ಜಿ20 ಶೃಂಗಸಭೆ | ಪ್ರಧಾನಿ ಮೋದಿ ಕುಳಿತ ಸ್ಥಳದಲ್ಲಿ ಪ್ರತ್ಯಕ್ಷಗೊಂಡ ‘ಭಾರತ್’ ಹೆಸರು

Date:

ವಿಶ್ವದ 20 ರಾಷ್ಟ್ರಗಳ ಗುಂಪಾದ ಜಿ20ಗೆ ಈ ವರ್ಷ ಭಾರತ ಆತಿಥ್ಯ ವಹಿಸುತ್ತಿದೆ. ಎರಡು ದಿನಗಳ ಜಿ20 ಶೃಂಗಸಭೆ ಇಂದು ದೆಹಲಿಯಲ್ಲಿ ಪ್ರಾರಂಭವಾಗಿದೆ.

- Advertisement -

ದೇಶದ ಹೆಸರು ಬದಲಾವಣೆಯ ಸುದ್ದಿ ಚರ್ಚೆಯ ಮಧ್ಯೆಯೇ ಪ್ರಧಾನಿ ನರೇಂದ್ರ ಮೋದಿಯವರು ಕುಳಿತ ಸ್ಥಳದಲ್ಲಿ ‘ಇಂಡಿಯಾ’ ಬದಲಿಗೆ ‘ಭಾರತ್’ ಹೆಸರು ನಾಮಫಲಕದಲ್ಲಿ ಪ್ರತ್ಯಕ್ಷಗೊಂಡಿದೆ. ಶೃಂಗಸಭೆಯಲ್ಲಿ ಪ್ರಧಾನಿ ಮೋದಿಯವರು ‘ಭಾರತ್’ ಅನ್ನು ಪ್ರತಿನಿಧಿಸುವ ನಾಯಕ ಎಂದು ಗುರುತಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಭೆಯಲ್ಲಿ ಭಾಷಣ ಆರಂಭಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಎಲ್ಲ ನಾಯಕರನ್ನು ಸ್ವಾಗತಿಸಿದ ನಂತರ ಮೊರೋಕ್ಕೋದಲ್ಲಿ ಇಂದು ಸಂಭವಿಸಿದ ಭೂಕಂಪದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದರು.

ಆ ಬಳಿಕ ಜಿ20 ಒಕ್ಕೂಟಕ್ಕೆ ಆಫ್ರಿಕನ್​ ಒಕ್ಕೂಟ ಸೇರ್ಪಡೆ ಬಗ್ಗೆ ಘೋಷಣೆ ಮಾಡಿದರು. ಆ ಮೂಲಕ ಜಿ20 ಒಕ್ಕೂಟದ 21ನೇ ದೇಶವಾಗಿ ಆಫ್ರಿಕನ್​ ಒಕ್ಕೂಟ ಸೇರ್ಪಡೆಯಾದಂತಾಗಿದೆ.

‘ಸಬ್ ಕಾ ಸಾತ್, ಸಬ್ ಕಾ ವಿಕಾಸ್’​ ಮಂತ್ರವನ್ನು ಪಠಿಸಬೇಕಿದೆ ಎಂದ ಪ್ರಧಾನಿ ಮೋದಿ, ಭಯೋತ್ಪಾದನೆ, ಸೈಬರ್ ದಾಳಿ ಭೀತಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚಿಂತಿಸಬೇಕಿದೆ ಎಂದು ಹೇಳಿದರು.

ಸೆಪ್ಟೆಂಬರ್ 9 ಮತ್ತು 10ರಂದು ಎರಡು ದಿನಗಳ ಕಾಲ ಜಿ20 ಒಕ್ಕೂಟದ ಸಭೆಯು ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದ | ಚುನಾವಣಾ ಆಯೋಗಕ್ಕೆ INDIA ವಿಪಕ್ಷಗಳ ಘೇರಾವ್; ರಾಹುಲ್‌, ಪ್ರಿಯಾಂಕಾ ಸೇರಿ ಹಲವರು ವಶಕ್ಕೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹಾಗೂ ಚುನಾವಣಾ ಅಕ್ರಮಗಳ...

ವಜಾ, ಕ್ಷಮೆ, ಮರುನೇಮಕ: ಸೋದರಳಿಯ ಆಕಾಶ್ ಆನಂದ್’ಗೆ ಮೂರನೇ ಬಾರಿಗೆ ಮಣೆಹಾಕಿದ ಮಾಯಾವತಿ

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಷ್ಟ್ರೀಯ ಸಂಚಾಲಕ ಹುದ್ದೆಯಿಂದ ಸೋದರಳಿಯ ಆಕಾಶ್...