ರೆಂಟ್‌ ಅಗ್ರಿಮೆಂಟ್‌ ಇದ್ದರೆ ಮಾತ್ರ ಬಾಡಿಗೆದಾರರಿಗೆ ʼಉಚಿತ ವಿದ್ಯುತ್ʼ: ಸಚಿವ ಕೆ ಜೆ ಜಾರ್ಜ್ ಮಾಹಿತಿ

Date:

  • ʼಗೃಹ ಜ್ಯೋತಿʼ ಉಚಿತ ವಿದ್ಯುತ್ ಯೋಜನೆ ಲಾಭದ ವ್ಯಾಪ್ತಿಗೆ ಬಾಡಿಗೆದಾರರು
  • ಫ್ರೀ ವಿದ್ಯುತ್ ವಿಚಾರದ ಗೊಂದಲಕ್ಕೆ ತೆರೆ ಎಳೆದ ಇಂಧನ ಸಚಿವ ಕೆ ಜೆ ಜಾರ್ಜ್

ಬಾಡಿಗೆದಾರರಿಗೂ ಗೃಹ ಜ್ಯೋತಿ ಯೋಜನೆ ಯ ಉಚಿತ ವಿದ್ಯುತ್ ಲಾಭ ಸಿಗಲಿದೆ. ಇದಕ್ಕಾಗಿ ಅವರು ಮನೆ ಬಾಡಿಗೆ ದಾಖಲೆ ಹೊಂದಿರಬೇಕು ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ಹೇಳಿದರು.

ವಿಧಾನಸೌಧದಲ್ಲಿ ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಬಾಡಿಗೆದಾರರು ಈ ಯೋಜನೆ ಲಾಭ ಪಡೆಯಲು ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು, ಅವರಿಗೂ ಯೋಜನೆ ಲಾಭ ಸಿಗಲಿದೆ. ಈ ವಿಚಾರದಲ್ಲಿ ಅನಗತ್ಯ ಗೊಂದಲ ಬೇಡ ಎಂದಿದ್ದಾರೆ.

ಸಚಿವರ ಈ ವಿಚಾರದಲ್ಲಿ ನೀಡಿರುವ ಸ್ಪಷ್ಟೀಕರಣದಂತೆ, ಬಾಡಿಗೆದಾರರು ಯೋಜನೆಗೆ ಅರ್ಜಿ ಸಲ್ಲಿಸುವಾಗ ಎಷ್ಟು ವರ್ಷಗಳಿಂದ ಆ ಬಾಡಿಗೆ ಮನೆಯಲ್ಲಿದ್ದಾರೆ ಎಂಬ ದಾಖಲೆ ತೋರಿಸಬೇಕು. ವಿದ್ಯುತ್ ಬಿಲ್ ಜೊತೆಗೆ ಬಾಡಿಗೆ ಮನೆ ಕರಾರು ಪತ್ರ ಇರಬೇಕು ಎಂದಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಜೊತೆಗೆ ಮನೆ ಮಾಲೀಕನ ತಾನು ಎಷ್ಟು ಬಾಡಿಗೆ ಮನೆ ಇದೆ ಎಂದು ಘೋಷಿಸಬೇಕು ಹಾಗೂ ಮನೆ ಮಾಲೀಕ ಕಡ್ಡಾಯವಾಗಿ ನನ್ನ ಬಳಿ ಇಷ್ಟು ಬಾಡಿಗೆ ಮನೆಗಳಿದೆ, ಇಷ್ಟು ಮನೆಗಳಿಗೆ ನಾನು ಕಡ್ಡಾಯವಾಗಿ ಟ್ಯಾಕ್ಸ್ ಕಟ್ಟಿದ್ದೇನೆ ಎಂದು ಮಾಹಿತಿ ನೀಡಬೇಕು ಎಂದು ಹೇಳಿದರು.

ಒಂದು ವೇಳೆ ಇದರಲ್ಲಿ ತಪ್ಪು ಮಾಹಿತಿ ನೀಡಿದರೇ ಈ ಯೋಜನೆ ಅಂತಹ ಬಾಡಿಗೆದಾರರರಿಗೆ ಅನ್ವಯವಾಗುವುದಿಲ್ಲ ಎಂದು ಸಚಿವ ಕೆಜೆ ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ.

ಗೃಹ ಜ್ಯೋತಿಗಾಗಿ ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಿ

ಸರ್ಕಾರದ ಗೃಹ ಜ್ಯೋತಿ ಯೋಜನೆ ಅಡಿ ಪ್ರತಿ ಮನೆಯವರೂ 200 ಯುನಿಟ್ ವಿದ್ಯುತ್ ಉಚಿತ ಪಡೆಯಲು ಅರ್ಜಿ ತುಂಬಬೇಕಾದ ಅನಿವಾರ್ಯತೆ ಎದುರಾಗಿದೆ.‌ ಮನೆ ಯಜಮಾನ ಅಗತ್ಯ ದಾಖಲೆಗಳೊಂದಿಗೆ ಪೋರ್ಟ್‌ಗೆ ತೆರಳಿ ಆನ್ ಲೈನ್ ಮೂಲಕ ತನ್ನ ಮೂಲ ಮಾಹಿತಿ ಜೊತೆಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕಿದೆ. ಇದಕ್ಕೆ ಈ ಕೆಳಕಂಡ ಮಾರ್ಗಸೂಚಿಯನ್ನು ಅನುಸರಿಸಬೇಕು.

   ಬಾಡಿಗೆದಾರರು

• ವಾಸವಿರುವ ಮನೆಯ ಆರ್ ಆರ್ ಸಂಖ್ಯೆಯೊಂದಿಗೆ ತಮ್ಮ ಆಧಾರ್ ಲಿಂಕ್ ಮಾಡಬೇಕು.
• ಇದಕ್ಕೆ ಬಾಡಿಗೆ ಮನೆಯ ಕರಾರು ಪತ್ರ (ರೆಂಟಲ್ ಅಗ್ರಿಮೆಂಟ್)ವನ್ನು ವೆಬ್ ಸೈಟ್ ನಲ್ಲಿ ಅಪ್ಲೋಡ್ ಮಾಡಬೇಕು.
• ಒಂದು ದಾಖಲೆಯನ್ನು ಒಂದು ಮೀಟರ್ ನೊಂದಿಗೆ ಮಾತ್ರ ಲಿಂಕ್ ಮಾಡಲು ಅವಕಾಶ.
• ಮನೆ ಬದಲಾಯಿಸಿದರೆ, ಹಿಂದಿನ ಮನೆಯ ಮೀಟರ್ ನೊಂದಿಗಿನ ಲಿಂಕ್ ತೆಗೆಯಬೇಕು.
• ಹೊಸ ಬಾಡಿಗೆ ಮನೆಯ ಆರ್ ಆರ್ ನಂಬರ್ ಮತ್ತು ಆಧಾರ್ ಕಾರ್ಡ್ ಮತ್ತೊಮ್ಮೆ ಲಿಂಕ್ ಮಾಡಬೇಕು.

    ಸ್ವಂತ ಮನೆಯವರು ಈ ರೀತಿ ಮಾಡಬೇಕು

• ಆರ್ ಆರ್ ನಂಬರ್ ನೊಂದಿಗೆ ಆಧಾರ್ ಲಿಂಕ್ ಮಾಡಬೇಕು.
• ಒಂದಕ್ಕಿಂತ ಹೆಚ್ಚು ಮನೆಯಿದ್ದರೆ ಒಂದು ಮನೆಗೆ ಮಾತ್ರ ಅವಕಾಶ.
• ಎರಡು ಮೀಟರ್ ಹೊಂದಿದ್ದರೆ ಯಾವುದಾದರೂ ಒಂದಕ್ಕೆ ಮಾತ್ರ ಸೌಲಭ್ಯ ಲಭ್ಯ.

