‘ರೇಷನ್ ಕಾರ್ಡ್’ ತಿದ್ದುಪಡಿಗೆ ಇಂದಿನಿಂದ ಅವಕಾಶ : ಎಲ್ಲೆಲ್ಲಿ ಸೌಲಭ್ಯ?

Date:

Advertisements
  • ಬೆಂಗಳೂರು ಓನ್, ಕರ್ನಾಟಕ ಓನ್ ಸೇರಿ ಇತರ ಕಡೆಗಳಲ್ಲಿ ತಿದ್ದುಪಡಿ ಸೌಲಭ್ಯ
  • ಹೊಸ ಪಡಿತರ ಕಾರ್ಡಿಗೆ ಅರ್ಜಿ ಸಲ್ಲಿಸಲು ಇನ್ನೂ ಅವಕಾಶ ಕಲ್ಪಿಸದ ಸರ್ಕಾರ

ರಾಜ್ಯದಲ್ಲಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2000 ರೂ ದೊರಕುವ ‘ಗೃಹ ಲಕ್ಷ್ಮಿ’ ಯೋಜನೆ ಜಾರಿಗೆ ಬಂದಿರುವ ನಡುವೆಯೇ ಸರ್ಕಾರ ‘ರೇಷನ್ ಕಾರ್ಡ್’ ತಿದ್ದುಪಡಿಗೆ ಇಂದಿನಿಂದ(ಸೆ.1) ಅವಕಾಶ ಕಲ್ಪಿಸಿದೆ.

ಆದರೆ, ಹೊಸ ಪಡಿತರ ಚೀಟಿ ವಿತರಣೆಗೆ ಸರ್ಕಾರ ಯಾವಾಗ ಅನುಮತಿ ನೀಡುತ್ತದೆ ಎಂಬ ಬಗ್ಗೆ ಇಲಾಖೆ ಅಧಿಕಾರಿಗಳಿಗೆ ಯಾವುದೇ ಮಾಹಿತಿ ಇಲ್ಲ.

ಈಗಾಗಲೇ ಬಿಪಿಎಲ್ ಕಾರ್ಡ್​​ಗೆ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಸರ್ಕಾರ ಇನ್ನೂ ವಿಲೇವಾರಿ ಮಾಡಿಲ್ಲ. ಇದರ ಮಧ್ಯೆ ರಾಜ್ಯ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳ ಫಲಾನುಭವಿಗಳಾಗಲು ಬಿಪಿಎಲ್​ ಕಾರ್ಡ್​ಗಾಗಿ ಜನರು ಮುಗಿ ಬೀಳುತ್ತಿದ್ದಾರೆ.

Advertisements

ಕಾರ್ಡ್​ನಲ್ಲಿ ಪುರುಷರು ಮುಖ್ಯಸ್ಥರಾಗಿದ್ದರಿಂದ ಮಹಿಳೆಯರಿಗೆ ಸರ್ಕಾರ ನೀಡುತ್ತಿರುವ 2000 ರೂ. ಗೃಹಲಕ್ಷ್ಮೀ ಯೋಜನೆಯಿಂದ ಹಲವರು ವಂಚಿತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮನೆ ಮುಖ್ಯಸ್ಥರ ಹೆಸರು ಬದಲಾವಣೆಗೆ ಇಂದಿನಿಂದ(ಸೆ.1) ಅವಕಾಶ ಕಲ್ಪಿಸಿದ್ದು, ಸೆ.10ರವರೆಗೆ ಈ ಸೇವೆ ಲಭ್ಯವಿರಲಿದೆ.

ಸದ್ಯದ ಆಹಾರ ಇಲಾಖೆಯ ನಿಯಮದ ಪ್ರಕಾರ ರೇಷನ್ ಕಾರ್ಡ್‌ನಲ್ಲಿ ಮನೆಯ ಯಜಮಾನ ಎನ್ನುವ ಕಲ್ಪನೆಯನ್ನು ತೆಗೆದು ಹಾಕಲಾಗಿದ್ದು, ‘ಯಜಮಾನಿ’ಗೆ ಅವಕಾಶ ಕಲ್ಪಿಸಲಾಗಿದೆ. ಕುಟುಂಬ ಸದಸ್ಯರ ಪೈಕಿ ಯಾರು ಹಿರಿಯ ಮಹಿಳೆ ಇರುತ್ತಾರೋ ಅವರ ಆಧಾರ್ ಕಾರ್ಡಿನ ವಿವರಗಳನ್ನು ಹಾಕಿದಾಗ ರೇಷನ್ ಕಾರ್ಡ್‌ ‘ಆಟೊಮ್ಯಾಟಿಕ್’ ಆಗಿ ಹಿರಿಯ ಮಹಿಳೆಯ ಹೆಸರಿಗೆ ‘ರಿಜಿಸ್ಟರ್’ ಆಗುತ್ತಿತ್ತು.

ಆಹಾರ ಇಲಾಖೆಯ ಮಾಹಿತಿಯ ಪ್ರಕಾರ ಸುಮಾರು 6 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡಿನಲ್ಲಿ ಪುರುಷರೇ ಮುಖ್ಯಸ್ಥರಾಗಿದ್ದಾರೆ. ಹೀಗಾಗಿ ಬದಲಾವಣೆ ಮಾಡಲು ಈ ಮೊದಲೇ ಸೂಚಿಸಲಾಗಿತ್ತಾದರೂ ಹಲವು ಮಂದಿ ಇನ್ನೂ ಮಾಡಿರಲಿಲ್ಲ. ಈಗ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿಯ ಫಲಾನುಭವಿ ಆಗಬೇಕಾದರೆ ಬದಲಾಯಿಸಲೇಬೇಕಾದ ಅನಿವಾರ್ಯತೆ ಬಂದೊದಗಿದೆ. ಹೀಗಾಗಿ ಕಾರ್ಡ್‌ ಮುಖ್ಯಸ್ಥರ ಹೆಸರು ಬದಲಾವಣೆಗೆ ಸೆಪ್ಟೆಂಬರ್​ 1ರಿಂದ 10ರವರೆಗೆ ಅವಕಾಶ ಕಲ್ಪಿಸಲಾಗಿದ್ದು, ಈ ಹತ್ತು ದಿನದಲ್ಲಿ ಹೆಸರು ಬದಲಾವಣೆ ಮಾಡಿಸಿಕೊಳ್ಳಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆದೇಶ ಹೊರಡಿಸಿದೆ.

ಏನೆಲ್ಲಾ ಬದಲಾವಣೆಗೆ ಅವಕಾಶ?
ರೇಷನ್ ಕಾರ್ಡ್​ನಲ್ಲಿ ಹೆಸರು ಬದಲಾವಣೆ, ಆಧಾರ್ ಕಾರ್ಡ್​ನಲ್ಲಿರುವ ಹೆಸರು ಸೇರ್ಪಡೆ, ಹೊಸ ಸದಸ್ಯರು ಸೇರಿಸುವುದು, ಯಾರಾದರೂ ಮೃತಪಟ್ಟರೆ ಅಂಥವರ ಹೆಸರು ಡಿಲೀಟ್, ಬೇರೆ ಜಿಲ್ಲೆಗೆ ವರ್ಗಾವಣೆ ಹಾಗೂ ವಿಳಾಸ ಪರಿಷ್ಕರಣೆ ಮಾಡಲು ಆಹಾರ ಇಲಾಖೆ ಅವಕಾಶ ಕೊಟ್ಟಿದೆ.

ಈ ಬಗ್ಗೆ ಈ ದಿನ.ಕಾಮ್ ಜೊತೆಗೆ ಮಾತನಾಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಆಹಾರ ಇಲಾಖೆಯ ಅಧಿಕಾರಿಯೋರ್ವರು, “ರೇಷನ್ ಕಾರ್ಡ್ ತಿದ್ದುಪಡಿಗೆ ಇಂದಿನಿಂದ ಸೆ. 10ರವರೆಗೆ ಅವಕಾಶ ಕಲ್ಪಿಸಲಾಗಿದೆ. ಬಾಪೂಜಿ ಸೇವಾ ಕೇಂದ್ರ, ಬೆಂಗಳೂರು ವನ್ ಹಾಗೂ ಕರ್ನಾಟಕ ಒನ್, ಮಂಗಳೂರು ಒನ್ ಸೇರಿ ಇತರ ಕಡೆಗಳಲ್ಲಿ ರೇಷನ್ ಕಾರ್ಡ್ ಮಾರ್ಪಾಡು, ತಿದ್ದುಪಡಿ ಮಾಡಿಸಿಕೊಳ್ಳಲು ಅವಕಾಶ ಇದೆ” ಎಂದು ತಿಳಿಸಿದರು.

“ಹೊಸ ಪಡಿತರ ಚೀಟಿಗೆ ಅವಕಾಶ ಕಲ್ಪಿಸಿದ್ದಾರಾ ಎಂದು ಕೇಳಿಕೊಂಡು ದಿನಂಪ್ರತಿ ನೂರಾರು ಜನ ಕಚೇರಿಗೆ ಬರುತ್ತಿದ್ದಾರೆ. ಸರ್ಕಾರ ಯಾವಾಗ ಅದಕ್ಕೆ ಅನುಮತಿ ನೀಡುತ್ತದೆ ಎಂಬ ಬಗ್ಗೆ ಇನ್ನೂ ಇಲಾಖೆಯ ಹಿರಿಯ ಅಧಿಕಾರಿಗಳಿಂದ ನಮಗೆ ಯಾವುದೇ ಮಾಹಿತಿ ಬಂದಿಲ್ಲ. ಸದ್ಯಕ್ಕೆ ತಿದ್ದುಪಡಿಗೆ ಮಾತ್ರ. ಇದರ ಅವಕಾಶವನ್ನು ಜನ ಬಳಸಿಕೊಳ್ಳಬೇಕು” ಎಂದು ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

Download Eedina App Android / iOS

X