ಗ್ಯಾಸ್‌ ಸಿಲಿಂಡರ್ ದರ ಇಳಿಕೆ ಚುನಾವಣೆ ಗಿಮಿಕ್: ಜಗದೀಶ್‌ ಶೆಟ್ಟರ್‌ ಟೀಕೆ

Date:

  • ‘ಮೋದಿಗೆ ಜನರ ಬಗ್ಗೆ ಕಾಳಜಿ ಇದ್ದರೆ ಕನಿಷ್ಠ 500 ರೂ. ಇಳಿಸಬೇಕಿತ್ತು’
  • ‘ಚುನಾವಣೆ ಹಿನ್ನೆಲೆಯಲ್ಲಿ ಕೆಲವು ಉಚಿತ ಯೋಜನೆ ಘೋಷಣೆಯಾಗಬಹುದು’

ಮುಂದಿನ ಲೋಕಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಗಿಮಿಕ್ ಮಾಡಲು ಕೇಂದ್ರ ಸರ್ಕಾರ ಗ್ಯಾಸ್‌ ಸಿಲಿಂಡರ್ ದರ ಇಳಿಸಿದೆ. ಡಿಸೆಂಬರ್‌ ವೇಳೆಗೆ ಲೋಕಸಭಾ ಚುನಾವಣೆ ನಡೆಯುವ ಸಂಭವವಿದೆ. ಆದ್ದರಿಂದ ದರ ಇಳಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ವಿಧಾನ ಪರಿಷತ್‌ ಸದಸ್ಯ ಜಗದೀಶ್ ಶೆಟ್ಟರ್ ಟೀಕಿಸಿದರು.

ಹುಬ್ಬಳ್ಳಿಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ಸಾಂಕೇತಿಕವಾಗಿ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೇ ವರ್ಷದ ಕೊನೆಗೆ ಲೋಕಸಭಾ ಚುನಾವಣೆ ನಡೆಯುವ ಸಾಧ್ಯತೆ ಇದೆ. ಅಷ್ಟರೊಳಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಲವು ದರಗಳನ್ನು ಇಳಿಸಬಹುದು. ಹಾಗೆಯೇ ಕೆಲವು ಉಚಿತ ಯೋಜನೆ ಘೋಷಣೆ ಆಗಬಹುದು” ಎಂದರು.

“ಸಿಲಿಂಡರ್ ದರವನ್ನು ಈಗಾಗಲೇ ಕೇಂದ್ರ ಸರ್ಕಾರ ಸಾವಿರ ರೂಪಾಯಿ ಹೆಚ್ಚಿಸಿದೆ. ಈಗ ಕೇವಲ 200 ರೂಪಾಯಿ ಇಳಿಸಿದರೆ ಏನು ಉಪಯೋಗ? ಮೋದಿ ಅವರಿಗೆ ಜನರ ಬಗ್ಗೆ ಕಾಳಜಿ ಇದ್ದರೆ ಕನಿಷ್ಠ 500 ರೂ. ಇಳಿಸಬೇಕಿತ್ತು” ಎಂದು ಆಗ್ರಹಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರಕ್ಕೆ ನೂರು, ಸಮಸ್ಯೆ ನೂರಾರು

“ಚುನಾವಣೆಯಲ್ಲಿ ನೀಡಿದ ಪ್ರಣಾಳಿಕೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಅನುಷ್ಠಾನಗೊಳಿಸುತ್ತಿದೆ. ಅದರಂತೆ ಈಗಾಗಲೇ ಮೂರು ಯೋಜನೆ ಜಾರಿಯಾಗಿದ್ದು, ಇಂದು ನಾಲ್ಕನೇ ಯೋಜನೆ ಗೃಹಲಕ್ಷ್ಮೀಗೆ ಚಾಲನೆ ಸಿಕ್ಕಿದೆ. ಈ ಗ್ಯಾರಂಟಿ ಯೋಜನೆಗಳಿಂದ ಬಡವರು, ದೀನ ದಲಿತರು, ಮಧ್ಯಮ ವರ್ಗ ಸೇರಿ ಜನಸಾಮಾನ್ಯರಿಗೆ ಅನುಕೂಲವಾಗಿದೆ” ಎಂದರು.

“ಕಾಂಗ್ರೆಸ್ ಗ್ಯಾರಂಟಿಗಳ ಅನುಷ್ಠಾನದಿಂದ ಹತಾಶೆಗೊಂಡಿರುವ ಬಿಜೆಪಿ, ಇನ್ನಿಲ್ಲದ ಆರೋಪಗಳನ್ನು ಮಾಡುತ್ತಿದೆ. ರಾಜ್ಯದಲ್ಲಿ ಬಿಜೆಪಿ ಅಧೋಗತಿಗೆ ಹೋಗಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರ ಸೇರಿ ರಾಜ್ಯದಲ್ಲಿ 15ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವು ಗೆಲ್ಲಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ನಟ ದ್ವಾರಕೀಶ್ ನಿಧನಕ್ಕೆ ಶಿವರಾಜ್‌ಕುಮಾರ್ ಸಂತಾಪ

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಅವರು ಮಂಗಳವಾರ ನಿಧನರಾದರು....

ದಾವಣಗೆರೆ | ಲೋಕಸಭಾ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸಿಪಿಐ ಬೆಂಬಲ ಘೋಷಣೆ

ದೇಶಾದ್ಯಂತ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಕಮ್ಯೂನಿಸ್ಟ್ ಪಕ್ಷವು ಇಂಡಿಯಾ ಒಕ್ಕೂಟದ...

ವಿಜಯೇಂದ್ರ, ಸಿಟಿ ರವಿ, ಪಿ.ರಾಜೀವ್‌ನಿಂದ ಬಿಜೆಪಿ ಹಾಳಾಗುತ್ತಿದೆ: ಮಾಲೀಕಯ್ಯ ಗುತ್ತೇದಾರ ಕಿಡಿ

ಸಹೋದರ ನಿತಿನ್ ಗುತ್ತೇದಾರ ಅವರನ್ನು ಬಿಜೆಪಿಗೆ ಸೇರಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಸಚಿವ...