ಸಾವಿರ ದರೋಡೆ, ಇನ್ನೂರು ಉಡುಗೊರೆ : ಇದು ಹೊಸ ಜುಮ್ಲಾ ಎಂದ ನಟ ಪ್ರಕಾಶ್ ರಾಜ್

Date:

  • ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ದರ ರೂ. 200 ಇಳಿಸಿದ ಕೇಂದ್ರ ಸರ್ಕಾರ
  • ತಿಂಗಳ ಹಿಂದೆ ಆನ್‌ಲೈನ್ ತರಗತಿಯಲ್ಲಿ ಶಿಕ್ಷಕ ನೀಡಿದ್ದ ಹೇಳಿಕೆ ಕೂಡ ವೈರಲ್

2024ರ ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಕೇಂದ್ರದಲ್ಲಿ ಅಧಿಕಾರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವು ಎಲ್ಲ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ₹200 ರೂಪಾಯಿ ಇಳಿಕೆ ಮಾಡಿರುವುದಾಗಿ ಘೋಷಿಸಿದೆ.

ಓಣಂ ಮತ್ತು ರಕ್ಷಾಬಂಧನ್ ಹಬ್ಬದ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಇದು ವಿಶೇಷ ಉಡುಗೊರೆಯಾಗಿ ದರ ಕಡಿಮೆ ಮಾಡಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ ಎಂದು ಹೇಳಿದೆಯಾದರೂ, ಚುನಾವಣೆ ಸಮೀಪಿಸುತ್ತಿರುವ ವೇಳೆಯಲ್ಲಿಯೇ ತೆಗೆದುಕೊಂಡಿರುವ ಈ ನಿರ್ಧಾರವು ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ಇದು ಚರ್ಚೆಗೆ ಎಡೆ ಮಾಡಿಕೊಟ್ಟಿದೆ.

ಕೇಂದ್ರದ ನಡೆಯನ್ನು ಟೀಕಿಸಿರುವ ಬಹುಭಾಷಾ ನಟ ಪ್ರಕಾಶ್ ರಾಜ್, ‘ಇದು ಹೊಸ ಜುಮ್ಲಾ. ಸಾವಿರ ದರೋಡೆ ಮಾಡಿ, ಇನ್ನೂರು ಉಡುಗೊರೆಯಾಗಿ ಹಿಂತಿರುಗಿಸುವುದು’ ಎಂದು ಟ್ವೀಟ್ ಮಾಡುವ ಮೂಲಕ ಟಾಂಗ್ ನೀಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

200 ರೂ ಕಡಿಮೆ ಮಾಡಿರುವ ಬಗ್ಗೆ ಕೇಂದ್ರ ಸರ್ಕಾರದ ನಿರ್ಧಾರವನ್ನು ಅನುರಾಗ್ ಠಾಕೂರ್ ಸುದ್ದಿಗೋಷ್ಠಿಯಲ್ಲಿ ಘೋಷಿಸಿದ್ದರು. ಈ ಹೇಳಿಕೆಯನ್ನು ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್‌ ಅನ್ನು ರೀಟ್ವೀಟ್ ಮಾಡಿರುವ ನಟ ಪ್ರಕಾಶ್ ರಾಜ್, ‘ಇದು ಹೊಸ ಜುಮ್ಲಾ’ ಎಂದು ಟೀಕಿಸಿದ್ದಾರೆ.

ಈ ನಡುವೆ ಡಾ. ನಿಮೋ ಯಾದವ್ ಎಂಬ ಟ್ವಿಟರ್, ಅನ್ ಅಕಾಡೆಮಿ ಆನ್‌ಲೈನ್ ತರಗತಿ ನಡೆಸುತ್ತಿದ್ದ ಸಂದರ್ಭದಲ್ಲಿ ಪ್ರೊಫೆಸರ್ ಒಬ್ಬರು ಗ್ಯಾಸ್ ದರಕ್ಕೆ ಸಂಬಂಧಿಸಿ ಕಳೆದ ತಿಂಗಳು ನೀಡಿದ್ದ ಹೇಳಿಕೆಯನ್ನು ಟ್ವೀಟ್ ಮಾಡಿದ್ದಾರೆ. ತಿಂಗಳ ಹಿಂದೆಯೇ ದರ ಇಳಿಕೆಯ ಬಗ್ಗೆ ಈ ಪ್ರೊಫೆಸರ್ ಭವಿಷ್ಯ ನುಡಿದಿದ್ದರು ಎಂದು ಬರೆದುಕೊಂಡಿದ್ದಾರೆ.