ಈ ಸುದ್ದಿ ಓದಿದ್ದೀರಾ?:ಜನ ವಿರೋಧಿ ನೀತಿಗಳ ಜಾರಿಗೆ ಮುಂದಾದರೆ ಸುಮ್ಮನಿರಲ್ಲ: ಮಾಜಿ ಸಿಎಂ ಬೊಮ್ಮಾಯಿ

ಜುಲೈ 1 ರಿಂದ ಗೃಹ ಜ್ಯೋತಿ ಯೋಜನೆ ಜಾರಿಯಾಗಲಿದೆ. ಗ್ರಾಹಕರು ಹಿಂದೆ ಬಳಕೆ ಮಾಡುತ್ತಿದ್ದ ವಿದ್ಯುತ್ ಪ್ರಮಾಣದ ಆಧಾರದ ಮೇಲೆ ವಿದ್ಯುತ್ ಉಚಿತ ಸಿಗಲಿದೆ, ಎಂದು ಸರ್ಕಾರ ಷರತ್ತು ವಿಧಿಸಿದೆ.

ಅಲ್ಲದೆ, 12 ತಿಂಗಳ ಸರಾಸರಿ ವಿದ್ಯುತ್ ಬಳಕೆಗೆ ಶೇ 10 ರಷ್ಟು ಹೆಚ್ಚುವರಿ ಯೂನಿಟ್ ಸೇರಿಸಿ ಯೋಜನೆಯ ಪ್ರಯೋಜನ ಒದಗಿಸಲಾಗವುದು ಎಂದು ಸರ್ಕಾರ ಹೇಳಿದೆ. ಈ ರೀತಿ 200 ಯೂನಿಟ್‌ಗಳವರೆಗಿನ ಬಳಕೆಗೆ ಶುಲ್ಕದ ವಿನಾಯಿತಿ ನೀಡಲಾಗುತ್ತದೆ. ಜುಲೈವರೆಗೆ ಯಾವುದೇ ಗ್ರಾಹಕರು ಬಿಲ್ ಬಾಕಿ ಉಳಿಸಿಕೊಂಡಿದ್ದರೆ ಅದನ್ನು ಪಾವತಿಸಬೇಕಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದುರಹಂಕಾರಿಗಳಿಗೆ ಉತ್ತರ ಕೊಡಲ್ಲ: ಕೇಂದ್ರ ಸಚಿವ ಕುಮಾರಸ್ವಾಮಿ

ಎನ್​ಡಿಎ ಸರ್ಕಾರದ ಪ್ರಧಾನಿ ಮೋದಿ ಸಂಪುಟದಲ್ಲಿ ಉಕ್ಕು ಹಾಗೂ ಬೃಹತ್ ಕೈಗಾರಿಕೆ...

ಕಲ್ಯಾಣ ಕರ್ನಾಟಕದಲ್ಲಿ ಬೃಹತ್ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಸ್ಥಾಪಿಸಿ : ಸಚಿವ ಈಶ್ವರ ಖಂಡ್ರೆ

ಕಲ್ಯಾಣ ಕರ್ನಾಟಕ ಭಾಗ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ತೀವ್ರ ಹಿಂದುಳಿದಿದ್ದು, ಈ...

ದೇವದಾರಿ ಉಕ್ಕು ಗಣಿಗಾರಿಕೆ | ಆರು ವರ್ಷಗಳ ಹಿಂದೆ ವಿರೋಧ – ಇಂದು ಒಪ್ಪಿಗೆ; ಇದು ಕೇಂದ್ರ ಸಚಿವ ಎಚ್‌ಡಿಕೆ ವರಸೆ!

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಂಸದರಾಗಿ ಆಯ್ಕೆಯಾಗಿದ್ದು, ಮೋದಿ ನೇತೃತ್ವದ ಎನ್‌ಡಿಎ...

ಪೋಕ್ಸೋ ಪ್ರಕರಣ | ಬಿಎಸ್‌ವೈ ಬಂಧಿಸದಂತೆ ಹೈಕೋರ್ಟ್‌ ಮಧ್ಯಂತರ ಆದೇಶ

ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು...