ಶೀರ್ಘದಲ್ಲೇ ಜಿ.ಪಂ/ತಾ.ಪಂ ಚುನಾವಣೆ: ಸಿಎಂ ಸಿದ್ದರಾಮಯ್ಯ

Date:

Advertisements

ಶೀರ್ಘದಲ್ಲೇ ಜಿಲ್ಲಾ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯಿತಿಗಳ ಚುನಾವಣೆಯನ್ನು ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡುತ್ತ ದೇವೇಗೌಡರ ಕುಟುಂಬದ ನಂತರ ಯಡಿಯೂರಪ್ಪ ಅವರ ಕುಟುಂಬವನ್ನು ಗುರಿಮಾಡಲಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, ದ್ವೇಷದ ರಾಜಕಾರಣವನ್ನು ನಾನು ಇಂದಿನವರೆಗೆ ಯಾರ ಮೇಲೂ ಮಾಡಿಲ್ಲ. ನಾನು ನಿನ್ನೆ ಮೊನ್ನೆ ರಾಜಕೀಯಕ್ಕೆ ಬಂದಿಲ್ಲ” ಎಂದರು.

“ನಮ್ಮ ಮೇಲೆ ಡಿ ಕೆ ಶಿವಕುಮಾರ್, ರಾಹುಲ್ ಗಾಂಧಿ ಅವರ ಮೇಲೆ ಕೇಸು ಹಾಕಿರುವುದನ್ನು ಏನೆಂದು ಕರೆಯಬೇಕು. ರಾಹುಲ್ ಗಾಂಧಿ ಅವರ ಸಂಸದ ಸ್ಥಾನವನ್ನೇ ರದ್ದುಗೊಳಿಸಿದ್ದನ್ನು ಏನೆಂದು ಕರೆಯುವುದು? ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜೈಲಿಗೆ ಕಲಿಸಿದ್ದನ್ನು ಏನೆಂದು ಕರೆಯಬೇಕು? ಇದೆಲ್ಲವನ್ನು ದ್ವೇಷದ ರಾಜಕಾರಣ ಅನ್ನದೇ ಪ್ರೀತಿಯ ರಾಜಕಾರಣ ಎಂದು ಕರೆಯಬೇಕಾ?” ಎಂದು ತಿರುಗೇಟು ನೀಡಿದರು.

ದಕ್ಷಿಣ ಭಾರತದಲ್ಲಿ ಜನ ಬಿಜೆಪಿಯನ್ನು ಬೆಂಬಲಿಸುವುದಿಲ್ಲ

ದಕ್ಷಿಣ ಭಾರತದ ಏಳು ಜನರು ಕೇಂದ್ರದಲ್ಲಿ ಸಚಿವರಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ದಕ್ಷಿಣ ಭಾರತದಲ್ಲಿ ಏನು ಮಾಡಿದರು ಬಿಜೆಪಿಯನ್ನು ಜನ ಬೆಂಬಲಿಸುವುದಿಲ್ಲ. ಏಕೆಂದರೆ ಆರ್.ಎಸ್.ಎಸ್ ನಾ ರಾಜಕೀಯ ಮುಖವಾಡ ಅದು ಹಾಗಾಗಿ ಉತ್ತರ ಭಾರತದಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ. ಆರ್.ಎಸ್.ಎಸ್ ನ ಮುಖ್ಯಸ್ಥರು ಅಹಂಕಾರಕ್ಕೆ ಜನ ಸರಿಯಾದ ಪಾಠ ಕಲಿಸಿದ್ದಾರೆ ಎಂದು ಹೇಳಿದ್ದಾರೆ” ಎಂದರು.

ನೀಟ್: ಮರುಪರೀಕ್ಷೆಗೆ ಆಗ್ರಹ

“ನೀಟ್ ಪರೀಕ್ಷೆಯಲ್ಲಿ ಕೆಲವು ರ‍್ಯಾಂಕ್ ನೀಡುವುದರಲ್ಲಿ ಹಾಗೂ ಅಭ್ಯಾಸ ಮಾಡಿ ಬರೆದ ವಿದ್ಯಾರ್ಥಿಗಳಿಗೆ ದೊಡ್ಡ ಅನ್ಯಾಯವಾಗಿದೆ ಅನ್ಯಾಯವಾಗಿದೆ. ಈ ಬಗ್ಗೆ ತನಿಖೆಯಾಗಬೇಕು ಹಾಗೂ ಮರುಪರೀಕ್ಷೆಯಾಗಬೇಕು. ಕೃಪಾಂಕ ಕೊಟ್ಟು ಉತ್ತೀರ್ಣ ಮಾಡುವುದು ಕೆಟ್ಟ ಅಭ್ಯಾಸ. ಎನ್ . ಟಿ .ಎ ಪರೀಕ್ಷೆಯನ್ನು ಸರಿಯಾಗಿ ಮಾಡದೇ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿದ್ಯಾರ್ಥಿ ಕಣ್ಣಲ್ಲಿ ಗಾಂಧೀಜಿ ಬಯಸಿದ ನ್ಯಾಯಸಮ್ಮತ ತತ್ವದ ರಾಜಕೀಯ ವ್ಯವಸ್ಥೆ

ಸ್ವಾತಂತ್ರ್ಯೋತರ ಭಾರತ ಹೇಗಿರಬೇಕು ಎಂಬುದರ ಕುರಿತು ಗಾಂಧೀಜಿಯ ಕನಸು ವಿಭಿನ್ನವಾಗಿದ್ದು, ರಾಜಕೀಯವು...

ಗಾಂಧೀಜಿ, ಶಾಸ್ತ್ರಿಯವರ ತ್ಯಾಗ, ಬಲಿದಾನ ಎಂದಿಗೂ ಆದರ್ಶಪ್ರಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಅಕ್ಟೋಬರ್ 2ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತದೆ. ಅವರ ನೇತೃತ್ವದಲ್ಲಿ ನಡೆದ...

5 ಹುಲಿ, 20 ನವಿಲು, 19 ಕೋತಿಗಳ ಸಾವು ವನ್ಯಜೀವಿ ಸಂರಕ್ಷಣೆಯ ಜವಾಬ್ದಾರಿ ಹೆಚ್ಚಿಸಿದೆ: ಈಶ್ವರ ಖಂಡ್ರೆ

ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿ, ಮಧುಗಿರಿಯ ಮಿಡಿಗೇಶಿಯಲ್ಲಿ 20 ನವಿಲು,...

Download Eedina App Android / iOS

X