ಟ್ವೀಟ್‌ನಲ್ಲಿ, ‘ಇವರು ಅವಧ್ ಓಜಾ. ಅನ್ ಅಕಾಡೆಮಿ ಆನ್‌ಲೈನ್ ತರಗತಿಯ ಶಿಕ್ಷಕ. ವಿಶ್ವದ ಇತಿಹಾಸವನ್ನು ಕಲಿಸುತ್ತಾರೆ. 2024ರ ಚುನಾವಣೆ ಸಮೀಪ ಬರುತ್ತಿದ್ದಂತೆ, ಮುಂಬರುವ ತಿಂಗಳುಗಳಲ್ಲಿ ಸರ್ಕಾರವು ಎಲ್‌ಪಿಜಿ ಸಿಲಿಂಡರ್ ಮತ್ತು ಇಂಧನದ ಬೆಲೆಗಳನ್ನು ಕಡಿಮೆ ಮಾಡುವುದನ್ನು ನೀವು ನೋಡುತ್ತೀರಿ. ಸರ್ಕಾರವು ಜನರನ್ನು ಮೂರ್ಖರನ್ನಾಗಿ ಮಾಡುವುದು ಹೀಗೆ ಎಂದಿದ್ದರು. ಸರ್ಕಾರವು ಎಲ್‌ಪಿಜಿ ಸಿಲಿಂಡರ್‌ನ ಬೆಲೆಯಲ್ಲಿ ₹200 ರಷ್ಟು ಕಡಿಮೆ ಮಾಡಿದೆ. ಅವರ ಮಾತು ಇಂದು ನಿಜವಾಗಿದೆ” ಎಂದು ಬರೆದುಕೊಂಡಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇವದಾರಿ ಉಕ್ಕು ಗಣಿಗಾರಿಕೆ | ಆರು ವರ್ಷಗಳ ಹಿಂದೆ ವಿರೋಧ – ಇಂದು ಒಪ್ಪಿಗೆ; ಇದು ಕೇಂದ್ರ ಸಚಿವ ಎಚ್‌ಡಿಕೆ ವರಸೆ!

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಂಸದರಾಗಿ ಆಯ್ಕೆಯಾಗಿದ್ದು, ಮೋದಿ ನೇತೃತ್ವದ ಎನ್‌ಡಿಎ...

ಪೋಕ್ಸೋ ಪ್ರಕರಣ | ಬಿಎಸ್‌ವೈ ಬಂಧಿಸದಂತೆ ಹೈಕೋರ್ಟ್‌ ಮಧ್ಯಂತರ ಆದೇಶ

ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು...

ಬಿಎಸ್‌ವೈ ಪೋಕ್ಸೊ | ಕಾನೂನು ರಕ್ಷಕರಿಂದಲೇ ಕಾನೂನು ಉಲ್ಲಂಘನೆ: ವಕೀಲ ಎಸ್‌ ಬಾಲನ್ ಆರೋಪ

"ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ವಿರುದ್ಧ ಗಂಭೀರವಾಗಿರುವ ಪೋಕ್ಸೊ ಪ್ರಕರಣ...

ಕಾಂಗ್ರೆಸ್ ಪರ ಕೆಲಸ ಮಾಡಿದ್ದಕ್ಕೆ ಠಾಣೆಗೆ ಶಾಮಿಯಾನ ಹಾಕಿ ನಟ ದರ್ಶನ್‌ಗೆ ರಕ್ಷಣೆಯೇ: ಶೋಭಾ ಕರಂದ್ಲಾಜೆ ಪ್ರಶ್ನೆ

ಕೊಲೆ ಪ್ರಕರಣದಲ್ಲಿ ನಟ ದರ್ಶನ ಬಂಧನವಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ...