ ಪ್ರಯಾಣದ ಶಕ್ತಿ ಯೋಜನೆಯು ಎಂದಿನಂತೆ ಮುಂದುವರೆಯಲಿದೆ’ ಎಂದು ಸ್ಪಷ್ಟಪಡಿಸಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಗ್ನಿಪಥ್ ಯೋಜನೆಯಿಂದ ದೇಶದ ಯುವಕರಿಗೆ ಅನ್ಯಾಯ: ರಾಷ್ಟ್ರಪತಿಗೆ ಮಲ್ಲಿಕಾರ್ಜುನ ಖರ್ಗೆ ಪತ್ರ

ಅಗ್ನಿಪಥ್ ಯೋಜನೆಯಿಂದಾಗಿ ಸಶಸ್ತ್ರ ಪಡೆಗಳಲ್ಲಿ ನಿಯಮಿತ ಉದ್ಯೋಗವನ್ನು ಬಯಸುತ್ತಿರುವ ದೇಶದ ಯುವಕರಿಗೆ...

ತುಮಕೂರು | ಬೀಡಿ ಕಾರ್ಮಿಕರಿಗೆ ಪರ್ಯಾಯ ಪರಿಹಾರ ನೀಡದೆ ಮಾರಾಟ ನಿಷೇಧ ವಿಧೇಯಕ ಜಾರಿ; ಕಾರ್ಮಿಕರ ವಿರೋಧ

ರಾಜ್ಯದಲ್ಲಿರುವ ಸರಿಸುಮಾರು 6 ಲಕ್ಷದಿಂದ 7 ಲಕ್ಷ ಬೀಡಿ ಕಾರ್ಮಿಕರ ಬದುಕಿಗೆ...

ಸರ್ಕಾರಿ ಗೌರವದೊಂದಿಗೆ ನೆರವೇರಿದ ಶಾಸಕ ರಾಜಾ ವೆಂಕಟಪ್ಪ ನಾಯಕ ಅಂತಿಮ ಸಂಸ್ಕಾರ: ಸಿಎಂ ಭಾಗಿ

ನಿನ್ನೆ(ಫೆ.25) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದ ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ...

ವಿಜಯಪುರ | ಸಂವಿಧಾನ, ಸಾಮಾಜಿಕ ನ್ಯಾಯ, ಸಹಬಾಳ್ವೆ ಸಮಾಲೋಚನೆ ಸಭೆ

ನಮ್ಮ ದೇಶ ಬಹುಸಂಸ್ಕೃತಿಗೆ ಪ್ರಖ್ಯಾತಿಯನ್ನು ಪಡಿದಿದೆ. ವಿವಿಧತೆಯಲ್ಲಿ ಏಕತೆಯನ್ನು ನಮ್ಮ ರಾಷ್ಟ್ರ...