ಆರು ರಾಜ್ಯಗಳಲ್ಲಿ 85 ಲಕ್ಷ ಮಕ್ಕಳ ಭವಿಷ್ಯ ಅಪಾಯದಲ್ಲಿದೆ: ಬಿಜೆಪಿ ವಿರುದ್ಧ ರಾಹುಲ್ ಗಾಂಧಿ ತರಾಟೆ

Date:

ಪ್ರಶ್ನೆ ಪತ್ರಿಕೆ ಹೇಳಿಕೆ ವಿಚಾರದಲ್ಲಿ ಬಿಜೆಪಿ ಸರ್ಕಾರವನ್ನು ಲೋಕಸಭೆ ವಿಪಕ್ಷ ನಾಯಕ, ಸಂಸದ ರಾಹುಲ್ ಗಾಂಧಿ ತರಾಟೆಗೆ ತೆಗೆದುಕೊಂಡಿದ್ದಾರೆ. ಆರು ರಾಜ್ಯಗಳಲ್ಲಿ 85 ಲಕ್ಷ ಮಕ್ಕಳ ಭವಿಷ್ಯ ಅಪಾಯದಲ್ಲಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

- Advertisement -

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ನಾಯಕ, “ಪ್ರಶ್ನೆ ಪತ್ರಿಕೆ ಸೋರಿಕೆಯು ಒಂದು ವೈಫಲ್ಯತೆಯಾಗಿದ್ದು, ಅದು ಗಂಭೀರವಾದ ಸಮಸ್ಯೆಯಾಗಿದೆ. ಎಲ್ಲಾ ರಾಜಕೀಯ ಪಕ್ಷಗಳು ಸರ್ಕಾರಗಳು ಭಿನ್ನಾಭಿಪ್ರಾಯವನ್ನು ತೊರೆದು ಕಠಿಣ ಕ್ರಮವನ್ನು ತೆಗೆದುಕೊಂಡರೆ ಮಾತ್ರ ಈ ಸಮಸ್ಯೆಗೆ ಪರಿಹಾರ ಕಾಣಲು ಸಾಧ್ಯ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಕೆಪಿಎಸ್‌ಸಿ ಕರ್ಮಕಾಂಡ | ಪ್ರಶ್ನೆ ಪತ್ರಿಕೆ ತಯಾರಿಕೆಗೆ ‘ಗೂಗಲ್ ಟ್ರಾನ್ಸ್‌ಲೇಟ್‌’ ಬಳಸಿತಾ ಆಯೋಗ?

“ಆರು ರಾಜ್ಯಗಳಲ್ಲಿ 85 ಲಕ್ಷ ಮಕ್ಕಳ ಭವಿಷ್ಯ ಅಪಾಯದಲ್ಲಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗುವುದು ನಮ್ಮ ದೇಶದ ಯುವಕರಿಗೆ ಅತೀ ಅಪಾಯಕಾರಿ ಚಕ್ರವ್ಯೂಹವಾಗಿ ಮಾರ್ಪಟ್ಟಿದೆ” ಎಂದು ರಾಹುಲ್ ಗಾಂಧಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

“ಪ್ರಶ್ನೆ ಪತ್ರಿಕೆ ಸೋರಿಕೆಯಾಗುವುದು ಕಷ್ಟಪಟ್ಟು ಕಲಿಯುವ ವಿದ್ಯಾರ್ಥಿಗಳನ್ನು ಮತ್ತು ಅವರ ಕುಟುಂಬವನ್ನು ಅನಿಶ್ಚಿತತೆ ಮತ್ತು ಚಿಂತೆಗೆ ದೂಡುತ್ತದೆ. ಅವರ ಪರಿಶ್ರಮದ ಫಲವನ್ನು ಅವರಿಂದ ಕಿತ್ತುಕೊಂಡತಾಗುತ್ತದೆ. ಇದು ಮುಂದಿನ ಪೀಳಿಗೆಗೆ ಅಪ್ರಾಮಾಣಿಕತೆಯು ಕಷ್ಟಪಡುವುದಕ್ಕಿಂತ ಉತ್ತಮ ಎಂಬ ತಪ್ಪು ಸಂದೇಶವನ್ನು ನೀಡುತ್ತದೆ” ಎಂದು ಕಾಂಗ್ರೆಸ್ ನಾಯಕ ಆತಂಕ ವ್ಯಕ್ತಪಡಿಸಿದ್ದಾರೆ.

“ನೀಟ್ ಪೇಪರ್ ಸೋರಿಕೆಯು ದೇಶದಲ್ಲಿ ಅತೀ ದೊಡ್ಡ ಸುದ್ದಿಯಾಗಿ ಒಂದು ವರ್ಷವೂ ಆಗಿಲ್ಲ. ನಮ್ಮ ವಿರೋಧದ ಬೆನ್ನಲ್ಲೇ ಮೋದಿ ಸರ್ಕಾರ ಹೊಸ ಕಾನೂನಿನ ಮೂಲಕ ಅಭ್ಯರ್ಥಿಗಳನ್ನು ಸಮಾಧಾನಪಡಿಸಿತು. ಆದರೆ ಇತ್ತೀಚೆಗೆ ಆಗಾಗ ಸುದ್ದಿಯಾಗುತ್ತಿರುವ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳನ್ನು ನೋಡಿದಾಗ ಈ ಕಾನೂನು ಕೂಡಾ ವೈಫಲ್ಯವಾಗಿದೆ ಎಂದು ಖಚಿತ ಪಡಿಸುತ್ತದೆ” ಎಂದು ಅಭಿಪ್ರಾಯಿಸಿದರು.

“ಈ ಗಂಭೀರ ಸಮಸ್ಯೆಯು ಆಡಳಿತಾತ್ಮಕ ವೈಫಲ್ಯವಾಗಿದೆ. ಎಲ್ಲಾ ರಾಜಕೀಯ ಪಕ್ಷಗಳು ಸರ್ಕಾರಗಳು ಭಿನ್ನಾಭಿಪ್ರಾಯವನ್ನು ತೊರೆದು ಕಠಿಣ ಕ್ರಮವನ್ನು ತೆಗೆದುಕೊಂಡರೆ ಮಾತ್ರ ಈ ಸಮಸ್ಯೆಗೆ ಪರಿಹಾರ ಕಾಣಲು ಸಾಧ್ಯ” ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭೀರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್ ದೀಪ್ಕೆ ಕುರಿತು ನಡೆದಿದೆ ಚರ್ಚೆ!

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ...