ಗಣೇಶ ಉತ್ಸವ | ವಿದ್ಯಾರ್ಥಿಗಳು ಭಾಗಿಯಾಗದಂತೆ ತುಮಕೂರು ವಿವಿ ಸೂಚನೆ ಹೇಡಿತನದ ಪ್ರದರ್ಶನ: ವಿಜಯೇಂದ್ರ

Date:

Advertisements

ಹಿಂದೆಂದೂ ಘಟಿಸದ ರೀತಿಯಲ್ಲಿ ರಾಜ್ಯದಲ್ಲಿ ಗಣೇಶ ಉತ್ಸವದ ಮೆರವಣಿಗೆಗಳ ಮೇಲೆ ವ್ಯವಸ್ಥಿತವಾಗಿ ದಾಳಿನಡೆಯುತ್ತಿದೆ, ಹಿಂದೂ ವಿರೋಧಿ ಶಕ್ತಿಗಳು ಸಮಾಜದ ಶಾಂತಿ ಸುವ್ಯವಸ್ಥೆಗೆ ಭಂಗ ತಂದು ಅಶಾಂತಿಯ ವಾತಾವರಣ ಸೃಷ್ಟಿಸಲು ವ್ಯವಸ್ಥಿತವಾಗಿ ತೊಡಗಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆರೋಪಿಸಿದ್ದಾರೆ.

“ಸರಣಿ ಘಟನೆಗಳನ್ನು ಗಮನಿಸಿದರೆ ಹಿಂದೂ ಧಾರ್ಮಿಕ ಆಚಾರ-ವಿಚಾರಗಳನ್ನು ದಮನ ಮಾಡಲು ಒಂದು ವ್ಯವಸ್ಥಿತ ಷಡ್ಯಂತ್ರ ಈ ರಾಜ್ಯದಲ್ಲಿ ನಡೆಯುತ್ತಿರುವಂತೆ ಕಾಣುತ್ತಿದೆ. ಕಣ್ಣು, ಕಿವಿ ಇವೆರಡನ್ನು ಮುಚ್ಚಿಕೊಂಡಿರುವ ಕಾಂಗ್ರೆಸ್ ಸರ್ಕಾರದ ಕಾನೂನು ಸುವ್ಯವಸ್ಥೆ ತಿಳಿಗೇಡಿಗಳ ವ್ಯೂಹವನ್ನು ಭೇದಿಸಿ ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಸುವ ನಿಟ್ಟಿನಲ್ಲಿ ಗಮನ ನೀಡುವ ಬದಲು ಧಾರ್ಮಿಕ ಶ್ರದ್ಧೆಯ ಗಣೇಶೋತ್ಸವದ ಮೆರವಣಿಗೆಗಳನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿರುವುದು ನಾಚಿಕೆಗೇಡಿನ ಕ್ರಮವಾಗಿದೆ ಎಂದು” ಎಂದು ಎಕ್ಸ್‌ ತಾಣದಲ್ಲಿ ಬರೆದುಕೊಂಡಿದ್ದಾರೆ.

“ಎಷ್ಟರಮಟ್ಟಿಗೆ ಪೊಲೀಸ್ ವ್ಯವಸ್ಥೆ ಪಕ್ಷಪಾತಿ ಹಾಗೂ ನಿಷ್ಕ್ರಿಯವಾಗಿದೆ ಎಂದರೆ, ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವರು ತುಮಕೂರಿನ ಗಣೇಶೋತ್ಸವದ ಮೆರವಣಿಗೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸದಂತೆ ನಿರ್ಬಂಧಿಸುವ ಹೇಡಿತನವನ್ನು ಪ್ರದರ್ಶಿಸಿದ್ದಾರೆ” ಎಂದು ಕಿಡಿಕಾರಿದ್ದಾರೆ.

Advertisements

“ವಿದ್ಯೆಗೆ ಅಧಿಪತಿ ಗಣಪತಿ, ವಿದ್ಯೆ ದಯಪಾಲಿಸುವ ಗಣೇಶನನ್ನು ಶಾಲಾ-ಕಾಲೇಜುಗಳಲ್ಲಿ ಪೂಜಿಸುವುದು, ಮೆರವಣಿಗೆ ನಡೆಸುವುದು ಶತಮಾನಗಳಿಂದ ನಡೆದು ಬಂದಿರುವ ಪ್ರತೀತಿ. ವಿದ್ಯಾರ್ಥಿಗಳ ಧಾರ್ಮಿಕ ನಂಬಿಕೆ ಶೈಕ್ಷಣಿಕ ಶ್ರದ್ಧೆಯನ್ನು ವಿಚಲಿತಗೊಳಿಸಲು ಯತ್ನಿಸುವ ಕ್ರಮ ಇದಾಗಿದೆ” ಎಂದು ಟೀಕಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಜ್ವಲ್‌-ಮುನಿರತ್ನ ತೋರಿದ ಪಾತಕದ ಮಾದರಿ ಎಂಥವು? ಮಿಕ್ಕವರು ಅನುಸರಿಸಿದರೆ ಹೆಣ್ಣುಮಕ್ಕಳ ಪಾಡೇನು?

“ಒಂದು ಕಡೆ ಧಾರ್ಮಿಕ ಆಚರಣೆಯಲ್ಲಿ ತೊಡಗುವವರಿಗೆ ರಕ್ಷಣೆ ನೀಡಲಾಗದೆ, ಮತ್ತೊಂದು ಕಡೆ ಹಿಂದೂ ವಿರೋಧಿ ದುಷ್ಕರ್ಮಿಗಳ ಷಡ್ಯಂತ್ರವನ್ನು ಪರೋಕ್ಷವಾಗಿ ಬೆಂಬಲಿಸುವಂತೆ ಪೊಲೀಸ್ ವ್ಯವಸ್ಥೆ ನಡೆದುಕೊಳ್ಳುತ್ತಿದೆ. ಈ ನಡವಳಿಕೆಯನ್ನು ನಾವು ಸಹಿಸಿಕೊಳ್ಳುತ್ತಿದ್ದೇವೆ ಎಂದರೆ ಅದು ನಮ್ಮ ದೌರ್ಬಲ್ಯವಲ್ಲ ಎಂಬ ಅಂಶ ಸರ್ಕಾರದ ವ್ಯವಸ್ಥೆಗೆ ತಿಳಿದಿರಲಿ. ತಾಳ್ಮೆ, ಸಂಯಮ ನಮ್ಮ ಸಂಸ್ಕಾರ ಹೌದು, ಅಂತೆಯೇ ದಬ್ಬಾಳಿಕೆಯನ್ನು ಹೆಮ್ಮೆಟ್ಟಿಸುವುದು ನಮ್ಮ ಸ್ವಾಭಿಮಾನದ ಸಂಕೇತವೂ ಎಂಬುದು ಈ ಸರ್ಕಾರಕ್ಕೆ ತಿಳಿದಿರಲಿ” ಎಂದಿದ್ದಾರೆ.

“ಮುಗ್ಧ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಪರೋಕ್ಷವಾಗಿ ದ್ವೇಷದ ಭಾವನೆ ಬಿತ್ತುವ ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವರು ಹೊರಡಿಸಿರುವ ಸುತ್ತೋಲೆ ಶಾಂತಿ ಮೂಡಿಸುವ ಬದಲಾಗಿ ವಿದ್ಯಾರ್ಥಿಗಳ ಸಂಯಮಕ್ಕೆ ಭಂಗ ತರುತ್ತದೆ, ಅಸಹನೆಯನ್ನು ಹುಟ್ಟು ಹಾಕುತ್ತದೆ ಎಂಬ ವಿವೇಚನೆ ವಿ.ವಿ. ಆಡಳಿತ ಬಳಸದಿರುವುದು ವಿಪರ್ಯಾಸವೆನಿಸಿದೆ” ಎಂದಿದ್ದಾರೆ.

“ಈ ಕೂಡಲೇ ವಿಶ್ವವಿದ್ಯಾನಿಲಯವು ಸುತ್ತೋಲೆಯನ್ನು ವಾಪಾಸ್ ತೆಗೆದುಕೊಳ್ಳಲಿ. ಸ್ವ ಇಚ್ಛೆಯಿಂದ ಹಾಗೂ ಧಾರ್ಮಿಕ ಶ್ರದ್ಧೆಯಿಂದ ವಿದ್ಯಾರ್ಥಿಗಳು ಉತ್ಸವದಲ್ಲಿ ಭಾಗವಹಿಸುವುದನ್ನು ತಡೆಯುವ ಪ್ರಯತ್ನವನ್ನು ಈ ಕೂಡಲೇ ನಿಲ್ಲಿಸಲಿ” ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X