‘ಯುವಕನ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ಧ ಕ್ರಮ ಜರುಗಿಸುವ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ತೀರ್ಮಾನ ಮಾಡುತ್ತೇವೆ’ ಎಂದು ಜೆಡಿಎಸ್ ಪ್ರಮುಖರ ಸಮಿತಿಯ ಅಧ್ಯಕ್ಷ ಜಿ ಟಿ ದೇವೇಗೌಡ ತಿಳಿಸಿದರು.
ಇಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ ಭಾನುವಾರ ಪ್ರತಿಕ್ರಿಯಿಸಿದ ಅವರು, ‘ಪ್ರಕರಣದ ಬಗ್ಗೆ ನನಗೆ ಮಾಹಿತಿ ಇಲ್ಲ. ಸೂರಜ್ ಅವರನ್ನು ಬಂಧಿಸಿರುವ ವಿಷಯಮಾಧ್ಯಮದಿಂದ ತಿಳಿಯಿತು. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿಚಾರದಲ್ಲೂ ನಮ್ಮ ಪಕ್ಷದ ಹಸ್ತಕ್ಷೇಪ ಇರಲಿಲ್ಲ. ತಪ್ಪು ಮಾಡಿದ್ದರೆ ಶಿಕ್ಷೆಯಾಗಲಿ’ ಎಂದರು.
‘ನಾವು ತಪ್ಪು ಮಾಡಿದವರ ಪರ ನಿಲ್ಲುವುದಿಲ್ಲ. ನನ್ನ ಮಗನೇ ಇರಲಿ, ನನ್ನ ಸಂಬಂಧಿಗಳೇ ಇರಲಿ, ಯಾರೇ ತಪ್ಪು ಮಾಡಿದರೂ ತಪ್ಪೇ . ಜಾತ್ಯತೀತ ಜನತದಳ ಪಕ್ಷವು ತಪ್ಪು ಮಾಡಿದವರ ಪರವಾಗಿ ಎಂದಿಗೂ ನಿಲ್ಲುವುದಿಲ್ಲ’ ಎಂದು ಹೇಳಿದರು.
ಸೂರಜ್ ರೇ ವಣ್ಣ ಬಂಧನದಿಂದ ಪಕ್ಷಕ್ಕೆ ಮುಜುಗರವೇಕೆ’ ಎಂದು ಕೇಳಿದ ಅವರು, ‘ರಾಜ್ಯದಲ್ಲಿ ಯಾರೋ ಒಬ್ಬ ತಪ್ಪು ಮಾಡಿದರೆ ಅದಕ್ಕೆ ಆರೂವರೆ ಕೋಟಿ ಜನ ಕಾರಣವೇ ? ಅಲ್ಲ ತಾನೇ? ಇದೂ ಹಾಗೆಯೇ ’ ಎಂದು ಪ್ರತಿಕ್ರಿಯಿಸಿದರು.
ಲೈಂಗಿಕ ದೌರ್ಜನ್ಯ ಹಗರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಂಧನವಾಗಿ ವಿಚಾರಣೆ ನಡೆಯುತ್ತಿರುವ ನಡುವೆಯೇ ಅವರ ಸಹೋದರ, ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಸೂರಜ್ ರೇವಣ್ಣನ ಬಂಧನವಾಗಿದೆ.
ತಾನಾಗಿಯೇ ಬಲೆಗೆ ಬಿದ್ದ ಸೂರಜ್ ರೇವಣ್ಣ
ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಹಾಸನದಲ್ಲಿ ಸೂರಜ್‌ನನ್ನು ಬಂಧಿಸಲಾಗಿದೆ. ಪ್ರಜ್ವಲ್ ರೇವಣ್ಣ ಇಪ್ಪತ್ತಕ್ಕೂ ಹೆಚ್ಚು ದಿನಗಳ ಬಳಿಕ ಸಿಕ್ಕಿಬಿದ್ದ. ಈಗ ಸೂರಜ್,ಕೈಗೆ ಅಗ್ಗ ಕೊಟ್ಟು ಕಟ್ಟಿಸಿಕೊಂಡರು ಎನ್ನುವಂತೆ, ಸಾಕ್ಷಿ ನೀಡಲು ಠಾಣೆಗೆ ಬಂದ ಅವರು ತಾವಾಗಿಯೇ ಪೊಲೀಸ್ ಬಲೆಗೆ ಬಿದ್ದಿದ್ದಾನೆ.
