ಮಗನ ಬಗ್ಗೆ ಶಾಸಕ ಯಶ್ಪಾಲ್ ವಿವಾದಾತ್ಮಕ ಹೇಳಿಕೆಗೆ ‘ಪ್ರತಿಕ್ರಿಯಿಸಲ್ಲ’ ಎಂದ ಗೃಹ ಸಚಿವ ಪರಮೇಶ್ವರ್

Date:

  • ಸರ್ಕಾರ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ತನಿಖೆ ಮಾಡುತ್ತದೆ : ಪರಮೇಶ್ವರ್
  • ಬಿಜೆಪಿಯಲ್ಲಿ ವಿಕೃತ ಮನಸ್ಸಿನವರು ತುಂಬಿ ತುಳುಕುತ್ತಿದ್ದಾರೆ : ಬಿ.ಕೆ.ಹರಿಪ್ರಸಾದ್

‘ಜಿ ಪರಮೇಶ್ವರ್ ಮಗ ಲಿಂಗ ಬದಲಾಯಿಸಿಕೊಂಡಿದ್ದು ಮಕ್ಕಳಾಟ’ ಎಂದು ಬಿಜೆಪಿ ಶಾಸಕ ಯಶ್ಪಾಲ್ ಸುವರ್ಣ ತಮ್ಮ ಮಗನ ಬಗ್ಗೆ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಲು ಗೃಹ ಸಚಿವ ಜಿ ಪರಮೇಶ್ವರ್ ನಿರಾಕರಿಸಿದ್ದಾರೆ.

- Advertisement -

ತುಮಕೂರಿನಲ್ಲಿದ್ದ ಸಚಿವರ ಬಳಿ ಮಾಧ್ಯಮದ ಪ್ರತಿನಿಧಿಗಳು ಯಶ್ಪಾಲ್ ಸುವರ್ಣ ಹೇಳಿಕೆ ಬಗ್ಗೆ ಕೇಳಿದಾಗ, ‘ನಾನ್ಯಾಕೆ ಪ್ರತಿಕ್ರಿಯಿಸಬೇಕು’ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚಿಕ್ಕಮಗಳೂರು | ಉದ್ಯಾನವನಕ್ಕೆ ಮೀಸಲಿಟ್ಟ ಜಾಗದಲ್ಲಿ ಸಂತೆ ನಡೆಸಲು...

ಉದ್ಯಾನವನ ಮಾನವನ ಮಾನಸಿಕ ನೆಮ್ಮದಿ, ವಿನೋದ, ವಿಶ್ರಾಂತಿ ಹಾಗೂ ವನ್ಯಜೀವಿ ಹಾಗೂ ನೈಸರ್ಗಿಕ ಪರಿಸರವನ್ನು ಸಂರಕ್ಷಿಸಲು ಮೀಸಲಿಟ್ಟ ಒಂದು ಹಸಿರು ತಾಣ ಎಂದೇ ಹೇಳಬಹುದು. ಆಧುನಿಕ ವ್ಯವಸ್ಥೆಯಲ್ಲಿ ನಗರ ಜೀವನದ ಜಂಜಾಟದ ನಡುವೆ...

ವಿಜಯಪುರ | 80ರ ಗಡಿ ದಾಟಿದ ಬಿಳಿ ಜೋಳ,...

ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ ಬದುಕು, ಆಹಾರ ಸಂಸ್ಕೃತಿಯ ಅವಿಭಾಜ್ಯ ಭಾಗವಾಗಿರುವ ಜೋಳವೇ ಈಗ ಸಾಮಾನ್ಯ ಜನರ ಕೈಗೆಟುಕದ ವಸ್ತುವಾಗುತ್ತಿದೆ. ಕೆಲವೇ ದಿನಗಳ ಹಿಂದೆ ಕೆಜಿಗೆ...

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

‘ಅವರ ಹೇಳಿಕೆಗೆ ನಾನು ಪ್ರತಿಕ್ರಿಯಿಸಲ್ಲ. ಅವರಿಗೆ ಏನು ಹೇಳುವುದಕ್ಕೂ ಸ್ವಾತಂತ್ರ್ಯ ಇದೆ’ ಎಂದಷ್ಟೇ ಹೇಳಿದ್ದರು.

ಉಡುಪಿ ಕಾಲೇಜಿನ ವಿದ್ಯಾರ್ಥಿನಿ ಶೌಚೌಲಯಕ್ಕೆ ತೆರಳಿದ್ದಾಗ ವಿಡಿಯೋ ಚಿತ್ರೀಕರಣ ಘಟನೆ ಬಗ್ಗೆ ಸರ್ಕಾರ ಜವಾಬ್ದಾರಿಯಿಂದ ನಡೆದುಕೊಳ್ಳುತ್ತದೆ. ಘಟನೆಗೆ ರಾಜಕೀಯ ಬಣ್ಣ ಕೊಡುವ ಅಗತ್ಯವಿಲ್ಲ. ಸರ್ಕಾರ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ತನಿಖೆ ಮಾಡುತ್ತದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು.

‘ಸರ್ಕಾರ ನಡೆಸುವಂತವರು ಇಂತಹ ಘಟನೆಗಳನ್ನು ಲಘುವಾಗಿ ತೆಗೆದುಕೊಂಡಿಲ್ಲ. ಆದರೆ ಬಿಜೆಪಿಯವರು ಬೇರೆ ಅರ್ಥ, ವ್ಯಾಖ್ಯಾನದಲ್ಲಿ ಪ್ರತಿಕ್ರಿಯೆ ನೀಡುವುದು ಸರಿಯಲ್ಲ. ಜನರು ಕೊಟ್ಟ ತೀರ್ಪಿನಂತೆ ಜವಾಬ್ದಾರಿಯಿಂದ ಸರ್ಕಾರ ನಡೆಸುತ್ತೇವೆ’ ಎಂದರು.

ಇದನ್ನು ಓದಿದ್ದೀರಾ? ‘ಜಿ ಪರಮೇಶ್ವರ್ ಮಗ ಲಿಂಗ ಬದಲಾಯಿಸಿಕೊಂಡಿದ್ದು ಮಕ್ಕಳಾಟ’: ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ ಯಶ್ಪಾಲ್ ಸುವರ್ಣ

‘ಜನ ಕಾಂಗ್ರೆಸ್ ಪರವಾಗಿ ತೀರ್ಪು ಕೊಟ್ಟು 136 ಸೀಟು ಗೆಲ್ಲಿಸಿದ್ದಾರೆ. ಕಾಂಗ್ರೆಸ್ 5 ಗ್ಯಾರಂಟಿಗಳನ್ನು ಜಾರಿಗೆ ತರುವುದಾಗಿ ಮಾತು ಕೊಟ್ಟಿದ್ದೇವೆ, ಅದನ್ನು ಜಾರಿಗೆ ತರುತ್ತಿದ್ದೇವೆ. ಅದಕ್ಕೆ ಹೊಟ್ಟೆ ಉರಿಯಿಂದ ಬಿಜೆಪಿಯವರು ಹೀಗೆ ಮಾಡುತ್ತಿದ್ದಾರೆ. ಕೇವಲ 65 ಸೀಟು ಗೆದ್ದಿದ್ದರೂ ಇವರಿಗೆ ಬುದ್ಧಿ ಬಂದಿಲ್ಲ ಅಂತ ಅನಿಸುತ್ತಿದೆ’ ಎಂದು ಖಾರವಾಗಿಯೇ ಪ್ರತಿಕ್ರಿಯಿಸಿದರು.

ಈ ನಡುವೆ ತನ್ನ ಹೇಳಿಕೆ ವಿವಾದವಾಗುತ್ತಿದ್ದಂತೆಯೇ ಮತ್ತೆ ಹೇಳಿಕೆ ನೀಡಿ, ಸಮರ್ಥನೆ ಮಾಡಿಕೊಂಡಿರುವ ಉಡುಪಿಯ ಬಿಜೆಪಿ ಶಾಸಕ ಯಶ್ಪಾಲ್ ಸುವರ್ಣ, ಉಡುಪಿಯ ಮಕ್ಕಳನ್ನು ಮಕ್ಕಳಾಟ ಎಂದು ಉಲ್ಲೇಖಿಸಿ ಹೇಳಿಕೆ ನೀಡಿದ್ದಕ್ಕೆ ಈ ರೀತಿ ಹೇಳಿದ್ದೇನೆ. ಗೃಹ ಸಚಿವರಾಗಿ ಅವರು ಜವಾಬ್ದಾರಿಯುತವಾಗಿ ಮಾತನಾಡಬೇಕಿತ್ತು. ಸಂತ್ರಸ್ತ ಹೆಣ್ಣು ಮಕ್ಕಳ ನೋವು ಗೊತ್ತಾಗಲಿ ಅಂತ ಹೇಳಿದ್ದೇನೆಯೇ ಹೊರತು ಅವರ ವೈಯಕ್ತಿಕ ವಿಚಾರಗಳನ್ನು ಟೀಕೆ ಮಾಡಿದ್ದಲ್ಲ’ ಎಂದಿದ್ದಾರೆ.

ಬಿಜೆಪಿಯಲ್ಲಿ ವಿಕೃತ ಮನಸ್ಸಿನವರು ತುಂಬಿ ತುಳುಕುತ್ತಿದ್ದಾರೆ : ಬಿ.ಕೆ.ಹರಿಪ್ರಸಾದ್

ಡಾ.ಪರಮೇಶ್ವರ್​ ಕುಟುಂಬದ ಬಗ್ಗೆ ಯಶ್ಪಾಲ್​ ಹೇಳಿಕೆ ವಿಚಾರದ ಬಗ್ಗೆ ಖಾಸಗಿ ಸುದ್ದಿ ವಾಹಿನಿಯೊಂದರ ಜೊತೆಗೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್, ಗೃಹ ಸಚಿವರು ದಲಿತ ಸಮುದಾಯಕ್ಕೆ ಸೇರಿದವರು. ಅವರ ವಿರುದ್ಧ ಕೆಟ್ಟದಾಗಿ ಮಾತನಾಡಿ ಅವಹೇಳನ ಮಾಡಿದ್ದಾರೆ. ಬಿಜೆಪಿಯಲ್ಲಿ ವಿಕೃತ ಮನಸ್ಸಿನವರು ತುಂಬಿ ತುಳುಕುತ್ತಿದ್ದಾರೆ ಖುದ್ದು ಪ್ರಧಾನಿ ಮೋದಿಯವರು ಈ ಬಗ್ಗೆ ಗೃಹ ಸಚಿವರ ಬಳಿ ಕ್ಷಮೆ ಕೇಳಬೇಕು. ಯಶ್ಪಾಲ್‌ನಂಥವರು ಇಂತಹ ಹೇಳಿಕೆ ನೀಡಿ ಕೇವಲ ಪ್ರಚಾರ ಪಡೆದುಕೊಳ್ಳುತ್ತಿದ್ದಾರೆ. ಭಾರತದಲ್ಲಿ ಯಾರಾದರೂ ತಾಲಿಬಾನ್‌ಗಳಿದ್ದರೆ ಬಿಜೆಪಿಯ ಇಂತಹ ಶಾಸಕರು ಮತ್ತು ನಾಯಕರು ಎಂದು ಕಿಡಿಕಾರಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನವೆಂಬರ್ 26ರಿಂದ ರಾಜ್ಯಾದ್ಯಂತ ‘ಜನರ ದನಿ, ಸಂವಿಧಾನದ ದನಿ’ ಜಾಗೃತಿ ಅಭಿಯಾನ

ನವೆಂಬರ್ 26ರ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ, ದಲಿತ ಸಂಘರ್ಷ ಸಮಿತಿಗಳ...

ಉಡುಪಿ | ಮತದಾರರ ಹಕ್ಕು ರಕ್ಷಣೆಗೆ ಕಾಂಗ್ರೆಸ್‌ನಿಂದ ‘ವೋಟ್ ಬಚಾವೋ–ದೇಶ್ ಬಚಾವೋ’ ಆಂದೋಲನ

ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಮತದಾನದ ಹಕ್ಕುಗಳ ರಕ್ಷಣೆಗೆ ಅಖಿಲ ಭಾರತ...

ಯಾದಗಿರಿ | ಆಂಧ್ರಪ್ರದೇಶದಲ್ಲಿ ಪ್ರಜಾಪ್ರಭುತ್ವದ ಹಕ್ಕುಗಳ ದಮನದ ಆರೋಪ: ಎಐಬಿಎಸ್‌ಪಿ ತೀವ್ರ ಖಂಡನೆ

ಆಂಧ್ರಪ್ರದೇಶದಲ್ಲಿ ವಿರೋಧ ಪಕ್ಷಗಳ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಅಡ್ಡಿಪಡಿಸಲಾಗಿದೆ ಎಂಬ ಆರೋಪಗಳನ್ನು...

ಯಾದಗಿರಿ | ಮಲ್ಹಾರ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಯಾದಗಿರಿ ತಾಲೂಕಿನ ಮಲ್ಹಾರ ಗ್ರಾಮದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಅವರ...