ಖಾಸಗಿ ಸಂಸ್ಥೆಯವರು ನೀಡಿರುವ ಎಫ್ಎಸ್ಎಲ್ ವರದಿಯನ್ನು ಗಣನೆಗೆ ತೆಗೆದುಕೊಳ್ಳಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದರು.
ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸರ್ಕಾರದ ಎಫ್ಎಸ್ಎಲ್, ಗೃಹ ಇಲಾಖೆಯ ಫಾರೆನ್ಸಿಕ್ ವರದಿಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಸಾಬೀತಾದರೆ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ” ಎಂದು ತಿಳಿಸಿದರು.
ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, “ಎಫ್ಎಸ್ಎಲ್ ವರದಿ ಘಟನೆ ನಡೆದ ಮರುದಿನವೆ ಬಂದಿದೆ ಎಂದು ಅವರು ಯಾವ ಅಧಾರದ ಮೇಲೆ ಹೇಳಿದ್ದಾರೆ ಗೊತ್ತಿಲ್ಲ. ಇದು ನಮ್ಮ ಇಲಾಖೆಗೆ ಸಂಬಂಧಿಸಿದ್ದು. ನಮ್ಮ ವರದಿ ಬಂದ ಮೇಲೆ ಹೇಳುತ್ತೇನೆ. ಖಾಸಗಿಯವರಿಗೆ ಹೀಗೆ ವರದಿ ಕೊಡಲು ಅನುಮತಿ ಇದೆಯಾ? ಅವರಿಗೆ ಎನ್ಒಸಿ ಯಾರು ಕೊಟ್ಟಿದ್ದಾರೆ. ಎಲ್ಲವನ್ನು ಪರಿಶೀಲಿಸಿ ಮಾತನಾಡುವೆ” ಎಂದರು.
“ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ವಿಚಾರವಾಗಿ ಮಾತನಾಡಿ, “ಕೆಲವು ವಿಚಾರ ಹಂಚಿಕೊಳ್ಳಲು ಆಗಲ್ಲ. ಎನ್ಐಎ ಈಗಾಗಲೆ ತನಿಖೆ ಆರಂಭಿಸಿದ್ದಾರೆ, ಎನ್ಎಸ್ಜಿ ಕೂಡ ತನಿಖೆ ನಡೆಸುತ್ತಿದೆ. ಇದರ ಹಿಂದೆ ಯಾರಿದ್ದಾರೆ, ವ್ಯಕ್ತಿ ಇದ್ದಾರಾ, ಸಂಘಟನೆ ಇದೆಯಾ.? ಎಲ್ಲವನ್ನೂ ಪರಿಶೀಲನೆ ಮಾಡಬೇಕು” ಎಂದು ಹೇಳಿದರು.
ಜಾತಿ ಗಣತಿ : ಸಿಎಂ ಕ್ಯಾಬಿನೆಟ್ ನಿರ್ಧಾರಕ್ಕೆ ನಾವು ಬದ್ದ
“ಜಾತಿ ಜನಗಣತಿ ಬಗ್ಗೆ ಸಂಪುಟ ಸಭೆಯಲ್ಲಿಟ್ಟು ನಿರ್ಧಾರ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿಗಳೇ ಹೇಳಿದ್ದಾರೆ. ವಿರೋಧ ಮಾಡುವುದು, ಪರವಾಗಿ ಮಾತಾಡುವುದುಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದ್ದಿದ್ದೇ. ವರದಿ ತರಿಸಿಕೊಂಡಮೇಲೆ ಲಾಜಿಕ್ ಎಂಡ ಆಗಬೇಕು. ಇಲ್ಲ ರಿಜೆಕ್ಟ್ ಮಾಡಬೇಕು. ಸಿಎಂ ಕ್ಯಾಬಿನೆಟ್ ನಿರ್ಧಾರಕ್ಕೆ ನಾವು ಬದ್ದ” ಎಂದು ಹೇಳಿದರು.