ತಮ್ಮ ಆಪ್ತ ಸಂತ್ರಸ್ತನ ವಿರುದ್ದ ನೀಡಿದ್ದ ದೂರಿಗೆ ಸಾಕ್ಷಿ ನೀಡಲು ಹಾಸನದ ಸೆನ್ ಪೊಲೀಸ್ ಠಾಣೆಗೆ ಸಂಜೆ 7.30ಕ್ಕೆ ಬಂದಿದ್ದ ಸೂರಜ್ ರೇವಣ್ಣನನ್ನು ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು, ಸುದೀರ್ಘ ವಿಚಾರಣೆಗೊಳಪಡಿಸಿದರು. ರಾತ್ರಿ 10 ಗಂಟೆಗೆ ಸೂರಜ್ ರೇವಣ್ಣಗೆ ಊಟ ನೀಡಿದ ಬಳಿಕ ಇಂದು (ಜೂನ್ 23) ಮುಂಜಾನೆ 4 ಗಂಟೆಯವರೆಗೂ ತನಿಖೆ ನಡೆಸಿ ನಂತರ ಮಲಗಲು ವ್ಯವಸ್ಥೆ ಮಾಡಿದ್ದರು. ಇದಾದ ಬಳಿಕ ಇಂದು ಬೆಳಗ್ಗೆ ಸೂರಜ್ ರೇವಣ್ಣ ಅವರನ್ನು ಪೊಲೀಸರು ಅಧಿಕೃತವಾಗಿ ಬಂಧಿಸಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಹಿತಿಗಳ ಸ್ವಾಭಿಮಾನ, ಸ್ವಾಯತ್ತತೆ ಮತ್ತು ಸಂಸ್ಕೃತಿ ಸಚಿವರ ತಿಪ್ಪೆ ಸಾರಿಸುವಿಕೆ
ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ ದೌರ್ಜನ್ಯ ಎಸಗಿದ್ದಾರೆ ಎಂದು ಸೂರಜ್ ರೇವಣ್ಣ ವಿರುದ್ಧ ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತರೊಬ್ಬರು ಆರೋಪಿಸಿ ಎಫ್‌ಐಆರ್ ದಾಖಲಿಸಿದ್ದರು. ಇತ್ತ ಸಂತ್ರಸ್ತ ದೂರು ದಾಖಲಿಸುತ್ತಿದ್ದಂತೆ ಆತನ ವಿರುದ್ಧವೇ ಸೂರಜ್ ಆಪ್ತರು ದೂರು ನೀಡಿದ್ದರು.
ಸುಳ್ಳು ಆರೋಪ ಮಾಡಿ ಐದು ಕೋಟಿ ರೂ. ಹಣಕ್ಕಾಗಿ ಸಂತ್ರಸ್ತ ಪೀಡಿಸಿದ್ದಾನೆ ಎಂದು ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ನೀಡಿದ ದೂರಿನ ಮೇರೆಗೆ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.
ಐದು ಕೋಟಿ ರೂ. ಬ್ಲ್ಯಾಕ್‌ಮೇಲ್ ಕೇಸ್‌ನಲ್ಲಿ ಸಾಕ್ಷಿ ನೀಡಲು ಸೂರಜ್ ಪೊಲೀಸ್ ಠಾಣೆಗೆ ಆಗಮಿಸಿದ್ದರು. ಆಡಿಯೊ ರೆಕಾರ್ಡ್, ಫೋಟೊ ಹಾಗೂ ಇತರ ದಾಖಲೆ ನೀಡುವ ಸಲುವಾಗಿ ಸೂರಜ್ ಬಂದಿದ್ದರು. ಬಂಧನ ಸಾಧ್ಯತೆಯ ನಿರೀಕ್ಷೆ ಮಾಡದೆ ಬಂದ ಸೂರಜ್ ರೇವಣ್ಣ ಇದೀಗ ಅರೆಸ್ಟ್ ಆಗಿದ್ದಾರೆ. ಹೊಳೆನರಸೀಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
